ಲೋಕಸಭೆ ಮತ ಎಣಿಕೆಗೆ ದಿನಗಣನೆ : ಅಧಿಕಾರಿ-ಸಿಬಂದಿಗೆ ತರಬೇತಿ
Team Udayavani, May 17, 2019, 11:43 AM IST
ಸಾಂದರ್ಭಿಕ ಚಿತ್ರ
ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆದು ಸುಮಾರು ಒಂದು ತಿಂಗಳು ಕಳೆದಿದೆ. ಮತ ಎಣಿಕೆಗೆ ವಾರವಷ್ಟೇ ಬಾಕಿ ಉಳಿದಿದ್ದು, ಸಿದ್ಧತೆ ಆರಂಭವಾಗಿದೆ.
ಸುರತ್ಕಲ್‌ನ ಎನ್‌ಐಟಿಕೆ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ಉಡುಪಿ ನಗರದ ಬ್ರಹ್ಮಗಿರಿ ಬಳಿಯ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆ ಮತ ಎಣಿಕೆ ಕೇಂದ್ರ. ಮತ ಎಣಿಕೆ ಕುರಿತು ತರಬೇತಿ ನಡೆದಿದೆ. ರಾಜ್ಯ ಮಟ್ಟದ ತರಬೇತುದಾರರು ಆಗಮಿಸಿ ತರಬೇತಿ ನೀಡಿದ್ದಾರೆ. ಈ ಬಾರಿ ಹೆಚ್ಚುವರಿ ವಿವಿಪ್ಯಾಟ್-ಇವಿಎಂ ಮತ ತಾಳೆ ನೋಡ ಬೇಕಾಗಿರುವುದರಿಂದ ತರಬೇತಿಯಲ್ಲಿ ಆ ಬಗ್ಗೆ ಗಮನ ಹರಿಸಲಾಗಿದೆ.
ವಿಜಯಲಕ್ಷ್ಮೀ ಯಾರಿಗೆ ಒಲಿಯಬಹುದು ಎನ್ನುವ ಲೆಕ್ಕಾಚಾರವೂ ಆರಂಭವಾಗಿದೆ. ಇದೇ ಮೊದಲ ಬಾರಿಗೆ ದ.ಕ. ಕ್ಷೇತ್ರದ ಮತ ಎಣಿಕೆ ನಗರದ ಹೊರ ವಲಯದಲ್ಲಿರುವ ಸುರತ್ಕಲ್ ಎನ್‌ಐಟಿಕೆ ಆವರಣದಲ್ಲಿ ನಡೆಯಲಿದೆ. ಈ ಹಿಂದೆ 2009ರ ಮತ ಎಣಿಕೆ ನಗರದ ಕೆನರಾ ಕಾಲೇಜು ಆವರಣದಲ್ಲಿ ನಡೆದಿತ್ತು. ಆಗ ಸಂಚಾರ ದಟ್ಟಣೆ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಿಂದ ಅನಂತರದ (2014) ಮತ ಎಣಿಕೆ ಬೋಂದೆಲ್ ಮಹಾತ್ಮಾ ಗಾಂಧಿ ಸಂಯುಕ್ತ ಪದವಿಪೂರ್ವ ಕಾಲೇಜಿಗೆ ಸ್ಥಳಾಂತರವಾಗಿತ್ತು.
ಉಡುಪಿ ಸೈಂಟ್ ಸಿಸಿಲೀಸ್ ಶಾಲೆಯಲ್ಲಿರುವ ಸ್ಟ್ರಾಂಗ್ ರೂಮ್‌ಗೆ ಸಿಆರ್‌ಪಿಎಫ್, ಸ್ಥಳೀಯ ಪೊಲೀಸರ ಭದ್ರತೆ ಒದಗಿಸಲಾಗಿದೆ. ಪ್ರತಿನಿತ್ಯ ಜಿಲ್ಲಾಧಿಕಾರಿ, ಎಸ್‌ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಕುರಿತಂತೆ ಈಗಾಗಲೇ ತರಬೇತಿಗಳು, ಪೊಲೀಸ್ ಭದ್ರತೆಗೆ ಸಂಬಂಧಿಸಿದ ಸಭೆಗಳು ಕೂಡ ನಡೆದಿವೆ.
ಜಿಲ್ಲಾಧಿಕಾರಿಗೂ ತರಬೇತಿ
ಮತ ಎಣಿಕೆಗೆ ಸಂಬಂಧಿಸಿ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಮತ್ತು ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ ಅವರಿಗೂ ಬೆಂಗಳೂರಿನಲ್ಲಿ ವಿಶೇಷ ತರಬೇತಿ ನೀಡಲಾಗಿದೆ. ಇವರಿಬ್ಬರೂ ಇದಕ್ಕಾಗಿ ಮಂಗಳವಾರ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನಲ್ಲಿ ರಾಜ್ಯದ ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮತ ಎಣಿಕೆ ಕುರಿತಂತೆ ಒಂದು ದಿನದ ತರಬೇತಿ ನಡೆದಿತ್ತು.
ಮತ್ತಷ್ಟು ಭದ್ರತೆ
ಮತ ಎಣಿಕೆ ದಿನಾಂಕ ಹತ್ತಿರವಾಗುತ್ತಿದ್ದು, ಸುರತ್ಕಲ್‌ನ ಎನ್‌ಐಟಿಕೆ ಮತ ಎಣಿಕೆ ಕೇಂದ್ರಕ್ಕೆ ಭದ್ರತೆ ಹೆಚ್ಚಿಸಲು ನಿರ್ಧರಿಸಲಾಗಿದೆ.
ಶಶಿಕಾಂತ ಸೆಂಥಿಲ್, ಜಿಲ್ಲಾಧಿಕಾರಿ, ದ.ಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.