ಶನಿವಾರಸಂತೆ: ದುಂಡಳ್ಳಿ ಮಾದರೆ ಗ್ರಾಮದಲ್ಲಿ ವಿಶೇಷ ಅರಿವು
Team Udayavani, May 16, 2019, 6:12 AM IST
ಶನಿವಾರಸಂತೆ: ಸುಪದ ದುಂಡಳ್ಳಿ ಗ್ರಾ.ಪಂ.ವ್ಯಾಪ್ತಿಯ ಮಾದರೆ ಗ್ರಾಮದಲ್ಲಿ ಕುಶಾಲನಗರ ಚೈಲ್ಡ್ ಲೈನ್ ಸಂಸ್ಥೆ ಮತ್ತು ಶನಿವಾರಸಂತೆ ಪೊಲೀಸ್ ಠಾಣೆ ವತಿುಂದ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಮತ್ತು ಗ್ರಾಮಸ್ಥರಿಗೆ ವಿಶೇಷ ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.
ಶನಿವಾರಸಂತೆ ಎಎಸ್‌ಐ ಬೋಪಣ್ಣ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕುರಿತಾಗಿ ಮಾಹಿತಿ ನೀಡಿ-ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ, ಲೈಗಿಂಕ ದೌರ್ಜನ್ಯವನ್ನು ತಡೆಗಟ್ಟುವ ಸಲುವಾಗಿ 2012 ರಲ್ಲಿ ಆಗಿನ ಕೇಂದ್ರ ಸರಕಾರ ಪೋಕೊÕ ಕಾಯಿದೆಯನ್ನು ಜಾರಿಗೊಳಿಸಿದೆ ಎಂದರು. ಮಕ್ಕಳ ಮೇಲೆ ಯಾವುದೆ ರೀತಿಯ ಲೈಗಿಂಕ ದೌರ್ಜನ್ಯ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಹತ್ತಿರದ ಪೊಲೀಸರಿಗೆ ಮತ್ತು ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಮಾಹಿತಿ ನೀಡಬೇಕು, ಮಕ್ಕಳನ್ನು ಲೈಗಿಂಕ ದೌರ್ಜನ್ಯದಿಂದ ರಕ್ಷಣೆ ಮಾಡುವಲ್ಲಿ ಸಾರ್ವಜನಿಕರ ಪಾತ್ರವೂ ಮುಖ್ಯವಾಗಿರುತ್ತದೆ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುವ ಪ್ರಕರಣಗಳ ಬಗ್ಗೆ ಪೊಲೀಸರಿಗೆ ಮಾತಿ ನೀಡಿದ ಪೊಲೀಸರು ಆರೋಪಿಗಳ ರುದ್ದ ಪ್ರಕರಣ ಕ್ರಮಕೈಗೊಂಡು ಪೋಕೊÕà ಕಾುದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂದಿಸಲಾಗುತ್ತದೆ ಮತ್ತು ಈ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಕಠಿನ ಶಿಕ್ಷೆ ವಿಧಿಸುತ್ತದೆ ಎಂದರು.
ಬಾಲಕಾರ್ಮಿಕ ತಡೆ ಕಾುದೆ ಕುರಿತು ಕುಶಾಲನಗರ ಚೈಲ್ಡ್‌ಲೈನ್ ಸಂಸ್ಥೆ ತಾಲೂಕು ಕಾರ್ಯಕರ್ತೆ ಬಿ.ಆರ್. ಕುಮಾರಿ ಮಾಹಿತಿ ನೀಡಿ-ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಅಪರಾಧವಾಗುತ್ತದೆ, 14 ವರ್ಷದ ಒಳಗಿನ ಮಕ್ಕಳನ್ನು ಮನೆ ಕೆಲಸದಲ್ಲಿ, ಗದ್ದೆ ತೋಟಗಳಲ್ಲಿ ಹೊಟೇಲು ಕ್ಯಾಂಟೀನುಗಳಲ್ಲಿ, ಕಾರ್ಖಾನೆಗಳಲ್ಲಿ ಮಾಲಕರು ದುಡಿಸಿಕೊಳ್ಳುವುದು ಅಪರಾಧವಾಗುತ್ತದೆ ಇದರ ಮಕ್ಕಳನ್ನು ದುಡಿಸಿಕೊಳ್ಳುವುದನ್ನು ದುಡಿಸಿಕೊಳ್ಳಖುವುದನ್ನು ತಡೆಗಟ್ಟುವ ಉದ್ದೇಶದಿಂದ ಸರಕಾರ ಬಾಲ ಕಾುìಕ ನಿಷೇಧ ಕಾಯಿದೆಯನ್ನು ಅನುಷ್ಠಾನಗೊಳಿಸಿದೆ ಎಂದರು. ಬಿûಾಟನೆ ಮಾಡುವ ಮಕ್ಕಳು, ಅನಾಥ ಮಕ್ಕಳನ್ನು ರಕ್ಷಣೆ ಮಾಡಲು ಚೈಲ್ಡ್ ಲೈನ್ ಸಂಸ್ಥೆ ಕಾರ್ಯನಿರ್ವಸುತ್ತಿದೆ, ಬಾಲ ಕಾರ್ಮಿಕರು ಸೇರಿದಂತೆ ಮಕ್ಕಳನ್ನು ರಕ್ಷಣೆ ಮಾಡಿ ಅವರಿಗೆ ಶಿಕ್ಷಣ ಕೊಡಿಸುವ ಗುರುತರ ಜವಾಬ್ದಾರಿ ಸಾರ್ವಜನಿಕರ ಮೇಲಿದೆ ಈ ಕಾರ್ಯದಲ್ಲಿ ಧ ಸಂಘ-ಸಂಸ್ಥೆಯವರು ಕೈಜೋಡಿಸುವಂತೆ ಮನವಿಮಾಡಿದರು.
ಚೈಲ್ಡ್ ಲೈನ್ ಸಂಸ್ಥೆಯ ಮಂಜುಳ ಮಕ್ಕಳ ಸಹಾಯವಾಣಿ ಕುರಿತು ಮಾತನಾಡಿ-ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಬಾಲ ಕಾರ್ಮಿಕರು, ಅನಾಥ ಮಕ್ಕಳು ಸಹಿತ ಮಕ್ಕಳ ರಕ್ಷಣೆ ಮಾಡುವ ಉದ್ದೇಶದಿಂದ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಮಕ್ಕಳ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಪ್ರಕರಣಗಳು ಕಂಡುಬಂದ ಕೂಡಲೇ ಸಾರ್ವಜನಿಕರು ಚೈಲ್ಡ್‌ಲೈನ್ ಸಂಸ್ಥೆ-1098 ಸಂಖ್ಯೆಗೆ ಉಚಿತ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದರು. ಪೊಲೀಸ್ ಸಿಬಂದಿ ಗೋವಿಂದ, ಸರಿತಾ ಮಾಹಿತಿ ನೀಡಿದರು. ಚೈಲ್ಡ್ ಲೈನ್ ಸಂಸ್ಥೆಯ ಕುಸುಮಾ, ಸ್ತ್ರೀಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.