ಹೊನ್ನಾಳಿ ತಾಲೂಕಿಗೆ 4 ಇಂಗ್ಲಿಷ್‌ ಮಾಧ್ಯಮ ಶಾಲೆ ಭಾಗ್ಯ

ಈಗಿರುವ ಕನ್ನಡ ಮಾಧ್ಯಮ ಶಿಕ್ಷಕರಿಗೇ ಇಂಗ್ಲಿಷ್‌ ಮಾಧ್ಯಮದಲ್ಲಿ ಕಲಿಸಲು ತರಬೇತಿ

Team Udayavani, May 19, 2019, 11:18 AM IST

19-May-9

ಹೊನ್ನಾಳಿ: ದೇವನಾಯ್ಕಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ.

ಹೊನ್ನಾಳಿ: ಎಲ್ಲೆಡೆ ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಬಡ ಪೋಷಕರಿಗೂ ತಮ್ಮ ಮಕ್ಕಳು ಇಂಗ್ಲಿಷ್‌ ಮಾಧ್ಯಮ ಶಾಲೆಗಳಲ್ಲಿ ಓದಬೇಕು ಎಂಬ ಆಸೆ. ಇಂಗ್ಲಿಷ್‌ ಮಾಧ್ಯಮ ಶಾಲೆಗಳಲ್ಲಿ ಓದಿದವರು ಮಾತ್ರ ಇಂಜನಿಯರ್‌, ಡಾಕ್ಟರ್‌, ಅಧಿಕಾರಿ ಆಗುತ್ತಾರೆಂಬ ಭಾವನೆಯೂ ಇದಕ್ಕೆ ಕಾರಣ. ಇದಕ್ಕಾಗಿ ಬಡ ಪೋಷಕರು ಸಾಲಸೋಲ ಮಾಡಿಯಾದರೂ ತಮ್ಮ ಮಕ್ಕಳನ್ನು ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಸೇರಿಸುತ್ತಿದ್ದರು. ಇದನ್ನು ಮನಗಂಡ ರಾಜ್ಯ ಸರ್ಕಾರ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಒಂದರಿಂದ 10ನೇ ತರಗತಿಯವರೆಗೆ ಇಂಗ್ಲಿಷ್‌ ಮಾಧ್ಯಮ ಪ್ರಾರಂಭಿಸಿ ಬಡವರ ಮಕ್ಕಳ ಅಕ್ಷರ ಜ್ಞಾನಕ್ಕೆ ಮತ್ತಷ್ಟು ಬೆಳಕು ಚೆಲ್ಲಿದೆ.

ಇದುವರೆಗೂ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು 1ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಅಭ್ಯಾಸ ಮಾಡಿ ಪಿಯುನಲ್ಲಿ ಇಂಗ್ಲಿಷ್‌ ಮಾಧ್ಯಮದಲ್ಲಿ ವಿಜ್ಞಾನ ವಿಭಾಗ ಆರಿಸಿಕೊಂಡು ಚಡಪಡಿಸುತ್ತಿದ್ದರು. ಅನೇಕ ವಿದ್ಯಾರ್ಥಿಗಳು ಇಂಗ್ಲಿಷ್‌ ಮಾಧ್ಯಮದಲ್ಲಿ ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಜೀವಶಾಸ್ತ್ರ ವಿಷಯಗಳನ್ನು ಅರಗಿಸಿಕೊಳ್ಳದೆ ಅನುತ್ತೀರ್ಣವಾಗುತ್ತಿದ್ದರು. ಇದರಿಂದ ಕೆಲ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನೇ ಅರ್ಧಕ್ಕೆ ಮೊಟಕುಗೊಳಿಸಿದ ಘಟನೆಗಳೂ ನಡೆದಿವೆ.

