ನರಸಿಂಹ ಸ್ವಾಮಿ ಗುಹೆಗೆ ಕಾರಂಜಾ ನೀರು

ನೀರಿಲ್ಲದ್ದಕ್ಕೆ ದೇವರ ದರ್ಶನಕ್ಕೆ ನಿಷೇಧ ಹೇರಲಾಗಿತ್ತು •ಗುಹೆಯಲ್ಲಿ ನೀರಿದ್ದರಷ್ಟೇ ಮಹತ್ವ ಎಂಬ ನಂಬಿಕೆ

Team Udayavani, May 18, 2019, 10:40 AM IST

18-May-04

ಬೀದರ: ನಗರದ ಹೊರವಲಯದ ಐತಿಹಾಸಿಕ ಝರಣಾ ನರಸಿಂಹ ಸ್ವಾಮಿ ಗುಹೆಯಲ್ಲಿ ಕಾರಂಜಾ ಜಲಾಶಯದಿಂದ ನೀರು ಹರಿಸಲಾಗಿದೆ.

ಬೀದರ: ಪೌರಾಣಿಕ ಇತಿಹಾಸ ಹೊಂದಿದ ಇಲ್ಲಿನ ನರಸಿಂಹ ಸ್ವಾಮಿ ಝರಣಿಯಲ್ಲಿ ನೀರಿನ ಕೊರತೆ ಇರುವುದರಿಂದ ದೇವರ ದರ್ಶನಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ಜಿಲ್ಲಾಡಳಿತ ಹಾಗೂ ದೇವಸ್ಥಾನ ಆಡಳಿತ ಮಂಡಳಿ ದೇವಸ್ಥಾನದ ಗುಹೆಗೆ ಕಾರಂಜಾ ಜಲಾಶಯದ ನೀರು ಹರಿಸುತ್ತಿದ್ದು, ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ.

ದೇಶದ ವಿವಿಧೆಡೆಯಿಂದ ಆಗಮಿಸುವ ಸಾವಿರಾರು ಭಕ್ತರು ದೇವರ ದರ್ಶನ ಸಿಗದ ಕಾರಣ ಇಲ್ಲಿನ ಆಡಳಿತ ವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಅಲ್ಲದೆ ಇದೀಗ ನರಸಿಂಹ ಸ್ವಾಮಿ ಜಯಂತಿ ಆಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಕ್ತರಿಗೆ ನರಸಿಂಹ ಸ್ವಾಮಿಯ ದರ್ಶನ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಾರಂಜಾ ಜಲಾಶಯದ ನೀರು ಹರಿಸಲು ಮುಂದಾಗಿದೆ.

ದೇವಸ್ಥಾನದ ಗುಹೆಯಲ್ಲಿ ನೀರಿದ್ದರೆ ಮಾತ್ರ ದೇವರ ದರ್ಶನಕ್ಕೆ ಮಹತ್ವ ಎಂಬ ನಂಬಿಕೆ ಇಲ್ಲಿದೆ. ಕೆಲವು ತಿಂಗಳಿಂದ ಗುಹೆಯಲ್ಲಿ ನೀರಿಲ್ಲದ ಕಾರಣ ದೇವರ ದರ್ಶನ ಸಂಪೂರ್ಣ ಬಂದ್‌ ಆಗಿತ್ತು. ನೀರು ಇಲ್ಲದೆ ಗುಹೆಯಲ್ಲಿ ಬಿರುಕುಗಳು ಕಂಡು ಬರುತ್ತಿವೆ ಎಂಬ ಮಾತುಗಳು ಕೂಡ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಗುಹೆಯಲ್ಲಿ ಕಾರಂಜಾ ಜಲಾಶಯದ ನೀರು ಹರಿಸುವ ಯೋಜನೆ ಹಾಕಿಕೊಂಡಿದೆ ಎನ್ನಲಾಗಿದೆ.

