ಕಾಸರಗೋಡು ವಾಗ್ಮಾನ್ ದೇವರಮನೆಯಲ್ಲಿ ಪುನಃ ಪ್ರತಿಷ್ಠೆ ಸಂಪನ್ನ
Team Udayavani, May 18, 2019, 4:16 PM IST
ಬದಿಯಡ್ಕ: ಕುಂಡಂಗುಳಿ ಜಾಲುಮನೆ ಕೋಟೆಬಯಲು ವಾಗ್ಮಾನ್ ದೇವರಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಿತು.
ಬೆಳಿಗ್ಗೆ ಬ್ರಹ್ಮಶ್ರೀ ಇರುವೈಲು ಕೇಶವದಾಸ ತಂತ್ರಿ ಮತ್ತು ಬ್ರಹ್ಮಶ್ರೀ ಇರುವೈಲು ಕೃಷ್ಣದಾಸ ತಂತ್ರಿಗಳ ನೇತತ್ವದಲ್ಲಿ ಆರಾಧನಾ ಶಕ್ತಿಗಳಾದ ಶ್ರೀ ಮಹಿಷ ಮರ್ದಿನಿ, ಶ್ರೀ ಆರ್ಯಕಾತ್ಯಾಯಿನಿ ದೇವಿ, ಶ್ರೀ ವಿಷ್ಣುಮೂರ್ತಿ, ಶ್ರೀ ಧೂಮಾವತೀ, ರಕ್ತೇಶ್ವರೀ, ಗುಳಿಗ ಸಾನ್ನಿಧ್ಯಗಳ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ತಂಬಿಲ, ಪಾನಕಪೂಜೆ ಮೊದಲಾದ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ಆರ್ಯ-ಮರಾಠ ಸಮಾಜದ ವಾಗ್ಮಾನ್ ಕುಟುಂಬದವರು, ಇತರ ಕುಟುಂಬದವರು, ಇತರ ಸಮಾಜ ಬಂಧುಗಳೇ ಮೊದಲಾದ ಸಾವಿರಕ್ಕೂ ಅಧಿಕ ಮಂದಿ ಈ ಸಂದರ್ಭದಲ್ಲಿ ಭಾಗಿಗಳಾದರು. ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಆಶೀರ್ವಚನ ನೀಡಿದರು. ಬ್ರಹ್ಮಶ್ರೀ ಇರುವೈಲು ಕೇಶವದಾಸ ತಂತ್ರಿ ಮತ್ತು ಬ್ರಹ್ಮಶ್ರೀ ಇರುವೈಲು ಕೃಷ್ಣದಾಸ ತಂತ್ರಿಗಳಿಂದ ಅನುಗ್ರಹ ಭಾಷಣ ಮಾಡಿದರು. ವಾಗ್ಮಾನ್ ಸೇವಾ ಸಮಿತಿ ಅಧ್ಯಕ್ಷ ರಾಘವೇಂದ್ರ ರಾವ್ ಹುಣ್ಸೆಡ್ಕ ಅಧ್ಯಕ್ಷತೆ ವಹಿಸಿದ್ದರು. ಆಕಾಶವಾಣಿ ಕಲಾವಿದ ಮಹಾಬಲೇಶ್ವರ ಹೆಬ್ಟಾರ್ ಧಾರ್ಮಿಕ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಕುಟುಂಬದ ಹಿರಿಯರನ್ನು, ವಾಸ್ತು ಶಿಲ್ಪಿಗಳನ್ನು ಸನ್ಮಾನಿಸಲಾಯಿತು.
ಸಂಜೆ ದೆ„ವದ ಕೋಲದ ಅಂಗವಾಗಿ ಕುಂಡಂಗುಳಿ ಶ್ರೀ ವಿಷ್ಣುಮೂರ್ತಿ ಮತ್ತು ಧೂಮಾವತಿ ದೆ„ವಸ್ಥಾನದಿಂದ ದೆ„ವಗಳ ಭಂಡಾರ ಆಗಮನ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟ ಕೀಚಕ-ಮಾಯಾ ತಿಲೋತ್ತಮೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.