ಮುಂಜಾಗ್ರತಾ ಕ್ರಮಗಳಿಂದ ರೋಗ ನಿಯಂತ್ರಣ
ಡೆಂಗ್ಯೂ ನಿಯಂತ್ರಣ ದಿನಾಚರಣೆ
Team Udayavani, May 18, 2019, 6:15 AM IST
ಮಡಿಕೇರಿ: ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ರಾಷ್ಟ್ರೀಯ ಡೆಂಗ್ಯು ದಿನಾಚರಣೆ ಪ್ರಯುಕ್ತ ನಡೆದ ಅರಿವು ಜಾಥ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಚಾಲನೆ ನೀಡಿದರು.
ಜಾಥಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ರಾಷ್ಟ್ರೀಯ ಡೆಂಗ್ಯು ನಿಯಂತ್ರಣ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಲ್ಲಿ ಡೆಂಗ್ಯು ರೋಗ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಈ ಜಾಥದ ಮುಖ್ಯ ಉದ್ದೇಶವಾಗಿದೆ ಎಂದರು.
ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿ ಇಟ್ಟುಕೊಂಡು ಡೆಂಗ್ಯು ರೋಗ ಬಾರದಂತೆ ಎಚ್ಚರವಹಿಸಬೇಕು ಎಂದು ಅವರು ತಿಳಿಸಿದರು.
ಹೆಚ್ಚಿನ ಜಾಗೃತಿ
ಜಿಲ್ಲಾ ಕ್ಷಯರೋಗ ನಿಯಂತ್ರಣಾ ಧಿಕಾರಿ ಡಾ| ಶಿವಕುಮಾರ್ ಅವರು ಮಾತನಾಡಿ ರಾಷ್ಟ್ರೀಯ ಡೆಂಗ್ಯು ನಿಯಂತ್ರಣ ದಿನಾಚರಣೆ ಪ್ರಯುಕ್ತ ಡೆಂಗ್ಯೂ ತಡೆಗಟ್ಟುವ ನಿಟ್ಟಿನಲ್ಲಿ ಪ್ರತೀ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯರ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದ್ದು, ಲಾರ್ವ ಉತ್ಪತ್ತಿ ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಾಥಾವು ಬಾಲಭವನದಿಂದ ಆರಂಭಗೊಂಡು ಖಾಸಗಿ ಬಸ್ ನಿಲ್ದಾಣದ ಮೂಲಕ ಜನರಲ್ ಕೆ.ಎಂ.ತಿಮ್ಮಯ್ಯ ವೃತ್ತದವರೆಗೆ ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ಜಾಥದಲ್ಲಿ ಭಾಗವಹಿಸಿದ್ದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಶಾಸ್ತ್ರ ವಿಭಾಗದ ರಾಮಚಂದ್ರ ಕಾಮತ್, ಡಾ.ಆನಂದ್, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.