ಮೇ 17ರಿಂದ ನರಸಿಂಹ ಸ್ವಾಮಿಯ ಜಯಂತಿ ಆಚರಣೆ ನಡೆಯಲಿರುವುದರಿಂದ ದೂರದಿಂದ ಬರುವ ಭಕ್ತರಿಗೆ ಸ್ವಾಮಿಯ ದರ್ಶನ ಕಲ್ಪಿಸಬೇಕು ಎಂದು ಭಕ್ತರು ಒತ್ತಾಯಿಸುತ್ತಿದ್ದಾರೆ. ಈಗಾಗಲೇ ಜಿಲ್ಲಾಡಳಿತದ ಅಧಿಕಾರಿಗಳು ಎರಡು ದಿನಗಳಿಂದ ನೀರು ಹರಿಸುವ ಕಾರ್ಯಕ್ಕೆ ಮುಂದಾಗಿದ್ದು, ದೇವಸ್ಥಾನದ ಗುಹೆಯಲ್ಲಿ ನೀರು ನಿಲ್ಲಿಸಲಾಗುತ್ತಿದೆ. ಆದರೆ ಗುಹೆಯಲ್ಲಿ ಹರಿಸಿದ ನೀರು ಇಂಗುತ್ತಿದೆ ಎಂದು ತಿಳಿದುಬಂದಿದ್ದು, ಮಳೆ ಸುರಿಯುವವರೆಗೆ ನೀರು ನಿಲ್ಲಿಸುವ ಕೆಲಸ ಮಾಡಿದರೆ ದೇವಸ್ಥಾನದ ಗುಹೆ ಸುರಕ್ಷಿತವಾಗಿ ಉಳಿಯುತ್ತದೆ ಎಂಬ ಅನಿಸಿಕೆಯನ್ನು ಭಕ್ತರು ವ್ಯಕ್ತಪಡಿಸುತ್ತಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ| ಮಹಾದೇವ ಮಾತನಾಡಿ, ಭಕ್ತರ ಹಿತದೃಷ್ಟಿಯಿಂದಾಗಿ ನಗರದ ಪ್ರಸಿದ್ಧ ದೇವಾಲಯ ಶ್ರೀ ಕ್ಷೇತ್ರ ನರಸಿಂಹ ಝರಣಿಗೆ ಕಾರಂಜಾ ನದಿ ನೀರನ್ನು ಪೂರೈಸಲಾಗುತ್ತಿದೆ. ಭಕ್ತರ ಅನುಕೂಲಕ್ಕಾಗಿ ನದಿ ನೀರು ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಜಿಲ್ಲಾಧಿಕಾರಿ ಖುದ್ದು ಗುರುವಾರ ದೇವಸ್ಥಾನಕ್ಕೆ ಭೇಟಿ ನೀಡಿ ನೀರು ಪೂರೈಕೆ ಕುರಿತು ಪರಿಶೀಲನೆ ನಡೆಸಿದ್ದಾರೆ. ಬಹು ದಿನಗಳಿಂದ ನರಸಿಂಹ ಸ್ವಾಮಿ ದರ್ಶನ ಪಡೆಯಬೇಕು ಎಂದಿರುವ ಸಾವಿರಾರುೂ ಭಕ್ತರ ಆಸೆ ಈಡೇರುವ ಸಾಧ್ಯತೆ ಹೆಚ್ಚಿದೆ. ಆದರೆ, ಸದ್ಯ ಶುಕ್ರವಾರ ಸಂಜೆ ವರೆಗೂ ಗುಹೆಯಲ್ಲಿ ದೇವರ ದರ್ಶನಕ್ಕೆ ಯಾರಿಗೂ ಪ್ರವೇಶ ನೀಡಿಲ್ಲ.

ನರಸಿಂಹ ಸ್ವಾಮಿ ಜಯಂತಿ ನಿಮಿತ್ತ ದೇವರ ದರ್ಶನ ಕಲ್ಪಿಸುವುದಕ್ಕಾಗಿ ಕಾರಂಜಾ ಜಲಾಶಯದ ನೀರು ಬಿಡಲಾಗಿದೆ. ಇದರಿಂದ ಕಾರಂಜಾ ಜಲಾಶಯದಿಂದ ವಿವಿಧೆಡೆ ಪೂರೈಕೆ ಆಗುತ್ತಿರುವ ನೀರಿಗೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಒಂದು ಬಾರಿ ಗವಿಗೆ ಹರಿಸಿದ ನೀರನ್ನು ಪದೆಪದೇ ಶುದ್ಧೀಕರಣ ಮಾಡಿದರೆ ತಿಂಗಳ ಕಾಲ ಅದೇ ನೀರು ಬಳಸಬಹುದಾಗಿದೆ. ಈಗಾಗಲೇ ನೀರು ಶುದ್ಧೀಕರಣಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ನಿರಂತರ ದೇವರ ದರ್ಶನ ಕಲ್ಪಿಸಬೇಕು ಎಂಬ ಉದ್ದೇಶ ಇದೆ.
ಡಾ| ಎಚ್.ಆರ್‌. ಮಹಾದೇವ,
ಜಿಲ್ಲಾಧಿಕಾರಿಗಳು ಬೀದರ್‌

ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಕಾರಂಜಾ ಜಲಾಶಯದ ನೀರನ್ನು ಪೈಪ್‌ಲೈನ್‌ ಮೂಲಕ ಬಿಡಲಾಗುತ್ತಿದೆ. ದೇವಸ್ಥಾನದ ಗುಹೆಯಲ್ಲಿ ಈಗಾಗಲೇ ನೀರು ತುಂಬಿಸುವ ಕಾರ್ಯ ಮುಗಿಯುವ ಹಂತಕ್ಕೆ ಬಂದಿದ್ದು, ಸಾರ್ವಜನಿಕರಿಗೆ ದೇವರ ದರ್ಶನ ಕಲ್ಪಿಸಲಾಗುವುದು.
ಡಾ| ಶಂಕರ ವಣಕ್ಯಾಳ,
ಸಹಾಯಕ ಆಯುಕ್ತರು

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.