ಶ್ರದ್ಧಾ ಕೇಂದ್ರ

Team Udayavani, May 19, 2019, 6:00 AM IST

1

ಕನ್ನಡ ಚಿತ್ರರಂಗದ ಮೂಲಕ ಬೆಳ್ಳಿತೆರೆಗೆ ಪರಿಚಯವಾಗಿ ಆನಂತರ ಪರಭಾಷೆಯತ್ತ ಮುಖ ಮಾಡಿ ಅಲ್ಲಿಯೂ ಬೇಡಿಕೆ ಪಡೆದುಕೊಳ್ಳುತ್ತಿರುವ ನಾಯಕ ನಟಿಯರ ಸಾಲಿಗೆ ಇತ್ತೀಚೆಗೆ ಸೇರ್ಪಡೆಯಾಗಿರುವ ಹೆಸರು ಶ್ರದ್ಧಾ ಶ್ರೀನಾಥ್‌. ಯೂ-ಟರ್ನ್ ಚಿತ್ರದ ಮೂಲಕ ಮೂಗುತಿ ಸುಂದರಿಯಾಗಿ ಕನ್ನಡದ ಸಿನಿ ಪ್ರಿಯರ ಮನಗೆದ್ದ ಚೆಲುವೆ ಶ್ರದ್ಧಾ ಶ್ರೀನಾಥ್‌, ಮೊದಲ ಚಿತ್ರದಲ್ಲೇ ಸಿನಿ ಪ್ರಿಯರ ಗಮನ ಸೆಳೆದ ಹುಡುಗಿ. ಯೂ-ಟರ್ನ್ ಚಿತ್ರ ಶ್ರದ್ಧಾಗೆ ಕನ್ನಡ ಮಾತ್ರವಲ್ಲ ತಮಿಳು, ತೆಲುಗು ಚಿತ್ರರಂಗದಿಂದಲೂ ಸಾಕಷ್ಟು ಅವಕಾಶಗಳನ್ನು ತಂದುಕೊಟ್ಟಿತು.

ಯೂ-ಟರ್ನ್ ಚಿತ್ರದ ನಂತರ ಕನ್ನಡದಲ್ಲಿ ಊರ್ವಿ, ಅಪರೇಷನ್‌ ಅಲಮೇಲಮ್ಮ ಚಿತ್ರವನ್ನು ಹೊರತುಪಡಿಸಿದರೆ, ಒಂದೆರಡು ಚಿತ್ರಗಳಲ್ಲಿ ಗೆಸ್ಟ್‌ ಅಪೀಯರೆನ್ಸ್‌ ಥರದ ಪಾತ್ರಗಳನ್ನು ಬಿಟ್ಟರೆ, ಶ್ರದ್ಧಾ ಕನ್ನಡಕ್ಕಿಂತ ಪರಭಾಷೆ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇ ಹೆಚ್ಚು ಎನ್ನಬಹುದು. ತಮಿಳಿನಲ್ಲಿ ಕಾಟ್ರಾ ವೇಲಿಯೆದೈ, ಇವನ್‌ ತಾಂತಿರನ್‌, ವಿಕ್ರಿಂ ವೇದಾ, ರಿಚ್ಚೀ, ತೆಲುಗಿನಲ್ಲಿ ಜರ್ಸಿ, ಕೆ-13, ಹಿಂದಿಯಲ್ಲಿ ಮಿಲನ್‌ ಟಾಕೀಸ್‌ ಹೀಗೆ ತಮಿಳು, ತೆಲುಗು, ಹಿಂದಿಯಲ್ಲಿ ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುವ ಮೂಲಕ ಸೈ ಎನಿಸಿಕೊಂಡ ಶ್ರದ್ಧಾ ಶ್ರೀನಾಥ್‌, ಸದ್ಯ ತಮಿಳು, ತೆಲುಗಿನಲ್ಲಿ ಸ್ಟಾರ್‌ ಹೀರೋಯಿನ್‌ ಸಮಂತಾಗೆ ಪೈಪೋಟಿ ನೀಡುತ್ತಿರುವ ನಟಿ ಎಂದೇ ಹೇಳಲಾಗುತ್ತಿದೆ. ಅಂದಹಾಗೆ, ಈ ಥರ ಹೇಳಲು ಕಾರಣ ಶ್ರದ್ಧಾ ಶ್ರೀನಾಥ್‌ಗೆ ತಮಿಳು, ತೆಲುಗಿನಲ್ಲಿ ಸಿಗುತ್ತಿರುವ ಭರ್ಜರಿ ಆಫ‌ರ್.

