ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲು ಪಾಕ್ ವಿಫಲ ಎಂದ ಎಪಿಜಿ
Team Udayavani, May 18, 2019, 6:00 AM IST
ಇಸ್ಲಾಮಾಬಾದ್: ಹಣಕಾಸು ವಿಚಕ್ಷಣಾ ಕಾರ್ಯಪಡೆ (ಎಫ್ಎಟಿಎಫ್) ಪ್ರಾದೇಶಿಕ ಸಂಘಟನೆಯಾದ ಏಷ್ಯಾ ಪೆಸಿಫಿಕ್ ಗ್ರೂಪ್ ಎದುರು ಪಾಕಿಸ್ತಾನ ಭಾರಿ ಹಿನ್ನಡೆ ಅನುಭವಿಸಿದೆ. ಚೀನಾದಲ್ಲಿ ನಡೆದ ಸಭೆಯಲ್ಲಿ ಪಾಕಿಸ್ತಾನದ ವಿರುದ್ಧ ಕಠಿಣ ಶಬ್ದಗಳಲ್ಲಿ ಎಪಿಜಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಉಗ್ರ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವುದು ಮತ್ತು ಉಗ್ರರಿಗೆ ಹಣಕಾಸು ಸೌಲಭ್ಯವನ್ನು ಪೂರೈಸುವಲ್ಲಿ ಪಾಕಿಸ್ತಾನ ಕ್ರಮ ಸೂಕ್ತವಾಗಿಲ್ಲ ಎಂದು ಆಕ್ಷೇಪಿಸಲಾಗಿದೆ.
ಎರಡು ದಿನಗಳ ಈ ಸಭೆಗೆ ಪಾಕಿಸ್ತಾನದ ಹಣಕಾಸು ಕಾರ್ಯದರ್ಶಿ ಮೊಹಮ್ಮದ್ ಯೂನುಸ್ ದಾಘಾ 10 ಸದಸ್ಯರ ನಿಯೋಗದೊಂದಿಗೆ ಭಾಗವಹಿಸಿದ್ದರು. ಭಾರತದ ಸದಸ್ಯರಂತೂ ಪಾಕಿಸ್ತಾನದ ಅಧಿಕಾರಿಗಳಿಗೆ ಕಠಿಣ ಪ್ರಶ್ನೆಗಳನ್ನು ಕೇಳಿ ಬೆವರಿಳಿಸಿದ್ದಾರೆ ಎಂದು ಪಾಕಿಸ್ತಾನದ ದಿನಪತ್ರಿಕೆ ಡಾನ್ ವರದಿ ಮಾಡಿದೆ.
ಈಗಾಗಲೇ ಎಫ್ಎಟಿಎಫ್ನಿಂದ ಕಪ್ಪುಪಟ್ಟಿಗೆ ಸೇರುವ ಭೀತಿ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಮುಜುಗರ ತಂದಂತಾಗಿದೆ. ಈ ಸಭೆಯ ವರದಿಯನ್ನು ಎಫ್ಎಟಿಎಫ್ಗೆ ಸಲ್ಲಿಸಲಾಗುತ್ತದೆ ಮತ್ತು ಈ ಸಲ್ಲಿಕೆಯನ್ನು ಆಧರಿಸಿ ಎಫ್ಎಟಿಎಫ್ ಮುಂದಿನ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
Bangladesh: ಚಿನ್ಮಯ್ ಕೃಷ್ಣದಾಸ್ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.