ಬೆಳೆ ನಷ್ಟ ಪರಿಹಾರ ಎಲ್ಲರಿಗೂ ವಿಸ್ತರಿಸಿ

ಬೆಳೆ ನಷ್ಟ ಪರಿಹಾರ ಎಲ್ಲಾ ತಾಲೂಕುಗಳಿಗೆ ವಿಸ್ತರಿಸಲು ಆಗ್ರಹಿಸಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು, ರೈತರಿಂದ ಪ್ರತಿಭಟನೆ

Team Udayavani, May 18, 2019, 4:20 PM IST

mandya-tdy-2..

ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ನೇತೃತ್ವದಲ್ಲಿ ತಹಶೀಲ್ದಾರ್‌ ಬಿ.ಗೀತಾ ಅವರಿಗೆ ಮನವಿ ಸಲ್ಲಿಸಲಾಯಿತು.

ಮದ್ದೂರು: ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಗೆ ವಿಸ್ತರಿಸಿ ಪರಿಹಾರ ನೀಡುವಂತೆ ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಬಿ.ಗೀತಾ ಅವರಿಗೆ ಮನವಿ ಸಲ್ಲಿಸಿದರು.

ಸಂಘಟನೆಯ ರಾಜ್ಯಾಧ್ಯಕ್ಷ ರಮೇಶ್‌ಗೌಡ ನೇತೃತ್ವದಲ್ಲಿ ಪಟ್ಟಣದ ತಾಲೂಕು ಕಚೇರಿ ಬಳಿ ಜಮಾವಣೆಗೊಂಡ ಕಾರ್ಯಕರ್ತರು, ರೈತರು, ಸರ್ಕಾರ ಹಾಗೂ ಜಿಲ್ಲಾ ಮತ್ತು ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಕೂಡಲೇ ಜಿಲ್ಲೆಯಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನಹರಿಸುವಂತೆ ಆಗ್ರಹಿಸಿದರು.

ಎಲ್ಲಾ ತಾಲೂಕುಗಳನ್ನು ಸೇರಿಸಿ: ಜಿಲ್ಲೆಯ ಪಾಂಡವಪುರ ಹಾಗೂ ಶ್ರೀರಂಗಪಟ್ಟಣ ತಾಲೂಕು ಗಳನ್ನು ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿ ಹಾರಕ್ಕೆ ಸೀಮಿತಗೊಳಿಸಿದ್ದು ಕೂಡಲೇ ಎಲ್ಲಾ ತಾಲೂ ಕುಗಳನ್ನು ಬೆಳೆ ನಷ್ಟ ಪರಿಹಾರಕ್ಕೆ ಸೇರಿಸಿ ಪರಿಹಾರ ವಿತರಿಸುವ ಜತೆಗೆ ಸಂಕಷ್ಟದಲ್ಲಿರುವ ರೈತರಿಗೆ ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದರು.

ಕಬ್ಬು ಬಾಕಿ ಪಾವತಿಸಿ: ತಾಲೂಕಿನ ಚಾಮುಂಡೇಶ್ವರಿ ಹಾಗೂ ಕೊಪ್ಪ ಎನ್ನೆಸ್ಸೆಲ್ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡಿದ ರೈತರಿಗೆ ಕೋಟ್ಯಂತರ ರೂ. ಹಣ ಬಾಕಿ ಉಳಿಸಿ ಕೊಂಡಿದ್ದು ಸರ್ಕಾರಕ್ಕೆ ಹಾಗೂ ಜಿಲ್ಲಾಡಳಿತಕ್ಕೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ಹಾಗೂ ಕಾರ್ಖಾನೆ ಆಡಳಿತ ಮಂಡಳಿ ಕ್ರಮ ಖಂಡಿಸಿದರು.

ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಹಣ ಬಿಡುಗಡೆಗೆ ಅಗತ್ಯ ಕ್ರಮ ವಹಿಸುವಂತೆ ತಪ್ಪಿದಲ್ಲಿ ಮುಂದಾಗುವ ಅನಾಹುತಗಳಿಗೆ ಜಿಲ್ಲಾಡಳಿತವೇ ನೇರ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದರಲ್ಲದೇ ಎನ್ನೆಸ್ಸೆಲ್ ಸಕ್ಕರೆ ಕಾರ್ಖಾನೆಯ ಸ್ಟೇಂಟ್ ವಾಶ್‌ ಮೇಜರ್‌ ಟ್ಯಾಂಕ್‌ ಹೊಡೆದು ಲಕ್ಷಾಂತರ ರೂ. ಬೆಳೆ ನಷ್ಟ ಹೊಂದಿದ್ದು ಕೂಡಲೇ ಜಿಲ್ಲಾಡಳಿತ ನಷ್ಟ ಹೊಂದಿರುವ ರೈತರಿಗೆ ಪರಿಹಾರ ವಿತರಿಸುವಂತೆ ಆಗ್ರಹಿಸಿದರು.

ಕುಡಿವ ನೀರು ಪೂರೈಸಿ: ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಗ್ರಾಮೀಣ ಪ್ರದೇಶದಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ, ಅಗತ್ಯವಿರುವೆಡೆ ಬೋರ್‌ವೆಲ್ ಕೊರೆಸಲು ಅಧಿಕಾರಿಗಳು ಮುಂದಾಗಬೇಕೆಂದರು.

ಈಗಾಗಲೇ ಶಾಲೆಗಳು ಆರಂಭವಾಗಿದ್ದು ಖಾಸಗಿ ಶಿಕ್ಷಣ ಸಂಸ್ಥೆಗಳು ಅಧಿಕ ಡೊನೇಷನ್‌ ಪಡೆಯುತ್ತಿದ್ದು ಇದರಿಂದಾಗಿ ಬಡದವರು ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಕೊಡಿಸುವುದೇ ದುಸ್ತರವಾಗಿದೆ. ಕೂಡಲೇ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಸಭೆ ಕರೆದು ಪ್ರತಿ ಶಾಲೆಯಲ್ಲಿ ನಾಮಫ‌ಲಕದಲ್ಲಿ ಪಡೆಯುವ ಶುಲ್ಕದ ಮಾಹಿತಿ ಪ್ರಕಟಿಸುವಂತೆ ಒತ್ತಾಯಿಸಿದರು.

ತಾಲೂಕಿನ ಕುಂದನಕುಪ್ಪೆ ಹಾಗೂ ಹೊಸೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಸ್ಥಳೀಯ ಗ್ರಾಪಂ ಅಧಿಕಾರಿಗಳು ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುತ್ತಿದ್ದು ಇನ್ನಿತರೆ ಬೇಡಿಕೆಗಳ ಸಂಬಂಧ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ರಮೇಶ್‌ಗೌಡ, ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್‌, ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್‌, ಪದಾಧಿಕಾರಿಗಳಾದ ಯರಗನಹಳ್ಳಿ ಮಹಾಲಿಂಗು, ಉಮೇಶ್‌, ಕುಮಾರ್‌, ಶೇಖರ್‌, ಶ್ರೀನಿವಾಸ್‌, ಮಹೇಶ್‌, ಕೃಷ್ಣ, ನಿಖೀಲ್, ರಂಜಿತ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.