ಕಬಕ-ಪುತ್ತೂರು ರೈಲ್ವೇ ನಿಲ್ದಾಣ 2ನೇ ಪ್ಲಾಟ್‌ಫಾರಂ ಕಾಮಗಾರಿ

1.75 ಕೋಟಿ ರೂ. ಅನುದಾನ ಮಂಜೂರು

Team Udayavani, May 17, 2019, 6:00 AM IST

22

ಪುತ್ತೂರು: ಕಬಕ ಪುತ್ತೂರು ಆದರ್ಶ ರೈಲ್ವೇ ನಿಲ್ದಾಣ ಅಭಿವೃದ್ಧಿ ಕಾರ್ಯ ಗಳ ಮುಂದುವರೆದ ಭಾಗವಾಗಿ ಎರಡನೇ ಪ್ಲಾಟ್‌ಫಾರಂ ಅಭಿವೃದ್ಧಿ ಕಾಮಗಾರಿಯನ್ನು ನಡೆಸಲಾಗುತ್ತಿದೆ. ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಸಂಬಂಧಿಸಿ ದಂತೆ ಹೋರಾಟಗಾರರು ಹಾಗೂ ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರ ಪ್ರಯತ್ನದ ಫಲವಾಗಿ ಎರಡನೇ ಪ್ಲಾಟ್‌ಫಾರಂ ಅಭಿವೃದ್ಧಿ ಕಾಮಗಾರಿ ಮಂಜೂರುಗೊಂಡು ನಡೆಯುತ್ತಿದೆ. ಆದರ್ಶ ರೈಲ್ವೇ ನಿಲ್ದಾಣದಲ್ಲಿ ಎರಡು ಫ್ಲಾಟ್‌ ಫಾರಂ ಇರಬೇಕೆಂಬ ನಿಯಮವೂ ಇದೆ. ಈ ಕಾಮಗಾರಿ ನಡೆದರೆ ಎರಡು ರೈಲು ಬಂಡಿಗಳು ಏಕಕಾಲದಲ್ಲಿ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶವಾಗಲಿದೆ.

ಕೇಂದ್ರ ಸರಕಾರದಿಂದ ಈ ಕಾಮಗಾರಿಗೆ 1.75 ಕೋಟಿ ರೂ. ಅನುದಾನ ಮಂಜೂರಾಗಿದೆ. ಆದರ್ಶ ರೈಲ್ವೇ ನಿಲ್ದಾಣವಾಗಿ ಅಭಿವೃದ್ಧಿಗೊಂಡಿರುವ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ 2ನೇ ಪ್ಲಾಟ್‌ಫಾರಂ ಅಭಿವೃದ್ಧಿಪಡಿಸುವಂತೆ ಪುತ್ತೂರು ರೈಲ್ವೇ ಯಾತ್ರಿಕರ ಸಂಘ, ಕುಕ್ಕೆ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ಬಳಕೆದಾರರ ಸಂಘಗಳು ಸೇರಿದಂತೆ ರೈಲ್ವೇ ಹೋರಾಟಗಾರರು ಒತ್ತಾಯ ಮಾಡುತ್ತಲೇ ಬಂದಿದ್ದರು. ಸಂಸದ ನಳಿನ್‌ ಕುಮಾರ್‌ ಕಟೀಲು ಕೇಂದ್ರ ರೈಲ್ವೇ ಸಚಿವರ ಮೇಲೆ ಒತ್ತಡ ತಂದು ಅನುದಾನವನ್ನು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

