ಬಿಸಿಲ ತಾಪ ಇಳಿಸಿದ ಮಳೆ
Team Udayavani, May 18, 2019, 3:08 AM IST
ಬೆಂಗಳೂರು: ರಾಜಧಾನಿಯಲ್ಲಿ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತಾಪಮಾನದಲ್ಲಿ 11 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಿದೆ. ಜತೆಗೆ ಶುಕ್ರವಾರ ಆಲಿಕಲ್ಲು ಸಹಿತ ಸುರಿದ ಧಾರಾಕಾರ ಮಳೆಗೆ 20ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು, ಕೆಲ ವಾಹನಗಳು ಜಖಂಗೊಂಡಿವೆ.
ಕಳೆದ ಕೆಲ ದಿನಗಳಿಂದ ನಗರದ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ದಾಟಿತ್ತು. ಪರಿಣಾಮ ತೀವ್ರ ಸೆಕೆಯ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಮೂರ್‍ನಾಲ್ಕು ದಿನಗಳಿಂದ ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಪಮಾನದಲ್ಲಿ ಭಾರೀ ಬದಲಾವಣೆಯಾಗಿದ್ದು, ಶುಕ್ರವಾರ ನಗರದಲ್ಲಿ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಇದರೊಂದಿಗೆ ನಗರದ ಪೂರ್ವ ಭಾಗದ ಬಹುತೇಕ ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದ್ದು, ಮಹದೇವಪುರ, ಜಯನಗರ, ಜೆ.ಪಿ.ನಗರ ಸೇರಿದಂತೆ ಪ್ರಮುಖ ಭಾಗಗಳಲ್ಲಿ 20ಕ್ಕೂ ಹೆಚ್ಚು ಮರ ಹಾಗೂ ಮರದ ಕೊಂಬೆಗಳು ಉರುಳಿವೆ. ಜಯನಗರ ಮೆಟ್ರೋ ನಿಲ್ದಾಣದ ಬಳಿ ಉರುಳಿದ ಭಾರಿ ಗಾತ್ರದ ಮರದ ಕೊಂಬೆಗಳು ಕಾರಿನ ಮೇಲೆ ಉರುಳಿದ ಪರಿಣಾಮ ಕಾರು ಜಖಂಗೊಂಡಿದೆ.
ಶುಕ್ರವಾರ ಮಧ್ಯಾಹ್ನ ಆರಂಭವಾದ ಧಾರಾಕಾರ ಮಳೆ ರಾತ್ರಿಯವರೆಗೆ ಸುರಿದ ಪರಿಣಾಮ ಕೆಲವೆಡೆ ರಸ್ತೆಗಳಲ್ಲಿ ನೀರು ನಿಂತು ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿತ್ತು. ಮರಗಳು ರಸ್ತೆಗೆ ಉರುಳಿದ ಪರಿಣಾಮ ತೀವ್ರ ಸಂಚಾರ ದಟ್ಟಣೆ ಉಂಟಾಗಿ ಮಳೆಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ವಾಹನ ಸವಾರರು ಎದುರಿಸಿದರು.
ನಿರಂತರವಾಗಿ ಸುರಿದ ಮಳೆಯಿಂದಾಗಿ ಟ್ರಿನಿಟಿ ವೃತ್ತ, ಇಂದಿರಾನಗರ 80 ಅಡಿ ರಸ್ತೆ, ಕೆ.ಆರ್.ವೃತ್ತ, ಲಿ ಮೆರಿಡಿಯನ್, ಸ್ಯಾಂಕಿ ರಸ್ತೆ, ಹಳೆ ಮದ್ರಾಸ್ ರಸ್ತೆ, ಕಾರ್ಪೊರೇಷನ್ ವೃತ್ತ ಸೇರಿದಂತೆ ನಗರದ ಪ್ರಮುಖ ಜಂಕ್ಷನ್‌ಗಳು ಹಾಗೂ ರಸ್ತೆಗಳಲ್ಲಿ ನೀರು ಹರಿದ ಪರಿಣಾಮ ವಾಹನ ಸಂಚಾರಕ್ಕೆ ತೊಂದರೆಯಾಯಿತು.
ಜೋರಾದ ಗಾಳಿಯೊಂದಿಗೆ ಸುರಿದ ಮಳೆಗೆ 20ಕ್ಕೂ ಹೆಚ್ಚು ಮರ ಹಾಗೂ ಮರದ ಕೊಂಬೆಗಳು ಧರೆಗುರುಳಿದರಿಂದ ಹಲವೆಡೆಗಳಲ್ಲಿ ದಟ್ಟಣೆ ಸಮಸ್ಯೆ ಉಂಟಾಗಿತ್ತು. ನಿಮ್ಹಾನ್ಸ್, ಜಯನಗರ, ಜೆ.ಪಿ.ನಗರ, ಸಂಪಿಗೆ ರಸ್ತೆಯಲ್ಲಿ ತಲಾ 1 ಮರ ಉರುಳಿದ್ದು, ಜೆಎಸ್‌ಎಸ್ ವೃತ್ತದಲ್ಲಿ ಬೃಹದಾಕಾರದ 2 ಮರಗಳು ಧರೆಗುರುಳಿವೆ.
ಉಳಿದಂತೆ ಮಹದೇವಪುರ ವಲಯದಲ್ಲಿ 6 ಬೃಹತ್ ಗಾತ್ರದ ಮರಗಳು ಹಾಗೂ 8 ಕಡೆಗಳಲ್ಲಿ ರೆಂಬೆ, ಕೊಂಬೆಗಳು ಉರುಳಿವೆ. ಪರಿಣಾಮ ಪ್ರಮುಖ ರಸ್ತೆಗಳಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗಿ ಜನರು ಸಮಸ್ಯೆ ಎದುರಾಗಿದ್ದು, ಪಾಲಿಕೆಯ ಅರಣ್ಯ ಘಟಕದ ಸಿಬ್ಬಂದಿ ಅವುಗಳನ್ನು ತೆರವುಗೊಳಿಸಿದ್ದಾರೆ.
ಆಲಿಕಲ್ಲು ತಂದ ಖುಷಿ: ನಗರದ ಪೂರ್ವ ಭಾಗದ ಮಹದೇವಪುರ, ಯಲಹಂಕ, ಹೆಬ್ಟಾಳ, ಕೆ.ಆರ್.ಪುರ ಸೇರಿದಂತೆ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಬಹುದಿನಗಳ ಬಳಿಕ ಆಲಿಕಲ್ಲು ಕಂಡ ಜನ ಅವುಗಳನ್ನು ಹಿಡಿದು ಖುಷಿ ಪಟ್ಟರು. ಇನ್ನು ಕೆಲವರು ಆಲಿಕಲ್ಲು ಹಿಡಿದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿ ಸಂತಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.