ಮಹಿಳಾ ಕಾರ್ಮಿಕರಿಗೆ ಸೌಲಭ್ಯ ದೊರಕಲಿ

ಕಾರ್ಮಿಕ ಕಾನೂನು ಅರಿವು ಕಾರ್ಯಕ್ರಮ•ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಶ್ರಮ ಅಪಾರ

Team Udayavani, May 16, 2019, 1:04 PM IST

16-May-18

ದಾವಣಗೆರೆ: ಕರೂರು ಔದ್ಯಮಿಕ ಪ್ರದೇಶದ ಮಯೂರ ಆಪರೆಲ್ಸ್ನಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಈ. ಚಂದ್ರಕಲಾ ಉದ್ಘಾಟಿಸಿದರು.

ದಾವಣಗೆರೆ: ವಿವಿಧ ಕ್ಷೇತ್ರಗಳಲ್ಲಿ ತಮ್ಮ ಆರ್ಥಿಕ ಸಬಲತೆಗೆ ದುಡಿಯುತ್ತಿರುವ ಮಹಿಳಾ ಕಾರ್ಮಿಕರಿಗೆ ಸುರಕ್ಷತೆ, ಭದ್ರತೆ ಜೊತೆಗೆ ಅಗತ್ಯ ಸೌಲಭ್ಯಗಳನ್ನು ಕಾರ್ಮಿಕ ಇಲಾಖೆ ದೊರಕಿಸಬೇಕು ಎಂದು 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈ. ಚಂದ್ರಕಲಾ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದ ಮಯೂರ ಆಪರೆಲ್ಸ್ನಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಮಯೂರ ಆಪರೆಲ್ಸ್ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕಾರ್ಮಿಕ ಕಾನೂನುಗಳು ಹಾಗೂ ಸರಕು ವಾಹನದಲ್ಲಿ ಕಾರ್ಮಿಕರ ಸಾಗಾಣಿಕೆ ತಡೆ ಕುರಿತು ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರ ದುಡಿಮೆಯೇ ಇಂದು ಮೂಲಭೂತ ಸೌಲಭ್ಯಗಳ ಸ್ಥಾಪನೆಗೆ ಕಾರಣವಾಗಿದೆ. ಆದರೆ, ಅಂತಹ ಮಹಿಳಾ ಕಾರ್ಮಿಕ ವರ್ಗಕ್ಕೆ ಅಗತ್ಯ ರಕ್ಷಣೆ, ಭದ್ರತೆ, ಸೌಲಭ್ಯ ದೊರಕುತ್ತಿಲ್ಲ. ಈ ಧೋರಣೆ ಬದಲಾಗಬೇಕು.

ಮಹಿಳಾ ಕಾರ್ಮಿಕರು ಒಗ್ಗಟ್ಟಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕು. ಕಾರ್ಮಿಕ ಇಲಾಖೆಯು ಮಹಿಳಾ ಕಾರ್ಮಿಕರಿಗೆ ಕಾನೂನಡಿ ದೊರಕಬೇಕಾದ ಸೌಲಭ್ಯ ಕಲ್ಪಿಸಬೇಕು ಎಂದರು.

