ನಟಿ ಹರಿಪ್ರಿಯಾ ವಿರುದ್ಧ ಚೇಂಬರ್‌ಗೆ ದೂರು

Team Udayavani, May 17, 2019, 11:53 AM IST

blore-8

ಬೆಂಗಳೂರು: ಕಳೆದ ವಾರ ಬಿಡುಗಡೆಯಾದ ‘ಸೂಜಿದಾರ’ ಚಿತ್ರದಲ್ಲಿ ತಮ್ಮ ಪಾತ್ರವನ್ನು ಸರಿಯಾಗಿ ಬಿಂಬಿಸಿಲ್ಲ, ಅಲ್ಲದೇ ತಮ್ಮ ಜತೆ ಚರ್ಚಿಸದೆ ನಿರ್ದೇಶಕರು ಕಥೆಯನ್ನು ತಿರುಚಿದ್ದಾರೆ ಎನ್ನುವ ನಟಿ ಹರಿಪ್ರಿಯಾ ಆರೋಪಕ್ಕೆ ಸಂಬಂಧಿಸಿದಂತೆ, ಇದೀಗ ಸೂಜಿದಾರ ಚಿತ್ರತಂಡ ಹರಿಪ್ರಿಯಾ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು ನೀಡಿದೆ.

‘ಸೂಜಿದಾರ’ ಚಿತ್ರ ತೆರೆಕಂಡ ಮೂರೇ ದಿನಕ್ಕೆ ಇಂಥ ಆರೋಪ ಮಾಡುವುದು ಸರಿಯಲ್ಲ. ಇನ್ನು ಕಥೆಯನ್ನು ತಮಗೆ ಹೇಳದೇ ತಿರುಚಿದ್ದಾರೆ ಎಂಬ ಆರೋಪ ಸುಳ್ಳು. ಅವರು ಹೇಳಿದಂತೆ ಚಿತ್ರದ ಯಾವುದೇ ದೃಶ್ಯಗಳನ್ನೂ ತಿರುಚಿಲ್ಲ. ಈ ಬಗ್ಗೆ ವಿಚಾರಿಸಲು ಹರಿಪ್ರಿಯಾ ಅವರಿಗೆ ಕರೆ ಮಾಡಿದರೂ ಕಾಲ್ ರಿಸೀವ್‌ ಮಾಡುತ್ತಿಲ್ಲ. ಅಲ್ಲದೇ ಅವರ ಹೇಳಿಕೆಯಿಂದಾಗಿ ಮೂರು ದಿನಗಳಿಂದ ಚಿತ್ರದ ಕಲೆಕ್ಷನ್‌ ಕೂಡ ಕಡಿಮೆಯಾಗಿದೆ. ಅನಗತ್ಯವಾಗಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದು, ಇಂತಹ ಹೇಳಿಕೆ ನೀಡಿರುವ ಹರಿಪ್ರಿಯಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಇನ್ನು ದೂರಿನ ಬಗ್ಗೆ ಪ್ರತಿಕ್ರಿಯಿಸಿರುವ ವಾಣಿಜ್ಯ ಮಂಡಳಿ ಪದಾಧಿಕಾರಿ ಭಾ.ಮಾ.ಹರೀಶ್‌, ‘ಒಂದೆರಡು ದಿನಗಳಲ್ಲಿ ಈ ಬಗ್ಗೆ ಹರಿಪ್ರಿಯಾ ಅವರಿಂದಲೂ ಸ್ಪಷ್ಟನೆ ಪಡೆದು ಮುಂದಿನ ನಿರ್ಧಾರಕ್ಕೆ ಬರಲಾಗುವುದು’ ಎಂದಿದ್ದಾರೆ.

