ಮತ್ತೆ ನಾವೇ ಬರ್ತೇವೆ

5 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಪತ್ರಿಕಾಗೋಷ್ಠಿ

Team Udayavani, May 18, 2019, 6:00 AM IST

19

ನವದೆಹಲಿ: ಕಳೆದ ಐದು ವರ್ಷಗಳಿಂದ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಲಿಲ್ಲ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಉತ್ತರವಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಜತೆಗೆ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನ ಭಾನುವಾರ ನಡೆಯಲಿದ್ದು, ಶುಕ್ರವಾರ ಸಂಜೆಯೇ ಬಹಿರಂಗ ಪ್ರಚಾರವೂ ಅಂತ್ಯಗೊಂಡಿತು. ಇದಕ್ಕೆ ಪೂರಕವಾಗಿ ಪತ್ರಿಕಾಗೋಷ್ಠಿ ನಡೆಸಿದ ಮೋದಿ ಮತ್ತು ಶಾದ್ವಯರು ಜನತೆ, ಪತ್ರಕರ್ತರು ಸೇರಿದಂತೆ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

ಶುಕ್ರವಾರ ಸಂಜೆ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಮಿತ್‌ ಶಾ ಅವರ ಪಕ್ಕದಲ್ಲೇ ಕುಳಿತಿದ್ದ ಮೋದಿ ಅವರು, ಆರಂಭದಲ್ಲಿ ಕೆಲವು ಪ್ರಾಸ್ತಾವಿಕ ನುಡಿಗಳನ್ನಷ್ಟೇ ಆಡಿದರು. ನಾವು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ, ಕಳೆದ ಕೆಲವು ದಶಕಗಳಿಂದಲೂ ಸತತ ಎರಡನೇ ಬಾರಿಗೆ ಪಕ್ಷವೊಂದು ಪೂರ್ಣ ಬಹುಮತ ಪಡೆದು ಅಧಿಕಾರಕ್ಕೇರಿರಲಿಲ್ಲ. ಈ ಸಾಧನೆಯನ್ನು ನಾವು ಮಾಡಲಿದ್ದೇವೆ ಎಂದು ಹೇಳಿದರು. ಹೊಸ ಮಾದರಿಯ ಆಡಳಿತವನ್ನು ನಾವು ಅನಾವರಣಗೊಳಿಸಿದ್ದೇವೆ. ಪ್ರತಿ ವ್ಯಕ್ತಿಗೂ ಆಡಳಿತವನ್ನು ತಲುಪಿಸಿದ್ದೇವೆ. ವಿಶ್ವವನ್ನೇ ಪ್ರಭಾವಿಸುವ ಶಕ್ತಿ ಭಾರತಕ್ಕಿದೆ ಎಂದು ಪ್ರಧಾನಿ ತಿಳಿಸಿದರು.

ಆದರೆ, ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ಮೋದಿ, ಪತ್ರಕರ್ತರಿಂದ ಪ್ರಶ್ನೆ ಸ್ವೀಕರಿಸಲಿಲ್ಲ. ಬಿಜೆಪಿಯ ನಿಯಮಗಳ ಪ್ರಕಾರ, ಈ ಪತ್ರಿಕಾಗೋಷ್ಠಿ ಕರೆದಿರುವುದು ಅಮಿತ್‌ ಶಾ ಆಗಿರುವುದರಿಂದ ಅವರಷ್ಟೇ ನಿಮ್ಮ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ ಎಂದು ಹೇಳಿ ಶಾ ಪಕ್ಕದಲ್ಲೇ ಕುಳಿದರು. ಅಲ್ಲದೆ, ಪತ್ರಕರ್ತೆಯೊಬ್ಬರು ಮೋದಿ ಯನ್ನುದ್ದೇಶಿಸಿ ಕೇಳಿದ ಪ್ರಶ್ನೆಗೆ ಅಮಿತ್‌ ಶಾಗೆ ಉತ್ತರಿಸುವಂತೆ ವಿನಂತಿಸಿದರು. ಎಲ್ಲ ಪ್ರಶ್ನೆಗೂ ಪ್ರಧಾನಿ ಮೋದಿ ಉತ್ತರಿಸಬೇಕಿಲ್ಲ ಎಂದು ಅಮಿತ್‌ ಶಾ ಹೇಳಿದರು.

