ನಾವು ಮಮತಾ ಜತೆಗಿದ್ದೇವೆ: ಎಚ್‌ಡಿಕೆ
Team Udayavani, May 18, 2019, 3:05 AM IST
ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಬಿಜೆಪಿ ತೊಂದರೆ ನೀಡುತ್ತಿದೆ. ನಾವು ಮಮತಾ ಬ್ಯಾನರ್ಜಿ ಜತೆಗಿದ್ದೇವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ಅವರಿಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿನಾಕಾರಣ ತೊಂದರೆ ನೀಡುತ್ತಿದೆ. ಪ್ರಾದೇಶಿಕ ಪಕ್ಷಗಳಿಗೆ ದೇಶಾದ್ಯಂತ ಬಿಜೆಪಿ ಇದೇ ರೀತಿಯ ಕಾಟ ಕೊಡುತ್ತಿದೆ. ಹೀಗಾಗಿ, ನಾವು ಮಮತಾ ಅವರ ಜತೆಗಿದ್ದೇವೆ. ಬಿಜೆಪಿ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಬಹಳ ಕಾಲದಿಂದಲೂ ನಾವು ಮಮತಾ ಬ್ಯಾನರ್ಜಿ ಅವರ ಪರ ಇದ್ದೇವೆ. ಮುಂದೆಯೂ ಅವರ ಪರ ಇರುತ್ತೇವೆ ಎಂದು ಲೋಕಸಭೆ ಚುನಾವಣೆ ಫಲಿತಾಂಶದ ನಂತರದ ಬೆಳವಣಿಗೆಗಳ ಬಗ್ಗೆ ಪರೋಕ್ಷ ಸುಳಿವು ನೀಡಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಎಂದೋ ಮುಖ್ಯಮಂತ್ರಿಯಾಗಬೇಕಿತ್ತು ಎಂಬ ಹೇಳಿಕೆ ವಿವಾದ ಆಗಿರುವ ಬಗ್ಗೆ ಹೆಚ್ಚು ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. “ನಾನು ರಾಜಕೀಯ ಲಾಭಕ್ಕಾಗಿ ಆ ಹೇಳಿಕೆ ನೀಡಿಲ್ಲ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.