ಇವಿಎಂ: ಅನುಮಾನವಿಲ್ಲ; ಅಜಿತ್ ಪವಾರ್
Team Udayavani, May 17, 2019, 11:36 AM IST
ಪುಣೆ: ಒಂದೆಡೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಅವರ ಪುತ್ರಿ ಬಾರಾಮಾತಿ ಸಂಸದೆ ಸುಪ್ರಿಯಾ ಸುಳೆ ಅವರು ಇಲೆಕ್ಟ್ರಾನಿಕ್ ಮತದಾನ ಯಂತ್ರಗಳ (ಇವಿಎಂ) ಕಾರ್ಯಾಚರಣೆಯ ಕುರಿತು ಅನುಮಾನ ವ್ಯಕ್ತಪಡಿಸುತ್ತಿದ್ದರೆ, ಇನ್ನೊಂದೆಡೆಯಲ್ಲಿ ಪಕ್ಷದ ಹಿರಿಯ ನಾಯಕ ಅಜಿತ್ ಪವಾರ್ ಅವರು ಈ ವಿಷಯದ ಕುರಿತು ವಿಭಿನ್ನ ದೃಷ್ಟಿಕೋನವನ್ನು ಹೊಂದಿರುವಂತೆ ತೋರುತ್ತಿದ್ದಾರೆ. ಮಂಗಳವಾರ ಇಲ್ಲಿ ಕಾರ್ಯಕ್ರಮವೊಂದರ ಬಳಿಕ ಮಾಧ್ಯಮ ಸಿಬಂದಿಗಳೊಂದಿಗೆ ಮಾತನಾಡಿದ ಶರದ್ ಪವಾರ್ ಅವರ ಸೋದರಳಿಯ ಅಜಿತ್ ಪವಾರ್ ಅವರು, ಇವಿಎಂಗಳ ಕಾರ್ಯಚಟುವಟಿಕೆಯ ಬಗ್ಗೆ ನನಗೆ ಯಾವುದೇ ಅನುಮಾನಗಳಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಇವಿಎಂಗಳನ್ನು ತಿರುಚಲು ಸಾಧ್ಯವಿದೆ ಎಂದಾದರೆ, ಕಳೆದ ವರ್ಷದ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಜಯಗಳಿಸುತ್ತಿರಲಿಲ್ಲ. ಈ ವಿಷಯದಲ್ಲಿ ನ್ಯಾಯಾಲಯವು ಕೂಡ ಅದರ ನಿರ್ಧಾರವನ್ನು ತಿಳಿಸಿದೆೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ನುಡಿದಿದ್ದಾರೆ.
ಮತದಾನದಲ್ಲಿ ಇವಿಎಂಗಳ ಬಳಕೆಯ ಬಗ್ಗೆ ಕೆಲವು ಜನರಿಗೆ ಸಂಶಯವಿದೆ ಮತ್ತು ಅಂತಹ ಸಂಶಯಗಳು ಪ್ರಜಾಪ್ರಭುತ್ವಕ್ಕೆ ಉತ್ತಮವಲ್ಲ. ನನಗೆ ಅದರ ಬಗ್ಗೆ ಯಾವುದೇ ಅನುಮಾನಗಳಿಲ್ಲ. ಇವಿಎಂಗಳನ್ನು ತಿರುಚಬಹುದಾಗಿದ್ದರೆ, ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಅವರು (ಬಿಜೆಪಿ) ಸೋಲುತ್ತಿರಲಿಲ್ಲ ಎಂದು ಅಜಿತ್ ಪವಾರ್ ಹೇಳಿದ್ದಾರೆ.
ಬರ ಪರಿಸ್ಥಿತಿ ನಿಭಾಯಿಸುವ ಬಗ್ಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಜ್ಯ ಸಚಿವಾಲಯ ಮಂತ್ರಾಲಯದಲ್ಲಿ ಸಭೆಗಳನ್ನು ನಡೆಸುವ ಸಂಬಂಧ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸುಳೆ ಅವರು, ನಾವು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿರ್ಣಯಿಸುವುದರ ಮೇಲೆ ನಂಬಿಕೆಯನ್ನು ಹೊಂದಿದ್ದೇವೆ. ಅದಕ್ಕಾಗಿ ಪಕ್ಷದ ನಾಯಕರು ಬರಪೀಡಿತ ಪ್ರದೇಶಗಳಿಗೆ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಆದರೂ, ಪ್ರತಿಯೊಬ್ಬ ನಾಯಕರು ತಮ್ಮದೇ ಆದ ಕಾರ್ಯಶೈಲಿಯನ್ನು ಹೊಂದಿರುತ್ತಾರೆ ಎಂದರು.
ಈ ಹಿಂದೆ ಮುಂಬಯಿಯಲ್ಲಿ ಮತ್ತು ಸತಾರಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಇವಿಎಂಗಳ ಕಾರ್ಯಾಚರಣೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.
ಮತದಾನ ಪತ್ರಗಳು ಪಾರದರ್ಶಕ
ಅದೇ, ಮಂಗಳವಾರ ಪುಣೆಯಲ್ಲಿ ನಡೆದ ಪ್ರತ್ಯೇಕ ಕಾರ್ಯಕ್ರಮವೊಂದರಲ್ಲಿ ಸುಪ್ರಿಯಾ ಸುಳೆ ಅವರು, ಬ್ಯಾಲೆಟ್ ಪೇಪರ್‌ಗಳ ಬಳಕೆಯು ಇವಿಎಂಗಳಿಗಿಂತ ಹೆಚ್ಚು ಪಾರದರ್ಶಕವಾಗಿತ್ತು ಎಂದು ನುಡಿದಿದ್ದಾರೆ. ದೇಶಾದ್ಯಂತ ವಿಪಕ್ಷಗಳು ಇವಿಎಂಗಳ ಕಾರ್ಯಚಟುವಟಿಕೆಗಳ ವಿರುದ್ಧ ಅನುಮಾನವನ್ನು ವ್ಯಕ್ತಪಡಿಸುತ್ತಿವೆ. ಇವಿಎಂಗಳ ವಿರುದ್ಧದ ಹೋರಾಟವು ಮುಂದುವರಿಯಲಿದೆ. ಚುನಾವಣ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕವಾಗಿ ಮಾಡಲು ಈ ಹೋರಾಟವನ್ನು ಮಾಡಲಾಗುತ್ತಿದೆ ಎಂದು ಮರಾಠ ರಾಜ ಸಂಭಾಜಿ ಮಹಾರಾಜ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿತ ಕಾರ್ಯಕ್ರಮದಲ್ಲಿ ಸುಳೆ ನುಡಿದಿದ್ದಾರೆ. ವಿಪಕ್ಷವು ಈ ವಿಷಯವನ್ನು ಹಲವು ಬಾರಿ ಚುನಾವಣ ಆಯೋಗದ ಮುಂದೆ ಎತ್ತಿದೆ ಮತ್ತು ಚುನಾವಣೆಯಲ್ಲಿ ಮತದಾನ ಪತ್ರಗಳನ್ನು ಬಳಸಲು ಕೋರಿದೆ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.