ಟಿಆರ್‌ಎಸ್ ಜತೆಗೂ ಕೈಜೋಡಿಸಲು ಸಿದ್ಧ
Team Udayavani, May 18, 2019, 6:00 AM IST
ಬಿಜೆಪಿಯೇತರ ರಂಗ ರಚಿಸಲು ಹರಸಾಹಸ ಪಡುತ್ತಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಇದೀಗ ತಮ್ಮ ಬದ್ಧ ವೈರಿಯಾದ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್)ಯೊಂದಿಗೂ ಕೈಜೋಡಿಸಲು ಸಿದ್ಧ ಎಂಬ ಸಂದೇಶ ರವಾನಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಶುಕ್ರವಾರ ಈ ಕುರಿತು ಘೋಷಿಸಿದ ಅವರು, ‘ಕೇವಲ ಟಿಆರ್‌ಎಸ್ ಮಾತ್ರವಲ್ಲ, ಬಿಜೆಪಿಯನ್ನು ವಿರೋಧಿಸುವ ಯಾವುದೇ ಪಕ್ಷವನ್ನು ಕೂಡ ಮಹಾಮೈತ್ರಿಗೆ ಸೇರಿಸಿಕೊಳ್ಳಲು ನಾವು ಸಿದ್ಧರಿದ್ದೇವೆ’ ಎಂದು ಹೇಳಿದ್ದಾರೆ. ಕಾಂಗ್ರೆಸ್ ಎಲ್ಲ ಪ್ರಾದೇಶಿಕ ಪಕ್ಷಗಳ ಮನವೊಲಿಸಿ ಮಹಾಮೈತ್ರಿ ರಚಿಸಿದರೆ, ಆ ಮೈತ್ರಿಯಲ್ಲಿ ಟಿಆರ್‌ಎಸ್ ಒಳಗೊಳ್ಳುವುದನ್ನು ನಾಯ್ಡು ಒಪ್ಪಿಕೊಳ್ಳಲಿಕ್ಕಿಲ್ಲ ಎಂಬ ಮಾತುಗಳು ಕೇಳಿಬಂದ ಬೆನ್ನಲ್ಲೇ ನಾಯ್ಡು ಅವರಿಂದ ಈ ಹೇಳಿಕೆ ಹೊರಬಿದ್ದಿದೆ. ಶುಕ್ರವಾರ ದೆಹಲಿಯಲ್ಲಿ ಸಿಪಿಎಂ ನಾಯಕ ಸೀತಾರಾಂ ಯೆಚೂರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ರನ್ನು ಭೇಟಿಯಾಗಿ ಚುನಾವಣೋತ್ತರ ಸಂಭಾವ್ಯ ಮೈತ್ರಿ ಬಗ್ಗೆ ನಾಯ್ಡು ಚರ್ಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.