300ಕ್ಕೂ ಹೆಚ್ಚು ಸೀಟು ಖಚಿತ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್‌ ಶಾ, ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಾವು ಮುಂದಿನ ಸರ್ಕಾರವನ್ನೂ ರಚಿಸುತ್ತೇವೆ. ಮೋದಿ ಮತ್ತೂಮ್ಮೆ ಸರ್ಕಾರ ರಚಿಸಬೇಕು ಎಂಬುದು ಜನರ ನಿರೀಕ್ಷೆಯೂ ಆಗಿದೆ. 300ಕ್ಕೂ ಹೆಚ್ಚು ಸೀಟ್‌ಗಳಲ್ಲಿ ನಾವು ಗೆಲ್ಲಲಿದ್ದೇವೆ. ನಮ್ಮ ಅಜೆಂಡಾವನ್ನು ಒಪ್ಪಿಕೊಳ್ಳುವ ಯಾರನ್ನೇ ಆದರೂ ನಾವು ಒಪ್ಪಿಕೊಳ್ಳುತ್ತೇವೆ ಎಂದಿದ್ದಾರೆ. ಅಲ್ಲದೆ, ವಿಪಕ್ಷಗಳು ಹೆಚ್ಚು ಪ್ರಬಲವಾಗುತ್ತಿವೆ ಎಂಬ ಊಹೆಯನ್ನೂ ಅವರು ತಳ್ಳಿಹಾಕಿದ್ದು, ದೆಹಲಿಯ ಎಸಿ ರೂಮಿನಲ್ಲಿ ಇಬ್ಬರು ನಾಯಕರು ಕೂತು ವಿಶ್ಲೇಷಣೆ ಮಾಡಿದ ತಕ್ಷಣ ಜನರು ಇದನ್ನೇ ಅನುಸರಿಸುತ್ತಾರೆ ಎಂಬುದು ತಪ್ಪು ಎಂದಿದ್ದಾರೆ.

ಕೇಸರಿ ಉಗ್ರವಾದ ಹೇಳಿಕೆ ವಿರುದ್ಧ ನಮ್ಮ ಹೋರಾಟ: ವಿವಾದಿತ ಹೇಳಿಕೆ ನೀಡುತ್ತಿರುವ ಪ್ರಜ್ಞಾ ಸಿಂಗ್‌ ಠಾಕೂರ್‌ರನ್ನು ಕಣಕ್ಕಿಳಿಸಿರುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾ, ಸುಳ್ಳು ಕೇಸ್‌ ದಾಖಲಿಸಿ ಕೇಸರಿ ಉಗ್ರವಾದ ಎಂಬ ಪದಪುಂಜವನ್ನು ಸೃಷ್ಟಿಸಿದ್ದನ್ನು ವಿರೋಧಿಸಿ ನಾವು ಪ್ರಜ್ಞಾ ಸಿಂಗ್‌ರನ್ನು ಕಣಕ್ಕಿಳಿಸಿದ್ದೇವೆ. ಸಂಝೋತಾ ಸ್ಫೋಟ ಪ್ರಕರಣದಲ್ಲಿ ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆ ಕೈವಾಡವಿದ್ದರೂ, ಪ್ರಜ್ಞಾರನ್ನು ಸಿಲುಕಿ ಹಾಕಿಸಲಾಗಿತ್ತು. ಇದಕ್ಕೆ ಕಾಂಗ್ರೆಸ್‌ ಕ್ಷಮೆ ಕೇಳಬೇಕು ಎಂದು ಶಾ ಹೇಳಿದ್ದಾರೆ.

ಗಾಂಧಿ ಬಗ್ಗೆ ಹೇಳಿಕೆ ನೀಡಿದ ಸಾಧ್ವಿ ಸೇರಿದಂತೆ ಇತರ ನಾಯಕರಿಗೆ ನೋಟಿಸ್‌ ನೀಡಿದ್ದೇವೆ. ಈ ನಾಯಕರ ಹೇಳಿಕೆಗಳು ವೈಯಕ್ತಿಕವಾಗಿವೆ ಮತ್ತು ಇವು ಪಕ್ಷಕ್ಕೆ ಸಂಬಂಧಿಸಿಲ್ಲ. ಅವರಿಂದ ಪ್ರತಿಕ್ರಿಯೆ ಕೇಳಿದ್ದೇವೆ. ಅದಕ್ಕೆ ಅನುಗುಣವಾಗಿ ನಾವು ಶಿಸ್ತುಕ್ರಮ ಬಗ್ಗೆ ಯೋಚಿಸುತ್ತೇವೆ ಎಂದಿದ್ದಾರೆ ಶಾ.

