ಸರ್ಕಾರಿ ಕಚೇರಿಗಳಲ್ಲಿ ಹಾಳಾದ ಫಿಲ್ಟರ್‌

ಕುಡಿಯುವ ನೀರಿಗಾಗಿ ಹೋಟೆಲ್ ಮೊರೆ ಹೋದ ಜನತೆ •ದುರಸ್ತಿಗೆ ಸ್ಥಳೀಯರ ಒತ್ತಾಯ

Team Udayavani, May 16, 2019, 11:53 AM IST

16-May-12

ಸಿರುಗುಪ್ಪ: ತಾಪಂ ಕಚೇರಿಯಲ್ಲಿರುವ ಫಿಲ್ಟರ್‌ನ ಅಶುದ್ಧ ನೀರು ಕುಡಿಯುತ್ತಿರುವ ಸಾರ್ವಜನಿಕರು.

ಸಿರುಗುಪ್ಪ: ನಗರದ ತಾಪಂ ಕಚೇರಿಯಲ್ಲಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಶುದ್ಧ ಕುಡಿಯುವ ನೀರಿನ ಫಿಲ್ಟರ್‌ಗಳನ್ನು ಅಳವಡಿಸಲಾಗಿದೆ. ಆದರೆ ಈ ಫಿಲ್ಟರ್‌ಗಳಲ್ಲಿ ನೀರು ಶುದ್ಧೀಕರಣಗೊಳ್ಳದೆ ಕಚ್ಚಾ ನೀರು ಬರುತ್ತಿದ್ದು, ಈ ನೀರನ್ನು ಕುಡಿದವರು ಬೋರ್‌ವಲ್ ನೀರಿಗಿಂತ ಈ ಫಿಲ್ಟರ್‌ನ ನೀರು ಅಶುದ್ಧವಾಗಿವೆ ಎಂದು ಶಾಪ ಹಾಕುತ್ತಿದ್ದಾರೆ.

ನಗರದಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸಾರ್ವಜನಿಕರು ಮತ್ತು ಶಿಕ್ಷಕರು ತಮ್ಮ ಕೆಲಸ ಕಾರ್ಯಗಳಿಗಾಗಿ ನಿತ್ಯವೂ ಬರುತ್ತಿದ್ದು, ಕಚೇರಿಗೆ ಬರುವ ಜನರಿಗೆ ಶುದ್ಧ ಕುಡಿಯುವ ನೀರು ಸಿಗಬೇಕೆನ್ನುವ ಉದ್ದೇಶದಿಂದ ಒಂದೂವರೆ ವರ್ಷದ ಹಿಂದೆ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಫಿಲ್ಟರ್‌ನ್ನು ರೂ.1ಲಕ್ಷ 80ಸಾವಿರ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಆದರೆ ಈ ಫಿಲ್ಟರ್‌ಗಳು ನಿರ್ಮಾಣವಾದ ವರ್ಷದೊಳಗೆ ಕಾರ್ಯನಿರ್ವಹಿಸದೆ ಕೆಟ್ಟುನಿಂತಿವೆ. ಕಚೇರಿಗೆ ಬರುವ ಶಿಕ್ಷಕರು ಮತ್ತು ಸಾರ್ವಜನಿಕರು ನೀರು ಕುಡಿಯಲು ಹೋಟೆಲ್ ಹೋಗಬೇಕಾಗಿದೆ.