ಜನತೆ ಕಾನೂನು ಚೌಕಟ್ಟಿನಲ್ಲಿ ನಡೆದಾಗ ಅವರಿಗೆ ಕಾನೂನು ನೆರವಾಗುತ್ತದೆ. ಇಂದಿನ ದಿನಗಳಲ್ಲಿ ಮಹಿಳಾ ಕಾರ್ಮಿಕರು ವಿವಿಧ ಕ್ಷೇತ್ರಗಳಲ್ಲಿ ತಮ್ಮ ಆರ್ಥಿಕ ಸಬಲತೆಗೆ ಹಾಗೂ ಕುಟುಂಬ ನಿರ್ವಹಣೆಗೆ ದುಡಿಯುತ್ತಿದ್ದು, ಅವರಿಗೆ ನ್ಯಾಯಯುತವಾಗಿ ಸೌಲಭ್ಯ ದೊರೆಯಬೇಕು ಎಂದು ಹೇಳಿದರು. ಕಾರ್ಮಿಕರು ತಮ್ಮ ಕೆಲಸಗಳಿಗೆ ಹೋಗುವ ಸಂದರ್ಭದಲ್ಲಿ ಪ್ರಯಾಣಿಕರಿಗಾಗಿ ಇರುವ ವಾಹನಗಳಲ್ಲಿ ಪ್ರಯಾಣಿಸಬೇಕು. ಸರಕು ವಾಹನಗಳಲ್ಲಿ ಪ್ರಯಾಣಿಸುವುದು ಕಾನೂನು ಬಾಹಿರವಾಗಿದ್ದು, ಸರಕು ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆಗುವ ಅವಘಡ, ಅಪಘಾತಗಳಿಗೆ ಕಾನೂನಿನಲ್ಲಿ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಮಹಿಳೆಯರಿಂದು ಕೈಗಾರಿಕೆ, ಆಸ್ಪತ್ರೆ, ಶಾಲಾ-ಕಾಲೇಜು, ಕಾರ್ಖಾನೆ, ಗಣಿ ಮತ್ತು ಚಹಾ ತೋಟಗಳಲ್ಲಿ ದುಡಿಯುತ್ತಿದ್ದು, ಇವರಲ್ಲಿ ಒಗ್ಗಟ್ಟು, ಸಂಘಟನೆ ಬಲವಾಗಿರುವ ಶ್ರಮಶಕ್ತಿಯ ಫಲವಾಗಿ ಪ್ರಯೋಜನಗಳನ್ನು ಪಡೆಯುವಲ್ಲಿ ಸಫಲರಾಗಿದ್ದಾರೆ ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಮಹಮದ್‌ ಜಹೀರ್‌ ಬಾಷಾ ಮಾತನಾಡಿ, ಕಾರ್ಮಿಕರು ತಮ್ಮ ಕಾರ್ಖಾನೆ ಸೇರಿದಂತೆ ಬೇರೆ ಕಡೆ ಕೆಲಸ ಮಾಡುವ ಸ್ಥಳಗಳಲ್ಲಿ ತಮ್ಮ ಸುರಕ್ಷತೆಗಾಗಿ ಇರುವ ಕಾನೂನುಗಳ ಬಗ್ಗೆ ತಿಳಿದುಕೊಳ್ಳಬೇಕು. ತಮಗೆ ಬರಬೇಕಾದ ನ್ಯಾಯಯುತ ವೇತನ, ಪಿಎಫ್‌, ಬೋನಸ್‌ ಸೇರಿದಂತೆ ಇತರೆ ಸೇವೆಗಳ ಬಗ್ಗೆ ಇಲಾಖೆಯಿಂದ ಮಾಹಿತಿ ಪಡೆದುಕೊಳ್ಳಬೇಕಾದುದು ಅಗತ್ಯ ಎಂದರಲ್ಲದೇ, ಮಹಿಳಾ ಕಾರ್ಮಿಕರಿಗಾಗಿ ಅಗತ್ಯವಿರುವ ವಾಹನ ಸೌಲಭ್ಯ ಕಲ್ಪಿಸಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯೊಂದಿಗೆ ಮಾತುಕತೆ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಎಲ್.ಎಚ್.ಅರುಣ್‌ಕುಮಾರ್‌ ಮಾತನಾಡಿ, ಕಾರ್ಮಿಕರಿಗಾಗಿ 45 ಕಾನೂನುಗಳು ಜಾರಿಗೆ ಬಂದಿದ್ದು, ಅಗತ್ಯ ಸೌಲಭ್ಯ, ಪರಿಹಾರ ದೊರಕಿಸುವಲ್ಲಿ ನೆರವಾಗುತ್ತಿವೆ. ದೇಶದ ಅಭಿವೃದ್ಧಿ, ಉತ್ಪಾದನೆಯಲ್ಲಿ ಮಹಿಳಾ ಕಾರ್ಮಿಕರ ಶ್ರಮ ಅಪಾರವಾಗಿದೆೆ. ದೇಶ ಕಾರ್ಮಿಕರು ಮತ್ತು ರೈತರಿಂದ ಮಾತ್ರ ಮುನ್ನಡೆಯಲು ಸಾಧ್ಯಎಂದರು.

