“ದೇಶಕ್ಕಾಗಿ ಪ್ರಾಣ ತೆತ್ತವರ ಅವಹೇಳನ ಸಲ್ಲದು’
Team Udayavani, May 19, 2019, 6:10 AM IST
ಉಡುಪಿ: ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯ ಕುರಿತಾಗಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ, ಬಿಜೆಪಿ ಲೋಕಸಭೆ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಅವರು ನೀಡಿದ ಹೇಳಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾಂಗ್ರೆಸ್ ಭವನದ ಎದುರು ಶನಿವಾರ ಪ್ರತಿಭಟನೆ ನಡೆಸಿತು.
ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರ. ಕಾರ್ಯದರ್ಶಿ ಎಂ.ಎ. ಗಫೂರ್ ಮಾತನಾಡಿ, ಬಿಜೆಪಿ ನಾಯಕರು ಮಹಾತ್ಮಾ ಗಾಂಧಿ ಹತ್ಯೆ ಹಂತಕರನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈಭವೀಕರಿಸುತ್ತಿರುವುದು ಸರಿಯಲ್ಲ. ನಳಿನ್ ಕುಮಾರ್ ಕಟೀಲು ಅವರು ದೇಶಕ್ಕಾಗಿ ಪ್ರಾಣ ತೆತ್ತ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರನ್ನು ಅವಮಾನ ಮಾಡಿರುವುದು ಖಂಡನೀಯ ಎಂದರು.
ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ, ಕೆಪಿಸಿಸಿ ವೆರೋನಿಕ ಕರ್ನೇಲಿಯೊ, ಮುರಳಿ ಶೆಟ್ಟಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾಧ್ಯಕ್ಷೆ ರೋಶನಿ ಒಲವೇರ್, ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಶಶಿಧರ್ ಶೆಟ್ಟಿ, ವಕ್ತಾರ ಭಾಸ್ಕರ್‌ರಾವ್ ಕಿದಿಯೂರು, ಪದಾಧಿಕಾರಿಗಳಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ಕಿಶಾನ್ ಹೆಗ್ಡೆ , ರಮೇಶ್ ಕಾಂಚನ್, ಡಾ| ಸುನೀತಾ, ಗಣೇಶ್ ನೇಗಿ, ಕುಶಾಲ್ ಶೆಟ್ಟಿ, ಅಶೋಕ್ ಕುಮಾರ್ ಕೊಡವೂರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.