ಪ್ರಚಾರ ಕಾರ್ಯ ಯಶಸ್ವಿ: ಚುನಾವಣಾ ಪ್ರಚಾರ ಕಾರ್ಯ ಯಶಸ್ವಿಯಾಗಿ ನಡೆದಿದ್ದು, ನನ್ನ ಯಾವ ರ್ಯಾಲಿಯೂ ರದ್ದಾಗಿಲ್ಲ. ಕಾಪ್ಟರ್‌ಗಳು ಹಾಳಾಗಿದ್ದರೆ ಮತ್ತೂಂದು ಕಾಪ್ಟರ್‌ನಲ್ಲಿ ಪ್ರಯಾಣಿಸಿ ಎಲ್ಲ ರ್ಯಾಲಿಗಳಲ್ಲೂ ಭಾಗವಹಿಸಿದ್ದೇನೆ. ನನ್ನ ಚುನಾವಣಾ ಪ್ರಚಾರವನ್ನು ಅತ್ಯಂತ ಸೂಕ್ಷ್ಮವಾಗಿ ಯೋಜಿಸಿ ಮಾಡಲಾಗಿತ್ತು. ಈ ಹಿಂದಿನ ಚುನಾವಣೆಯ ವೇಳೆ ಐಪಿಎಲ್ ಪಂದ್ಯಗಳನ್ನು ನಡೆಸಲು ಅವಕಾಶ ನೀಡಿರಲಿಲ್ಲ. ಸರ್ಕಾರ ಸಶಕ್ತವಾಗಿದ್ದಾಗ ಐಪಿಎಲ್, ರಂಜಾನ್‌, ಶಾಲೆ ಪರೀಕ್ಷೆ ಮತ್ತು ಇತರ ಕೆಲಸಗಳೂ ಚುನಾವಣೆಯ ಜೊತೆಗೇ ನಡೆಯುತ್ತವೆ ಎಂದರು.

ಬಿಜೆಪಿ ಪ್ರಕಾರ ಇದು ಅತ್ಯಂತ ವಿಶಾಲವಾದ ಚುನಾವಣೆ. ಈ ಪ್ರಚಾರ ಕಾರ್ಯಕ್ಕೆ ನಾವು ತುಂಬಾ ಶ್ರಮ ಹಾಕಿದ್ದೇವೆ ಹಾಗೂ ಸ್ವಾತಂತ್ರ್ಯಾ ನಂತರದಲ್ಲೇ ಇಷ್ಟು ವ್ಯಾಪಕವಾಗಿ ಚುನಾವಣೆ ಪ್ರಚಾರವನ್ನು ಯೋಜಿಸಿದ್ದೇವೆ ಎಂದು ಶಾ ಹೇಳಿದ್ದಾರೆ.

ಘನತೆಯನ್ನು ಕಳೆದಿಲ್ಲ
ಈ ಬಾರಿಯ ಪ್ರಚಾರದಲ್ಲಿ ವೈಯಕ್ತಿಕ ಟೀಕೆಗಳು ನಡೆದಿದ್ದು, ಪ್ರಚಾರದ ಘನತೆಯನ್ನೇ ಬಿಜೆಪಿ ಕಳೆದಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆಯಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿದ ಶಾ, ವಿಪಕ್ಷಗಳಿಗೆ ನಮ್ಮ ಮೇಲೆ ಆರೋಪ ಮಾಡುವುದೇ ಕೆಲಸ. ಆದರೆ ನಾವು ಎಂದೂ ಕೀಳು ಮಟ್ಟದ ಪ್ರಚಾರವನ್ನು ಆರಂಭಿಸಿಲ್ಲ. ಅಲ್ಲದೆ ಚುನಾವಣೆ ಪ್ರಚಾರದ ಭಾಷಣದಲ್ಲಿ ಹೆಚ್ಚಿನ ಸಮಯ ಸರ್ಕಾರದ ಯೋಜನೆಗಳು ಹಾಗೂ ಇತರ ವಿವರಗಳೇ ಇರುತ್ತಿದ್ದವು. ಕೇವಲ ಒಂದೆರಡು ನಿಮಿಷವಷ್ಟೇ ವಿಪಕ್ಷಗಳ ಟೀಕೆಯ ಬಗ್ಗೆ ಪ್ರತಿಕ್ರಿಯೆ ಇರುತ್ತಿತ್ತು. ಆದರೆ ಮಾಧ್ಯಮಗಳು ಇದನ್ನೇ ದೊಡ್ಡದಾಗಿಸುತ್ತಿದ್ದವು. ನಮ್ಮ ಪಕ್ಷ ದೇಶದ ಎಲ್ಲೆಡೆ ಚುನಾವಣೆ ಪ್ರಚಾರ ನಡೆಸಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಮಾತ್ರವೇ ಹಿಂಸಾಚಾರವಾಗಿದೆ. ಯಾಕೆ ಇಲ್ಲಿ ಮಾತ್ರ ಹಿಂಸಾಚಾರ ನಡೆಯುತ್ತಿದೆ ಎಂದು ಯಾಕೆ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯನ್ನು ಪ್ರಶ್ನಿಸುತ್ತಿಲ್ಲ. ಬದಲಿಗೆ ನಮ್ಮನ್ನೇ ಪ.ಬಂಗಾಳ ಹಿಂಸೆಗೆ ಗುರಿಪಡಿಸುತ್ತಿದ್ದೀರಿ. ನಮ್ಮ ಹಲವು ಕಾರ್ಯಕರ್ತರು ಹಾಗೂ ಮುಖಂಡರು ಅಲ್ಲಿ ಸಾವನ್ನಪ್ಪಿದ್ದಾರೆ ಎಂದು ಶಾ ಹೇಳಿದ್ದಾರೆ.