ಹೌದು, ಶ್ರದ್ಧಾ ಶ್ರೀನಾಥ್‌ ಕಳೆದ ವರ್ಷ ಅಭಿನಯಿಸಿದ್ದ ಜರ್ಸಿ ಚಿತ್ರ ಕೂಡ ಭರ್ಜರಿ ಯಶಸ್ಸು ಗಳಿಸಿತ್ತು. ಅದಾದ ಬಳಿಕ ಸಮಂತಾ ಅಭಿನಯಿಸಲಿದ್ದಾರೆ ಎಂಬ ಎರಡು-ಮೂರು ಚಿತ್ರಗಳು ಶ್ರದ್ಧಾ ಶ್ರೀನಾಥ್‌ ಪಾಲಾಗಿದೆ ಎನ್ನಲಾಗುತ್ತಿದೆ. ಇದೀಗ ಶ್ರದ್ಧಾ ತಮಿಳು ಸ್ಟಾರ್‌ ನಟ ವಿಶಾಲ್‌ಗೆ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ವಿಶಾಲ್‌ ನಟನೆಯ ಅಭಿಮನ್ಯುಡು ಸೀಕ್ವೆಲ್‌ ಚಿತ್ರದಲ್ಲಿ ನಾಯಕಿಯಾಗಿ ಶ್ರದ್ಧಾ ಮಿಂಚಲಿದ್ದಾರೆ. ಕಳೆದ ವರ್ಷ ವಿಶಾಲ್‌ ಹಾಗೂ ಸಮಂತಾ ಜೋಡಿಯಾಗಿ ನಟಿಸಿದ್ದ ಅಭಿಮನ್ಯುಡು ಚಿತ್ರ ಸೂಪರ್‌ ಹಿಟ್‌ ಆಗಿತ್ತು. ಇದೀಗ ಅದರ ಪಾರ್ಟ್‌-2 ರೆಡಿಯಾಗುತ್ತಿದೆ. ನಾಯಕಿ ಪಟ್ಟ ಮಾತ್ರ ಕನ್ನಡದ ನಟಿ ಶ್ರದ್ಧಾ ಪಾಲಿಗೆ ಒಲಿದಿದೆ. ಸದ್ಯ ಕನ್ನಡದಲ್ಲಿ ಶಿವರಾಜಕುಮಾರ್‌ ಅಭಿನಯದ ರುಸ್ತುಂ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ತಮಿಳು ಮತ್ತು ತೆಲುಗಿನಲ್ಲಿ ಶ್ರದ್ಧಾ ಕೈಯಲ್ಲಿ ಸುಮಾರು ಐದಾರು ಚಿತ್ರಗಳಿವೆ ಎನ್ನಲಾಗುತ್ತಿದೆ. ಒಟ್ಟಾರೆ ಕನ್ನಡದ ನಟಿಯೊಬ್ಬಳು ಬಹುಭಾಷೆಗಳಲ್ಲಿ ಮಿಂಚುತ್ತಿರುವುದು ಸಿನಿಪ್ರಿಯರ ಖುಷಿಗೆ ಕಾರಣವಾಗಿರುವುದಂತೂ ಸುಳ್ಳಲ್ಲ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

256

ಶಾಲ್ಮಲಾ ನಮ್ಮ ಶಾಲ್ಮಲಾ!

Life Lesson: ಬುದ್ಧ ಹೇಳಿದ ಜೀವನ ಪಾಠ ಬಿಟ್ಟುಕೊಡುವ ಕಲೆ

Life Lesson: ಬುದ್ಧ ಹೇಳಿದ ಜೀವನ ಪಾಠ ಬಿಟ್ಟುಕೊಡುವ ಕಲೆ

‌Second hand book stores: ಸೆಕೆಂಡ್‌ ಹ್ಯಾಂಡ್‌ಗೆ ಶೇಕ್‌ ಹ್ಯಾಂಡ್‌

‌Second hand book stores: ಸೆಕೆಂಡ್‌ ಹ್ಯಾಂಡ್‌ಗೆ ಶೇಕ್‌ ಹ್ಯಾಂಡ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.