700 ಮೀ. ಉದ್ದ
ಒಂದನೇ ಪ್ಲಾಟ್‌ಫಾರಂಗೆ ಸಮಾನಾಂತರವಾಗಿ 700 ಮೀ. ಉದ್ದಕ್ಕೆ ಎರಡನೇ ಪ್ಲಾಟ್‌ಫಾರಂ ಅಭಿವೃದ್ಧಿಗೊಳ್ಳುತ್ತಿದೆ. ಕಾಮಗಾರಿಗೆ ಲಾರಿಗಳಲ್ಲಿ ಮಣ್ಣನ್ನು ತಂದು ಹಾಕಲಾಗುತ್ತಿದೆ. ಪ್ಲಾಟ್‌ಫಾರಂನಲ್ಲಿ ವಿದ್ಯುತ್‌ ಕೇಬಲ್‌ ಅಳವಡಿಕೆ ಸಹಿತ ಕಾಂಕ್ರೀಟ್‌ ಮತ್ತು ಇಂಟರ್‌ಲಾಕ್‌ಗಳನ್ನು ಹಾಕಿ ಅಭಿವೃದ್ಧಿ ಪಡಿಸಲಾಗುತ್ತದೆ. ಒಂದನೇ ಪ್ಲಾಟ್‌ಫಾರಂನಷ್ಟೇ ಎತ್ತರದಲ್ಲಿ ಎರಡನೇ ಪ್ಲಾಟ್‌ಫಾರಂ ಅಭಿವೃದ್ಧಿಯಾಗುತ್ತಿದೆ.

ವರ್ಷಾಂತ್ಯಕ್ಕೆ ಪೂರ್ಣ
ಆದರ್ಶ ರೈಲ್ವೇ ನಿಲ್ದಾಣ ಮುಂದುವರೆದ ಭಾಗವಾಗಿ ಎರಡನೇ ಪ್ಲಾಟ್‌ ಫಾರಂ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಕಾಮಗಾರಿ ಮುಗಿಸಲು 6 ತಿಂಗಳ ಅವಧಿ ನಿಗದಿಪಡಿಸಲಾಗಿದೆ. ಮಳೆಗಾಲದಲ್ಲಿ ಕೆಲಸ ನಡೆಸಲು ಸಾಧ್ಯವಾಗದ್ದರಿಂದ ಮಳೆಗಾಲ ಮುಗಿದ ಬಳಿಕ ಕೆಲಸ ನಡೆಸಲಾಗುತ್ತದೆ. ಈ ವರ್ಷಾಂತ್ಯಕ್ಕೆ ಕೆಲಸ ಪೂರ್ಣವಾಗುತ್ತದೆ ಎಂದು ರೈಲ್ವೇ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅಭಿವೃದ್ಧಿ ಕಾರ್ಯ
ಕೇಂದ್ರ ಸರಕಾರದಿಂದ ಕಬಕ ಪುತ್ತೂರು ರೈಲ್ವೇ ನಿಲ್ದಾಣವನ್ನು ಆದರ್ಶ ರೈಲ್ವೇ ನಿಲ್ದಾಣವಾಗಿ ಪರಿಗಣಿಸಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ. ಈಗ ಎರಡನೇ ಪ್ಲಾಟ್‌ ಫಾರಂ ಅಭಿವೃದ್ಧಿ ಕೆಲಸ ನಡೆಯುತ್ತಿದ್ದು, ಶೀಘ್ರ ಮುಕ್ತಾಯಗೊಳ್ಳಲಿದೆ. ಈ ನಿಟ್ಟಿನಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರ ಪ್ರಯತ್ನ ಬಹಳಷ್ಟಿದೆ.
– ಸಂಜೀವ ಮಠಂದೂರು, ಶಾಸಕರು, ಪುತ್ತೂರು

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!

1

Bantwal: ಶಂಭೂರಿನ ಎಂಆರ್‌ಎಫ್‌ ತಿಂಗಳಲ್ಲಿ ಸಿದ್ಧ

5-bantwala

Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

3-sulya

Aranthodu: ನೇಣು ಬಿಗಿದು ಯವಕ ಆತ್ಮಹತ್ಯೆ

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

byndoor

Siddapura: ಲಾರಿ ಚಾಲನೆಯಲ್ಲಿಯೇ ಹೃದಯಾಘಾತ; ಚಾಲಕ ಸಾವು

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

byndoor

Udupi: ಬೈಕ್‌ ಢಿಕ್ಕಿ; ಸೈಕಲ್‌ ಸವಾರ ಗಾಯ

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.