ವಿಶೇಷ ಚೇತನರಿಗೆ ಪ್ರಶಸ್ತಿ ಪ್ರದಾನ
Team Udayavani, May 17, 2019, 1:43 PM IST
ಬಾದಾಮಿ: ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.
ಬಾದಾಮಿ: ವಿಕಲಚೇತನರಲ್ಲಿ ವಿಶೇಷ ವಾದ ಪ್ರತಿಭೆಯಿರುತ್ತದೆ. ಅವರಿಗೆ ಅನುಕಂಪ ನೀಡುವ ಬದಲಾಗಿ ಅವಕಾಶ ನೀಡಬೇಕು. ಯಾವುದೇ ವ್ಯಕ್ತಿ ಸಂಕಷ್ಟ ಎದುರಿಸಿ ಮುನ್ನಡೆದಾಗ ಮಾತ್ರ ಸಾಧಕರಾಗಲು ಸಾಧ್ಯ ಎಂದು ಕಸಾಪ ಅಧ್ಯಕ್ಷ ರವಿ ಕಂಗಳ ಹೇಳಿದರು.
ಗುರುವಾರ ಪಟ್ಟಣದ ತಾಪಂ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಚೇತನ ಪ್ರಶಸ್ತಿ ಪ್ರದಾನ ಸಮಾರಂಭ, ವಿಚಾರ ಸಂಕಿರಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಕಲಚೇತನ ಮಕ್ಕಳು ಇತರ ಮಕ್ಕಳಂತೆ ಮುಂದುವರೆದಿದ್ದಾರೆ. ಅವರಿಗೆ ತಂದೆ, ತಾಯಿ, ಸುತ್ತಮುತ್ತಲು ಸಮಾಜ ಅವರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು. ಅವರಲ್ಲಿರುವ ಪ್ರತಿಭೆ ಹೊರಹಾಕಲು ಎಲ್ಲರೂ ವೇದಿಕೆ ಒದಗಿಸಬೇಕು. ಅನೇಕ ವಿಶೇಷ ಚೇತನರು ಅಗಾಧ ಸಾಧನೆ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.
ಬಯಲಾಟ ಅಕಾಡೆಮಿ ಸದಸ್ಯ ಬಸವರಾಜ ಶಿಗ್ಗಾಂವಿ ಮಾತನಾಡಿ, ವಿಕಲಚೇತನರಿಗೆ ಸಹಕಾರ ನೀಡಿದರೆ ಎಲ್ಲ ರಂಗಗಳಲ್ಲಿ ಮುಂದೆ ಬರುತ್ತಾರೆ ಎಂದರು.
ತಾಪಂ ಕಚೇರಿಯ ವ್ಯವಸ್ಥಾಪಕ ಆರ್.ವೈ. ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಡಿಪಿಒ ಕಚೇರಿಯ ಮೇಲ್ವಿಚಾರಕಿ ಎಸ್.ಎಲ್ ಜಾಧವ, ಅಂತರಾಷ್ಟ್ರೀಯ ಅಂಗವಿಕಲ ಕ್ರೀಡಾಪಟು ಸಿದ್ದಾರೂಢ ಕೊಪ್ಪದ, ಕಾನಿಪ ಸಂಘದ ಅಧ್ಯಕ್ಷ ಲಿಂಗರಾಜ ಚಿನವಾಲರ, ಅಂಗವಿಕಲರ ಸಂಘದ ಅಧ್ಯಕ್ಷ ಎ.ಎಂ.ಮುಲ್ಲಾ, ಜಾನಪದ ವಿದ್ವಾಂಸ ವಿರೇಶ ಬಡಿಗೇರ, ಎಂ.ಬಿ.ಪಾಟೀಲ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ವಿವಿದ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ವಿಕಲಚೇತನರಾದ ಶಂಕ್ರಪ್ಪ ಮಹಾರಾಜನವರ (ಕ್ರೀಡೆ), ಹುಚ್ಚೇಶ ಯಂಡಿಗೇರಿ (ಸಮಾಜ ಸೇವೆ), ಕವಿತಾ ಲಮಾಣಿ (ಕ್ರೀಡೆ), ಸುರೇಶ ಕೋಟಿ (ಕ್ರೀಡೆ), ರಾಜು ಕಕರಡ್ಡಿ (ಸಮಾಜ ಸೇವೆ), ವಿಕಲಚೇತನ ವಿದ್ಯಾರ್ಥಿಗಳಾದ ಪೂಜಾ ಉಳಾಗಡ್ಡಿಮಠ, ಆನಂದ ಗಾಣಿಗೇರ, ಶಾಹೀನಾ ಬಡೇಖಾನ, ಈರಣ್ಣ ಉಳ್ಳಾಗಡ್ಡಿ, ಕೃಷ್ಣಾ ಬನ್ನಿದಿನ್ನಿ, ಹನಮಂತ ಮಾದರ, ಭೀಮಪ್ಪ ಬರಗಿ ಸೇರಿದಂತೆ 12 ಜನ ವಿಶೇಷ ಚೇತನರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.