ಟ್ರಾಫಿಕ್ ಸಮಸ್ಯೆ ಪರಿಹರಿಸಲು ಕರವೇ ಆಗ್ರಹ
Team Udayavani, May 17, 2019, 3:57 PM IST
ಗೋಕಾಕ: ನಗರದಲ್ಲಿ ಟ್ರಾಫಿಕ್ ಸಮಸ್ಯೆ ತಡೆಗಟ್ಟುವಲ್ಲಿ ವಿಫಲವಾಗುತ್ತಿರುವುದನ್ನು ಖಂಡಿಸಿ ಪಿಎಸ್‌ಐ ಶ್ರೀಶೈಲ್ ಬ್ಯಾಕೂಡ ಮುಖಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಗೋಕಾಕ: ನಗರದಲ್ಲಿ ಬೇಕಾಬಿಟ್ಟಿ ವಾಹನ ನಿಲ್ಲಿಸುವುದನ್ನು ತಡೆಗಟ್ಟಬೇಕು. ವಾಹನ ಸವಾರರು ರಸ್ತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪಿಎಸ್‌ಐ ಶ್ರೀಶೈಲ್ ಬ್ಯಾಕೂಡ ಅವರ ಮುಖಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.
ಕಳೆದ ಹಲವಾರು ತಿಂಗಳುಗಳಿಂದ ಗೋಕಾಕ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬ್ಯಾಳಿಕಾಟಾವರೆಗೆ ಮತ್ತು ಬಸವೇಶ್ವರ ವೃತ್ತದಿಂದ ಅಜಂತಾ ಖೂಟವರೆಗಿನ ರಸ್ತೆ ಅಗಲೀಕರಣಗೊಂಡು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಈ ರಸ್ತೆಗಳಲ್ಲಿ ದ್ವಿಚಕ್ರ ವಾಹನ ಸವಾರರು ಮತ್ತು ನಾಲ್ಕು ಚಕ್ರ ವಾಹನ ಸವಾರರು ತಮ್ಮ ವಾಹನಗಳನ್ನು ಎಲ್ಲಿ ಬೇಕೆಂದರಲ್ಲಿ ನಿಲ್ಲಿಸಿ ತಮ್ಮ ಬೇಜವಾಬ್ದಾರಿ ತೋರುತ್ತಿದ್ದಾರೆ. ಇದರಿಂದ ಈ ಎರಡೂ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರು ಮತ್ತು ಪಾದಚಾರಿಗಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಇದರ ಪರಿಣಾಮ ಈ ಎರಡೂ ರಸ್ತೆಗಳು ಅಗಲೀಕರಣಗೊಂಡರೂ ಯಾವುದೇ ಪ್ರಯೋಜನವಾಗದೆ ಟ್ರಾಫಿಕ್ ಸಮಸ್ಯೆ ಎದುರಿಸಲಾಗುತ್ತಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಪ್ರತಿಭಟನೆಯಲ್ಲಿ ಕೃಷ್ಣಾ ಖಾನಪ್ಪನವರ, ಸಾಧಿಕ್ ಹಲ್ಯಾಳ, ದೀಪಕ್ ಹಂಜಿ, ಹನೀಪಸಾಬ ಸನದಿ, ರಮೇಶ ಕಮತಿ, ರೆಹಮಾನ ಮೊಕಾಶಿ, ಮುಗುಟ ಪೈಲವಾನ, ನಿಜಾಮ ನದಾಫ್, ಸುರೇಶ ಪತ್ತಾರ, ಮಲ್ಲು ಸಂಪಗಾರ, ನಿಯಾಜ ಪಟೇಲ್, ಮಹಾದೇವ ಮಕ್ಕಳಗೇರಿ, ದುರ್ಗಪ್ಪ ಗಾಡಿವಡ್ಡರ, ಬಸು ಹುಲಕುಂದ, ರಾಜೇಶ್ವರಿ ವಡೇರ, ಶೆಟ್ಟೆಪ್ಪ ಗಾಡಿವಡ್ಡರ, ದಸ್ತಗೀರ ಮುಲ್ಲಾ, ಫಕೀರಪ್ಪ ಗಣಾಚಾರಿ, ಬಸು ಗಾಡಿವಡ್ಡರ, ಅಮೀರಖಾನ ಜಗದಾಳೆ, ಹಣಮಂತ ಕಮತೆ, ಯಲ್ಲಪ್ಪ ಧರ್ಮಟ್ಟಿ, ಮಹಾಂತೇಶ ಮರಿಕಟ್ಟಿ, ಅಪ್ಪಯ್ಯ ತಿಗಡಿ, ವಿಠuಲ ಕಮತಿ, ಸಂತು ಕೋಲಕಾರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.