ಪ್ರಧಾನಿ ಸುದ್ದಿಗೋಷ್ಠಿ ಅಣಕಿಸಿದ ರಾಹುಲ್

ನವದೆಹಲಿ: ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಚುನಾವಣಾ ಪ್ರಚಾರ ಮುಗಿಸಿ ಸುದ್ದಿಗೋಷ್ಠಿ ನಡೆಸುತ್ತಿದ್ದಂತೆಯೇ ಅದೇ ಸಮಯಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಸುದ್ದಿಗೋಷ್ಠಿ ನಡೆಸಿದರು. ರಾಹುಲ್ ಆಗಮಿಸುತ್ತಿದ್ದಂತೆಯೇ ಪ್ರಧಾನಿ ಕೂಡ ಪತ್ರಿಕಾಗೋಷ್ಠಿ ಆರಂಭಿಸಿದ್ದಾರೆ ಎಂಬುದು ತಿಳಿದು, ‘ಒಳ್ಳೆಯದು. ಸರ್ಕಾರದ ಕೊನೆಯ ದಿನಗಳಲ್ಲಿ ಅವರು ಸುದ್ದಿಗೋಷ್ಠಿ ನಡೆಸು ತ್ತಿದ್ದಾರೆ. ಅದರಲ್ಲೂ ಬಿಜೆಪಿ ಅಧ್ಯಕ್ಷರ ಜೊತೆಗೆ ಆಗಮಿ ಸುತ್ತಿದ್ದಾರಂತೆ’ ಎಂದು ವ್ಯಂಗ್ಯವಾಡಿದರು. ಅಲ್ಲದೆ, ರಫೇಲ್ ವಿವಾದ ಕುರಿತಂತೆ ನನ್ನ ಜೊತೆ ಚರ್ಚಿಸಲಿ ಎಂದು ಮತ್ತೂಮ್ಮೆ ಸವಾಲು ಹಾಕಿದ್ದಾರೆ. ಆದರೆ ಪತ್ರಕರ್ತರ ಪ್ರಶ್ನೆಗಳನ್ನು ಪ್ರಧಾನಿ ಸುದ್ದಿಗೋಷ್ಠಿಯಲ್ಲಿ ಸ್ವೀಕರಿಸಲಿಲ್ಲ ಎಂದು ತಿಳಿದ ನಂತರ ಟ್ವೀಟ್ ಮಾಡಿದ ರಾಹುಲ್, ‘ಮುಂದಿನ ಬಾರಿಯಾದರೂ ಸುದ್ದಿಗೋಷ್ಠಿಯಲ್ಲಿ ಉತ್ತರಿಸಲು ನಿಮಗೆ ಶಾ ಅವಕಾಶ ನೀಡುತ್ತಾರೆ ಎಂದು ನಾನು ಊಹಿಸುತ್ತೇನೆ’ ಎಂದು ವ್ಯಂಗ್ಯವಾಡಿದ್ದಾರೆ. ಈ ವೇಳೆ ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಕೆಲಸ ಮಾಡಲಿಲ್ಲ ಎಂದು ಅವರು ಆರೋಪಿಸಿದರು.