ಇನ್ನೂ ತಾಪಂ ಕಚೇರಿಯಲ್ಲಿ 2 ವರ್ಷದ ಹಿಂದೆ ಶುದ್ಧ ಕುಡಿಯುವ ನೀರನ್ನು ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಮತ್ತು ತಮ್ಮ ಕೆಲಸ ಕಾರ್ಯಗಳಿಗಾಗಿ ನಿತ್ಯವೂ ವಿವಿಧ ಗ್ರಾಮಗಳಿಂದ ಬರುವ ಜನಪ್ರತಿನಿಧಿಗಳು, ಸಾರ್ವಜನಿಕರಿಗೆ ಒದಗಿಸಲು ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಫಿಲ್ಟರ್‌ ಕೆಟ್ಟು ಹೋಗಿದ್ದು, ಕಚ್ಚಾನೀರು ಪೂರೈಕೆಯಾಗುತ್ತಿದ್ದು, ಈ ಕಚೇರಿಗೆ ಬರುವವರು ಶುದ್ಧ ಕುಡಿಯುವ ನೀರು ಎನ್ನುವ ಉದ್ದೇಶದಿಂದ ಈ ನೀರನ್ನು ಕುಡಿಯುತ್ತಿದ್ದಾರೆ. ಆದರೆ ನೀರು ಶುದ್ಧೀಕರಣಗೊಳ್ಳದೆ ಇರುವುದರಿಂದ ಈ ನೀರು ಒಂದು ರೀತಿಯ ಕೆಟ್ಟವಾಸನೆ ಬರುತ್ತಿದ್ದು, ನೀರು ಕುಡಿದರೆ ವಾಂತಿ ಬರುವ ಅನುಭವವಾಗುತ್ತಿರುವುದರಿಂದ ಒಂದು ಬಾರಿ ನೀರು ಕುಡಿದವರು ಮತ್ತೂಮ್ಮೆ ಈ ಫಿಲ್ಟರ್‌ನ ನೀರು ಕುಡಿಯಲು ಮುಂದಾಗುತ್ತಿಲ್ಲ.

ಆದರೂ ಈ ಫಿಲ್ಟರ್‌ನ್ನು ರಿಪೇರಿ ಮಾಡಿಸಲು ತಾ.ಪಂ ಅಧಿಕಾರಿಗಳು ಮುಂದಾಗಿಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಫಿಲ್ಟರ್‌ ಇದ್ದರೂ ಶುದ್ಧ ನೀರು ಸಿಗದ ಕಾರಣ ಕಚೇರಿ ಸಿಬ್ಬಂದಿ ಮತ್ತು ಸಾರ್ವಜನಿಕರು ಕುಡಿಯುವ ನೀರಿಗಾಗಿ ಹೋಟೆಲ್ಗಳ ಮೊರೆ ಹೋಗುತ್ತಿದ್ದಾರೆ.

ತಾಪಂ ಕಚೇರಿಯ ರಿಪೇರಿ ಕಾರ್ಯ ಇನ್ನೊಂದು ವಾರದಲ್ಲಿ ಮುಗಿಯುತ್ತಿದ್ದು, ನಂತರ ಶುದ್ಧ ಕುಡಿಯುವ ನೀರಿನ ಫಿಲ್ಟರ್‌ನ್ನು ರಿಪೇರಿ ಮಾಡಿಸಿ ಸಿಬ್ಬಂದಿಗೆ ಮತ್ತು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರೋದಗಿಸಲು ಕ್ರಮ ಕೈಗೊಳ್ಳಲಾಗುವುದು.
ಶಿವಪ್ಪ ಸುಬೇದಾರ್‌, ತಾಪಂ, ಇಒ.

ಕೆಟ್ಟು ನಿಂತಿರುವ ಕುಡಿಯುವ ನೀರಿನ ಫಿಲ್ಟರ್‌ನ್ನು ರಿಪೇರಿ ಮಾಡಿಸಿ ಕಚೇರಿ ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಶುದ್ಧ ನೀರೋದಗಿಸಲು ಕ್ರಮ ಕೈಗೊಳ್ಳಲಾಗುವುದು.
ಪಿ.ಡಿ. ಭಜಂತ್ರಿ,
ಕ್ಷೇತ್ರ ಶಿಕ್ಷಣಾಧಿಕಾರಿ.

ಟಾಪ್ ನ್ಯೂಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.