ಹರಿಪ್ರಿಯಾ ವಿರುದ್ಧ ಗುಡುಗಿದ ಸಹನಟಿ: ‘ಸೂಜಿದಾರ’ ಚಿತ್ರದ ಸಹನಟಿ ಚೈತ್ರಾ ಕೂಡ ಹರಿಪ್ರಿಯಾ ವಿರುದ್ಧ ಹರಿಹಾಯ್ದಿದ್ದಾರೆ. ‘ವರ ಮಹಾಲಕ್ಷ್ಮೀ ಹಬ್ಬದ ವೇಳೆ ಹರಿಪ್ರಿಯಾ ಅವರಿದ್ದ ಚಿತ್ರದ ಮೊದಲ ಪೋಸ್ಟರ್‌ ಬಿಡುಗಡೆ ಮಾಡಿದಾಗ ಸಾಕಷ್ಟು ಸದ್ದು ಮಾಡಿತ್ತು. ಬಳಿಕ ಇಡೀ ಚಿತ್ರತಂಡದ ಪಾತ್ರಧಾರಿಗಳಿರೋ ಹೊಸ ಪೋಸ್ಟರ್‌ ರಿಲೀಸ್‌ ಮಾಡಲಾಯಿತು. ಈ ವೇಳೆ ಹರಿಪ್ರಿಯಾ ತಾಯಿಗೆ ಸ್ವಲ್ಪ ಇರಿಸುಮುರಿಸಾದ ಕಾರಣ ನನ್ನ ಮಗಳ ಸಮನಾಗಿ ನಿಲ್ಲೋಕೆ ಅವರೆಲ್ಲ ಯಾರು ಅನ್ನೋ ಮಾತುಗಳು ಕೇಳಿ ಬಂದಿದ್ದವು. ಅವರಿಗೆ ಪೋಸ್ಟರ್‌ನಲ್ಲಿ ಹರಿಪ್ರಿಯಾ ಒಬ್ಬರೇ ಇರಬೇಕೆಂಬ ಆಸೆಯಿತ್ತು. ಆದರೆ ಆಗಿದ್ದೇ ಬೇರೆ. ನಂತರ ನಾನು ಪ್ರಸ್‌ ಮೀಟ್‌ಗೆ ಬರಬೇಕಾದ್ರೆ ಚೈತ್ರಾ ಯಾವುದೇ ಕಾರಣಕ್ಕೂ ಬರಬಾರದು ಅಂತಾ ದುರಹಂಕಾರದಿಂದ ಮಾತನಾಡಿದ್ದಾರೆ. ಚಿತ್ರ ಬಿಡುಗಡೆ ನಂತರ ಹರಿಪ್ರಿಯಾ ಅವರ ಪಾತ್ರದಷ್ಟೇ ನನ್ನ ಪಾತ್ರಕ್ಕೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನನ್ನ ಮೇಲಿನ ಕೋಪದಿಂದಾಗಿಯೇ ಈ ರೀತಿ ಆರೋಪ ಮಾಡಿದ್ದಾರೆ. ಹೀರೋಯಿನ್‌ ಆಗಿ ಈ ಥರ ನೆಗಟಿವ್‌ ಕಮೆಂಟ್ ಮಾಡಿದ್ರೆ ಹೇಗೆ? ಇದರಿಂದಾಗಿ ಇಡೀ ಚಿತ್ರ ಹಾಗೂ ಚಿತ್ರತಂಡಕ್ಕೂ ಭಾರೀ ನಷ್ಟ ಆಗಿದೆ. ಕೂಡಲೇ ಹರಿಪ್ರಿಯಾ ಕ್ಷಮೆ ಕೇಳಿ, ಚಿತ್ರತಂಡಕ್ಕೇ ಆಗಿರುವ ನಷ್ಟವನ್ನು ಭರಿಸಬೇಕಿ,’ ಎಂದು ಆಗ್ರಹಿಸಿದ್ದಾರೆ.

ಗರಂ ಆದ ನಿರ್ದೇಶಕ ಮೌನೇಶ್‌ ಬಡಿಗೇರ್‌

‘ಸೂಜಿದಾರ’ ಚಿತ್ರಕ್ಕೆ ಸಂಬಂಧಿಸಿದಂತೆ ನಟಿ ಹರಿಪ್ರಿಯಾ ನೀಡಿರುವ ಹೇಳಿಕೆಗೆ ನಿರ್ದೇಶಕ ಮೌನೇಶ್‌ ಬಡಿಗೇರ್‌ ಗರಂ ಆಗಿದ್ದಾರೆ. ‘ಚಿತ್ರದ ಶೂಟಿಂಗ್‌ಗೂ ಮೊದಲೇ ಹರಿಪ್ರಿಯಾ ಸೇರಿದಂತೆ ಚಿತ್ರದ ಪ್ರತಿಯೊಬ್ಬ ಕಲಾವಿದರಿಗೂ ಚಿತ್ರದ ಸಂಪೂರ್ಣ ಕಥೆ ಹೇಳಿ, ಸ್ಕ್ರಿಪ್ಟ್ ಕೂಡ ಕೊಡಲಾಗಿತ್ತು. ಆಗ ಎಲ್ಲವೂ ಸರಿಯಾಗಿದೆ ಎಂದಿದ್ದ ಹರಿಪ್ರಿಯಾ, ಈಗ ಇಲ್ಲಸಲ್ಲದ ವಿಷಯಕ್ಕೆ ಅಹಂನಿಂದ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಮೊದಲಿನಿಂದಲೂ ಸಿನಿಮಾ ಪ್ರಮೋಷನ್‌ಗೂ ಸರಿಯಾಗಿ ಬಾರದವರು ಇದೀಗ ಇಡೀ ಚಿತ್ರತಂಡ ಹಾಗೂ ಕಲಾವಿದರಿಗೆ, ನಿರ್ದೇಶಕನಿಗೆ ಅವಮಾನ ಮಾಡುವ ರೀತಿಯಲ್ಲಿ ಅಸಂಬದ್ಧ ಹೇಳಿಕೆ ನೀಡಿದ್ದಾರೆ’ ಎಂದಿರುವ ಮೌನೇಶ್‌ ಬಡಿಗೇರ್‌, ‘ನಾವು ಅವರ ಪಾತ್ರ ತಿರುಚಿಲ್ಲ. ಬೇರೆ ಪಾತ್ರಗಳು ಹೈಲೈಟ್ ಆಗಿರೋದನ್ನು ಕಂಡು ಮತ್ಸರದಿಂದ ಈ ರೀತಿ ಮಾತನಾಡುತ್ತಿದ್ದಾರೆ. ಇದರಿಂದಾಗಿ ಕಲೆಕ್ಷನ್‌ ಡಲ್ ಆಗಿದ್ದು, ನಿರ್ಮಾ ಪಕರಿಗೆ ನಷ್ಟವಾಗುತ್ತಿದೆ’ ಎಂದು ಕಿಡಿಕಾರಿದ್ದಾರೆ.

ಟಾಪ್ ನ್ಯೂಸ್

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.