ಈಗ ಹೊನ್ನಾಳಿ ತಾಲೂಕಿನ ಒಟ್ಟು ನಾಲ್ಕು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭಿಸಿ ಸರ್ಕಾರ ಆದೇಶ ಹೊರಡಿಸಿದೆ. ಪಟ್ಟಣಕ್ಕೆ ಹೊಂದಿಕೊಂಡಿರುವ ದೇವನಾಯ್ಕನಹಳ್ಳಿ ಸರ್ಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಬೆಳಗುತ್ತಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ, ನ್ಯಾಮತಿಯ ಕರ್ನಾಟಕ ಪಬ್ಲಿಕ್‌ ಶಾಲೆ ಮತ್ತು ಸಾಸ್ವೇಹಳ್ಳಿ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜುಗಳಲ್ಲಿ ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ಇಂಗ್ಲಿಷ್‌ ಮಾಧ್ಯಮ ಶಾಲೆಗಳು ಆರಂಭವಾಗಲಿವೆ.

ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರಿಗೇ ಸರ್ಕಾರ ಇಂಗ್ಲಿಷ್‌ ಮಾಧ್ಯಮದಲ್ಲಿ ಬೋಧನೆಯ ತರಬೇತಿ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಿಂದ ಇರುವ ಶಾಲೆಗಳಲ್ಲಿಯೇ ಇಂಗ್ಲಿಷ್‌ ಮಾಧ್ಯಮದ ಮೊದಲ ಇಯತ್ತೆ ಆರಂಭಿಸಲಾಗುತ್ತಿದೆ. ಹಾಗೂ ಪ್ರತಿ ವರ್ಷ ಮುಂದಿನ ಇಯತ್ತೆ ಸೇರಿಸಲಾಗುವುದು. ಸದ್ಯ ದೇವನಾಯ್ಕನಹಳ್ಳಿ ಸರ್ಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ನ್ಯಾಮತಿಯ ಕರ್ನಾಟಕ ಪಬ್ಲಿಕ್‌ ಶಾಲೆ ಮತ್ತು ಸಾಸ್ವೇಹಳ್ಳಿ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜುಗಳಲ್ಲಿ 8ನೇ ಇಯತ್ತೆಯಿಂದ 10ನೇ ತರಗತಿವರೆಗೆ ಇಂಗ್ಲಿಷ್‌ ಮಾಧ್ಯಮ ಇರುವುದರಿಂದ ಒಂದನೆಯ ತರಗತಿ ಆರಂಭಕ್ಕೆ ಯಾವುದೇ ಸಮಸ್ಯೆಯಾಗಲಿಕ್ಕಿಲ್ಲ ಎಂಬ ಭಾವನೆ ಇದೆ.

ಸರ್ಕಾರ ರಾಜ್ಯಾದ್ಯಂತ 1000 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ತೆರೆಯಲಿದೆ. ನಮ್ಮ ತಾಲೂಕಿನ ನಾಲ್ಕು ಪ್ರಾಥಮಿಕ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಇಂಗ್ಲಿಷ್‌ ಮಾಧ್ಯಮ ಬೋಧನೆಗೆ ಅವಕಾಶ ಮಾಡಿದೆ. ಇದೊಂದು ಒಳ್ಳೆಯ ಬೆಳವಣಿಗೆ.
ಜಿ.ರಾಜೀವ್‌,
ಬಿಇಒ, ಹೊನ್ನಾಳಿ.

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಬೋಧನೆಗೆ ಅವಕಾಶ ಮಾಡಿ ಕೊಟ್ಟಿರುವುದು ಉತ್ತಮ ಬೆಳವಣಿಗೆ. ಇದರಿಂದ ಸರ್ಕಾರಿ ಶಾಲೆಗಳ ಕಡೆ ಎಲ್ಲಾ ಮಕ್ಕಳು ಮುಖ ಮಾಡುತ್ತಾರೆ.
ಎಚ್.ಎಸ್‌. ಉಮಾಶಂಕರ್‌,
ಬಿಆರ್‌ಸಿ, ಹೊನ್ನಾಳಿ

ಎಂ.ಪಿ.ಎಂ.ವಿಜಯಾನಂದಸ್ವಾಮಿ

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.