“ಜೂ. 3ಕ್ಕೆ ಹೈಕೋರ್ಟ್‌ಗೆ ಕ್ರಿಯಾಯೋಜನೆ ಸಲ್ಲಿಕೆ’

ಸರಕು ಸಾಗಾಟ ವಾಹನಗಳಲ್ಲಿ ಕಾರ್ಮಿಕರ ಸಾಗಾಟ ತಡೆ

Team Udayavani, May 19, 2019, 6:00 AM IST

1705MLR16

ಮಹಾನಗರ : ಸರಕು ಸಾಗಾಟ ವಾಹನಗಳಲ್ಲಿ ಕಾರ್ಮಿಕರ ಸಾಗಾಟವನ್ನು ತಡೆಯುವ ಕುರಿತು ಕ್ರಿಯಾಯೋಜನೆಯನ್ನು ರೂಪಿಸಿ ಜೂ. 3ಕ್ಕೆ ರಾಜ್ಯ ಹೈಕೋರ್ಟ್‌ಗೆ ಸಲ್ಲಿಸಲಾಗುವುದು ಎಂದು ರಾಜ್ಯ ಕಾರ್ಮಿಕ ಆಯುಕ್ತ ಪಾಲಯ್ಯ ತಿಳಿಸಿದರು.

ಕ್ರಿಯಾಯೋಜನೆ ತಯಾರಿ ಕುರಿತಂತೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರಕು ಸಾಗಾಟ ವಾಹನಗಳಲ್ಲಿ ಜನರನ್ನು ಸಾಗಾಟ ಮಾಡುವುದನ್ನು ತಡೆಯಲು ರಾಜ್ಯ ಸರಕಾರಕ್ಕೆ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ರಾಜ್ಯ ಕಾನೂನುಸೇವಾ ಪ್ರಾಧಿಕಾರ ರಾಜ್ಯ ಹೈಕೋರ್ಟ್‌ಗೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ಹಿನ್ನೆಲೆಯಲ್ಲಿ ನ್ಯಾಯಾಲಯ ಎ. 22ರಂದು ನೀಡಿದ ಆದೇಶದಂತೆ ಸುರಕ್ಷಿತ, ಸುಲಲಿತ ಸಂಚಾರ ವ್ಯವಸ್ಥೆಗೆ ಸಮಗ್ರ ಕ್ರಿಯಯೋಜನೆ ರೂಪಿಸಲಾಗುತ್ತಿದೆ ಎಂದರು.

ಜಿಲ್ಲಾಮಟ್ಟದಲ್ಲಿ ಸಾರಿಗೆ ಇಲಾಖೆ, ಪೊಲೀಸ್‌ ಇಲಾಖೆ, ಕಾರ್ಮಿಕ ಇಲಾಖೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಆರ್‌ಡಿಪಿಆರ್‌, ಮಹಿಳಾ ಮತ್ತು ಮಕ್ಕಳ ಇಲಾಖೆ, ಪ್ಯಾಕ್ಟರೀಸ್‌ ಹಾಗೂ ಬಾಯ್ಲಿಲರ್‌ ಇಲಾಖೆ ಸಹಿತ ಸಂಬಂಧಪಟ್ಟ ಇಲಾಖೆಗಳು ಸೇರಿ ಸಮಗ್ರ ಜಿಲ್ಲಾ ಮಟ್ಟದ ಕ್ರಿಯಾಯೋಜನೆ ರೂಪಿಸಿ ಜಿಲ್ಲಾಧಿಕಾರಿಗೆ ಸಲ್ಲಿಸಬೇಕು. ಅಲ್ಲಿಂದ ಮೇ 25ರೊಳಗೆ ರಾಜ್ಯ ಸಾರಿಗೆ ಇಲಾಖೆಗೆ ಸಲ್ಲಿಸಬೇಕು ಎಂದರು.

ಸರಕುಸಾಗಾಟ ವಾಹನಗಳಲ್ಲಿ ಕಾರ್ಮಿಕರ ಸಂಚಾರ ತಪ್ಪು
ಕಾರ್ಮಿಕರಿಗೆ ಸೂಕ್ತ ಸಂಚಾರ ವ್ಯವಸ್ಥೆಗಳು ಇಲ್ಲದಿರುವ ಕಡೆಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಬೇಕು. ಯಾವುದೇ ಕಾರಣಕ್ಕೂ ಸರಕುಸಾಗಾಟ ವಾಹನಗಳಲ್ಲಿ ಕಾರ್ಮಿಕರ ಸಂಚರಿಸಬಾರದು. ಈಗಾಗಲೇ ಪ್ಯಾಕ್ಟರೀಸ್‌, ಬಾಯ್ಲರ್‌ ಇಲಾಖೆ ಮತ್ತು ಕಾರ್ಮಿಕ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇರುವ ಕಾರ್ಮಿಕರು, ಸಂಚಾರಕ್ಕೆ ಬಸ್‌ಗಳ ಕೊರತೆ ಕುರಿತು ಸಮೀಕ್ಷೆ ಮಾಡಿದ್ದಾರೆ.

ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕುಸಾಗಾಟ ವಾಹನಗಳಲ್ಲಿ ಕಾರ್ಮಿಕರ ಸಾಗಾಟ ಸಮಸ್ಯೆ ಕಡಿಮೆ ಎಂದರು.

13 ಲಕ್ಷ ರೂ. ದಂಡ ವಸೂಲಿ
ಸರಕು ಸಾಗಾಟ ವಾಹನಗಳಲ್ಲಿ ಜನರ ಸಾಗಾಟ ಕುರಿತು ಜಿಲ್ಲಾ ಸಾರಿಗೆ ಇಲಾಖೆ, ಪೊಲೀಸ್‌ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸುತ್ತಿದೆ. ಕಳೆದ ವರ್ಷ ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ 13 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಆರ್‌ಟಿಒ ಜಾನ್‌ ಮಿಸ್ಕಿತ್‌ ವಿವರಿಸಿದರು.

ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ ಮಾತನಾಡಿ, ದಕ್ಷಿಣ ಕನ್ನಡಜಿಲ್ಲೆಯಲ್ಲಿ 2.5 ಲಕ್ಷ ಕೃಷಿ ಕಾರ್ಮಿಕರು, 38,000 ಕಾರ್ಮಿಕರು, 58,000 ಅಂಗಡಿ, ವಾಣಿಜ್ಯ ಮಳಿಗೆಗಳ ಕಾರ್ಮಿಕರು, 56,000 ಕಟ್ಟಡ ಕಾರ್ಮಿಕರಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಮಿಕ ಮುಖಂಡರಾದ ವಿಶ್ವನಾಥ ಶೆಟ್ಟಿ , ವಸಂತ ಆಚಾರಿ, ಮಹಮ್ಮದ್‌ ರಫಿ ಮಾತನಾಡಿ, ಕಾರ್ಮಿಕರ ಸಂಚಾರಕ್ಕೆ ಸಮಸ್ಯೆ ಇರುವ ಕಡೆಗಳಲ್ಲಿ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಬೇಕು ಆಗ್ರಹಿಸಿದರು.

ಅಪರ ಜಿಲ್ಲಾಧಿಕಾರಿ ಆರ್‌. ವೆಂಕಟಾಚಲಪತಿ, ಪೊಲೀಸ್‌ ಉಪ ಆಯುಕ್ತ ಲಕ್ಷ್ಮೀ ಗಣೇಶ್‌, ಸಹಾಯಕ ಕಾರ್ಮಿಕ ಆಯುಕ್ತರಾದ ಕೆ.ಬಿ. ನಾಗರಾಜ್‌, ಜಾನ್ಸನ್‌ ಕೆ.ಜೆ., ಉಪಸ್ಥಿತರಿದ್ದರು.

ಶಾಲಾವಾಹನಗಳಲ್ಲಿ
ಮಕ್ಕಳ ಮಿತಿ: ಜಾಗೃತಿ
ಆಟೋರಿಕ್ಷಾ, ವ್ಯಾನ್‌ಗಳು ಸಹಿತ ಶಾಲಾವಾಹನಗಳಲ್ಲಿ ಮಿತಿ ಮೀರಿದ ಸಂಖ್ಯೆಯಲ್ಲಿ ಮಕ್ಕಳ ಸಾಗಾಟ ತಡೆ ಕುರಿತು ಶಿಕ್ಷಣ ಇಲಾಖೆ ವತಿಯಿಂದ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಮೇ 13 ರಂದು ತಾಲೂಕು ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಮೇ 27ರಿಂದ 30ರ ವರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ ಶಾಲಾಡಳಿತ ಮಂಡಳಿ, ಶಾಲಾ ವಾಹನಗಳ ಚಾಲಕರು, ಹೆತ್ತವರು ಒಳಗೊಂಡಂತೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ವಿದ್ಯಾಂಗ ಉಪನಿರ್ದೇಶಕ ಶಿವರಾಮಯ್ಯ ತಿಳಿಸಿದರು.

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4

Belthangady: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.