ಇಂದು ಕಾರ್ಮಿಕ ಕ್ಷೇತ್ರ ಬಹುಪಾಲು ಅಸಂಘಟಿತರಿಂದಲೇ ಆವೃತಗೊಂಡಿದೆ. ಇಂದು ಸಂಘಟಿತ ಕಾರ್ಮಿಕ ವರ್ಗವು ತಂತ್ರಜ್ಞಾನ, ಬದಲಾಗುತ್ತಿರುವ ಉದ್ಯೋಗ ಲಕ್ಷಣ, ಹೊಸ ಆರ್ಥಿಕ ನೀತಿ, ಕಾರ್ಮಿಕ ಕಾನೂನು ಮಾರ್ಪಾಡಿನಿಂದ ಸವಾಲುಗಳನ್ನು ಎದುರಿಸುತ್ತಿದೆ. ಇವುಗಳ ಬಗ್ಗೆ ಕಾರ್ಮಿಕ ವರ್ಗಕ್ಕೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ಕಾರ್ಲ್ಮಾಕ್ಸ್‌ ಅವರು ಶ್ರಮಿಕ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಹೋರಾಡಿದಂತವರು. ಅವರ ಚಿಂತನೆ ಫಲವಾಗಿ ದೇಶದಲ್ಲಿ ಕಾರ್ಮಿಕರ ಹೋರಾಟ ರೂಪುಗೊಂಡಿದೆ. ಆದರೆ, ಕಾನೂನು ಸುಧಾರಣೆ ಹೆಸರಿನಲ್ಲಿ ಇಡೀ ದೇಶವನ್ನೇ ಖಾಸಗೀಕರಿಸುವಂತಹ ಆರ್ಥಿಕ ನೀತಿಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಾದೇಶಿಕ ಸಾರಿಗೆ ಇಲಾಖೆಯ ಸಾರಿಗೆ ನಿರೀಕ್ಷಕ ಮಹಮ್ಮದ್‌ ಖಾಲೀದ್‌ಸಾಬ್‌, ಸರಕು ವಾಹನದಲ್ಲಿ ಕಾರ್ಮಿಕರ ಸಾಗಾಣಿಕೆ ತಡೆ ಕುರಿತು ಮಾತನಾಡಿದರು. ಕಾರ್ಮಿಕ ಅಧಿಕಾರಿ ಜಿ.ಇಬ್ರಾಹಿಂ ಸಾಬ್‌, ಕಾರ್ಮಿಕರ ನಿರೀಕ್ಷಕರಾದ ಮುಮ್ತಾಜ್‌ ಬೇಗಂ, ವೇಮಣ್ಣ, ಯೋಜನಾ ನಿರ್ದೇಶಕ ಪ್ರಸನ್ನಕುಮಾರ್‌ ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕೆಎಸ್‌ಆರ್‌ಟಿಸಿಬಸ್‌ ಸೌಲಭ್ಯ ಕಲ್ಪಿಸಿ
ಕರೂರು ಇಂಡಸ್ಟ್ರೀಯಲ್ ಪ್ರದೇಶದಲ್ಲಿ ಈಗ ಸಾಕಷ್ಟು ಗಾರ್ಮೆಂಟ್ಸ್‌ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಜಿಲ್ಲೆಯ ವಿವಿಧೆಡೆಯಿಂದ ಮಹಿಳಾ ಕಾರ್ಮಿಕರು ಕೆಲಸಕ್ಕೆ ಬರುತ್ತಾರೆ. ಅವರಿಗೆ ಬರಲು ಸುರಕ್ಷಿತ ಸಾರಿಗೆ ವ್ಯವಸ್ಥೆಯಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳಾ ಕಾರ್ಮಿಕರು ಸುರಕ್ಷಿತವಾಗಿ ಗಾರ್ಮೆಂಟ್ಸ್‌ ತಲುಪಿ, ಪುನಃ ತಮ್ಮ ಊರಿಗೆ ಮರಳಲು ಸೂಕ್ತ ಕೆಎಸ್‌ಆರ್‌ಟಿಸಿ ಸಾರಿಗೆ ಸೌಲಭ್ಯ ಒದಗಿಸಲು ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳಬೇಕು ಎಂದು ಅನುಗ್ರಹ ಗಾರ್ಮೆಂಟ್ಸ್‌ ಮಾಲೀಕ ರಘು ಮೊಸಳೆ ಅಧಿಕಾರಿಗಳಿಗೆ ಮನವಿ ಮಾಡಿದರು.

ಕಾರ್ಮಿಕರು ಸಂಘಟಿತರಾಗಿ
ದೇಶದ ಒಟ್ಟು ರಾಷ್ಟ್ರೀಯ ಉತ್ಪಾದನೆಯಲ್ಲಿ ಸಂಘಟಿತ ಕಾರ್ಮಿಕರ ಕೊಡುಗೆ ಶೇ. 45ರಷ್ಟಿದೆ. ಸಮೀಕ್ಷೆಗಳ ಪ್ರಕಾರ ಭಾರತದ ಒಟ್ಟು ಜನಸಂಖ್ಯೆಯಲ್ಲಿ ಕಾರ್ಮಿಕರ ಸಂಖ್ಯೆ ಶೇ. 35ರಷ್ಟಿದ್ದರೂ, ಸಂಘಟಿತ ಕಾರ್ಮಿಕರ ಸಂಖ್ಯೆ ಕೇವಲ ಶೇ. 3ರಷ್ಟಿದೆ. ನಗರ ಪ್ರದೇಶಗಳಲ್ಲಿ ಇರುವ ಎಲ್ಲಾ ಕಾರ್ಮಿಕರೂ ಕೂಡ ಸಂಘಟಿತರಾಗಿಲ್ಲ. ಅಸಂಘಟಿತ ಕಾರ್ಮಿಕರನ್ನು ಸಂಘಟಿಸುವ ಮೂಲಕ ಕಾರ್ಮಿಕ ವರ್ಗ ತಮ್ಮ ಮುಂದಿರುವ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಗುರಿ ತಲುಪಬೇಕಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಎಲ್.ಎಚ್.ಅರುಣ್‌ಕುಮಾರ್‌ ಹೇಳಿದರು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.