ರಾಹುಲ್ ಗಾಂಧಿಕೋರ್ಟ್‌ಗೆ ಹೋಗಲಿ 
ರಫೇಲ್ ವಿಷಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ತನ್ನ ಬಳಿ ಇರುವ ಎಲ್ಲ ದಾಖಲೆಗಳನ್ನು ಸುಪ್ರೀಂಕೋರ್ಟ್‌ಗೆ ನೀಡಲಿ. ರಫೇಲ್ ಡೀಲ್ನಲ್ಲಿ ಯಾವುದೇ ರಾಜಿ ಇರಲಿಲ್ಲ. ಯಾರನ್ನೂ ಓಲೈಕೆ ಮಾಡಿಲ್ಲ. ಒಂದು ಪೈಸೆ ಭ್ರಷ್ಟಾಚಾರವೂ ಆಗಿಲ್ಲ ಎಂದು ಶಾ ಹೇಳಿದ್ದಾರೆ.
ಮೇ 17ರಂದು ನಷ್ಟವಾಗಿತ್ತು: ಶಾ
2014 ರಲ್ಲಿ ಮೇ 16 ರಂದು ಲೋಕಸಭೆ ಚುನಾವಣೆ ಫ‌ಲಿತಾಂಶ ಬಂದಿತ್ತು. ಅದರ ಮರುದಿನ ಅಂದರೆ ಮೇ 17 ರಂದು, ಐದು ವರ್ಷಗಳ ಹಿಂದೆ ಇದೇ ದಿನ ಸಟ್ಟಾ ಬಜಾರ್‌ನಲ್ಲಿ ಹೂಡಿಕೆ ಮಾಡಿದ್ದವರೂ ನಷ್ಟ ಅನುಭವಿಸಿದ್ದರು. ಕಾಂಗ್ರೆಸ್‌ ಗೆಲ್ಲುತ್ತದೆ ಎಂದು ಬೆಟ್ ಕಟ್ಟಿದವರಿಗೆ ನಷ್ಟವಾಗಿತ್ತು ಎಂದು ಶಾ ನೆನಪಿಸಿಕೊಂಡಿದ್ದಾರೆ.

ಮೋದಿ ಹೇಳಿದ್ದು
1. ನಾನು ನಿಷ್ಠಾವಂತ ಸೈನಿಕ, ಪಕ್ಷದ ಅಧ್ಯಕ್ಷರೇ ನನಗೆ ಎಲ್ಲ .
2. ಕಳೆದ ಐದು ವರ್ಷ ಆಡಳಿತ ನಡೆಸಲು ಅನುವು ಮಾಡಿಕೊಟ್ಟ ನಿಮಗೆಲ್ಲಾ ವಂದಿಸಲು ಬಂದಿದ್ದೇನೆ.
3. ನಾವು ಅಧಿಕಾರಕ್ಕೆ ಬಂದಲ್ಲಿ, ಪ್ರಣಾಳಿಕೆಯಲ್ಲಿ ಹೇಳಿದ ಅಂಶಗಳನ್ನೆಲ್ಲಾ ಜಾರಿ ಮಾಡಲು ಶುರು ಮಾಡುತ್ತೇವೆ .
4. ಅತಿ ಶೀಘ್ರದಲ್ಲೇ ಹೊಸ ಸರ್ಕಾರ ತನ್ನ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆಡಳಿತ ತಲುಪಿಸುತ್ತೇವೆ .
5. ಆಡಳಿತ ಪಕ್ಷವೇ ಸಂಪೂರ್ಣ ಬಹುಮತದೊಂದಿಗೆ ಆರಿಸಿಬಂದಿರುವುದು ನಮ್ಮ ದೇಶದಲ್ಲಿ ನಡೆದಿಲ್ಲ. ಆದರೆ, ನಾವು ಆರಿಸಿ ಬರುತ್ತೇವೆ .
6. ಪ್ರಚಾರದ ವೇಳೆ ಉತ್ತಮ ಅನುಭವವಾಗಿದೆ. ನಮ್ಮ ಪ್ರಚಾರದ ಬಗ್ಗೆ ಶೋಧ ಮಾಡಬೇಕು ಎಂದೆನಿಸಿದರೆ ನಮ್ಮ ಅಧ್ಯಕ್ಷರಿಗೆ ಅನುಮತಿ ನೀಡುವಂತೆ ಕೇಳಿಕೊಳ್ಳುತ್ತೇನೆ. ನಮ್ಮ ಒಂದೇ ಒಂದು ಪ್ರಚಾರ ಸಭೆಯೂ ರದ್ದಾಗಲಿಲ್ಲ. ಹವಾಮಾನವೂ ನಮ್ಮ ಜತೆಯಲ್ಲೇ ಇತ್ತು.

ಟಾಪ್ ನ್ಯೂಸ್

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Jammu and Kashmir: Vehicle falls into gorge

Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.