ಅಪಾಯದ ಸ್ಥಿತಿಯಲ್ಲಿ ಬೆಂಗಳೂರು: ಯೋಗೇಶ್‌ ರಂಗನಾಥ್‌

Team Udayavani, May 19, 2019, 3:08 AM IST

apayada

ಬೆಂಗಳೂರು: “ರಾಜ್ಯ ರಾಜಧಾನಿಯ ಕೆಲವು ಪ್ರದೇಶಗಳು ಈಗಾಗಲೇ ದೆಹಲಿಯ ಸ್ಥಿತಿಯನ್ನು ಎದುರಿಸುತ್ತಿವೆ’ ಎಂದು ಕ್ಲೀನ್‌ಏರ್‌ ಪ್ಲಾಟ್‌ಫಾರಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಶ್‌ ರಂಗನಾಥ್‌ ಆತಂಕ ವ್ಯಕ್ತಪಡಿಸಿದರು.

ಉಸಿರಾಡಲ್ಪಡುವಾಗ ದೇಹವನ್ನು ಸೇರುವ ಧೂಳಿನ ಕಣ “ಪಿಎಂ-2.5′ ಪ್ರಮಾಣ ನಗರದ ಸರ್ಜಾಪುರ, ಮಾನ್ಯತಾ ಟೆಕ್‌ಪಾರ್ಕ್‌, ಟಿನ್‌ಫ್ಯಾಕ್ಟರಿ ಸೇರಿದಂತೆ ಹಲವು ಕಡೆಗಳಲ್ಲಿ ಪೀಕ್‌ ಅವರ್‌ನಲ್ಲಿ 500ರಿಂದ 600ಕ್ಕೆ ಏರಿಕೆ ಆಗಿದ್ದು ಕಂಡುಬಂದಿದೆ. ಇದು ರಾಷ್ಟ್ರೀಯ ಮಟ್ಟಕ್ಕಿಂತ ಸುಮಾರು ಪಟ್ಟು ಅಧಿಕವಾಗಿದೆ. ಇದರಲ್ಲಿ ವಾಹನಗಳ ಕೊಡುಗೆ ಅತಿ ಹೆಚ್ಚು ಇದೆ ಎಂದು ಕಳವಳ ವ್ಯಕ್ತಪಡಿಸಿದರು.

ನಗರದಲ್ಲಿ ವಿವಿಧ ಮಾದರಿಯ ಸಾರಿಗೆ ವಾಹನಗಳಿಂದ ಶೇ. 40ರಿಂದ 50ರಷ್ಟು ಹಾಗೂ ರಸ್ತೆ ಧೂಳಿನಿಂದ ಶೇ. 15ರಿಂದ 20ರಷ್ಟು ವಾಯುಮಾಲಿನ್ಯ ಉಂಟಾಗುತ್ತಿದೆ. ಒಟ್ಟಾರೆಯಾಗಿ ಶೇ.50ರಿಂದ 70ರಷ್ಟು ವಾಯುಮಾಲಿನ್ಯ ಸಾರಿಗೆ ವ್ಯವಸ್ಥೆಗೆ ಸಂಬಂಧಿಸಿದ ವಿವಿಧ ವಲಯದಿಂದ ಆಗುತ್ತಿದೆ. ಈ ಪಿಎಂ-2.5 ಧೂಳಿನ ಕಣಗಳು ನೇರವಾಗಿ ಶ್ವಾಸಕೋಶವನ್ನು ಪ್ರವೇಶಿಸಿ, ಆ ಮೂಲಕ ರಕ್ತದಲ್ಲಿ ಸೇರಲ್ಪಡುತ್ತವೆ. ಇದರಿಂದ ಹಲವು ರೀತಿಯ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದರು.

ಟ್ರಾಫಿಕ್‌ ಪೊಲೀಸರಿಂದಲೇ ಎಲ್ಲವೂ ಸಾಧ್ಯವಿಲ್ಲ. ನಾಲ್ಕೈದು ಇಲಾಖೆಗಳು, ಸಾರ್ವಜನಿಕರು ವಾಯುಮಾಲಿನ್ಯ ನಿಯಂತ್ರಣಕ್ಕೆ ಕೈಜೋಡಿಸಬೇಕು. ಟ್ರಾಫಿಕ್‌ ಸಮಸ್ಯೆಗೆ ಕಡಿವಾಣ ಹಾಕಿದರೆ, ವಾಯುಮಾಲಿನ್ಯದ ಸಮಸ್ಯೆಯೂ ತಗ್ಗಲಿದೆ. ನಗರದಲ್ಲಿ ರಸ್ತೆ ಸುರಕ್ಷತಾ ವ್ಯವಸ್ಥೆ ಹೇಗಿದೆ ಎಂಬುದನ್ನು ಅರಿತು, ಅದಕ್ಕೆ ಸರಿಯಾದ ಕಾರ್ಯಯೋಜನೆ ರೂಪಿಸಬೇಕು. ಇದಕ್ಕೆ ಬಿಬಿಎಂಪಿಯಿಂದ ಯಾವ ರೀತಿಯ ನೀತಿ ಸಿದ್ಧಪಡಿಸಿದ್ದಾರೆ ಎನ್ನುವುದು ಇಲ್ಲಿ ಮುಖ್ಯವಾಗುತ್ತದೆ ಎಂದು ಹೇಳಿದರು.

“ಎಲ್ಲ ಇಲಾಖೆಗಳ ಸಮನ್ವಯ ಮತ್ತು ಸಾರ್ವಜನಿಕರ ಒಳಗೊಳ್ಳುವಿಕೆಯಿಂದ ಇದು ಸಾಕಾರವಾಗಬೇಕು. ಕ್ಲೀನ್‌ಏರ್‌ ಫ್ಲಾಟ್‌ಫಾರ್ಮ್ ವತಿಯಿಂದಲೂ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಕೆಲವು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದಲ್ಲದೆ, ಇನ್ನೂ ಹಲವು ಕಾರ್ಪೋರೆಟ್‌ ಕಂಪನಿಗಳು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಉತ್ಸುಕವಾಗಿವೆ. ಸರ್ಕಾರ ಅವುಗಳ ನೆರವು ಪಡೆಯಬೇಕು’ ಎಂದು ಸಲಹೆ ಮಾಡಿದರು.

ಟಾಪ್ ನ್ಯೂಸ್

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.