ಜೋಳ ಬೆಳೆಗೆ 48.65 ಲಕ್ಷ ಬೆಳೆ ವಿಮೆ

ಮುಂಗಾರು ಮಳೆ ನಿರೀಕ್ಷೆಯಲ್ಲಿ ರೈತರುಬಿತ್ತನೆ ಕಾರ್ಯಕ್ಕೆ ಸಜ್ಜಾದ ಕೃಷಿ ಇಲಾಖೆ

Team Udayavani, May 19, 2019, 1:03 PM IST

19-May-17

ಬೀದರ: ತಾಲೂಕಿನ ವಿವಿಧೆಡೆ ರೈತರು ಬಿಸಿಲಿನ ಝಳದ ಮಧ್ಯೆಯೂ ಮುಂಗಾರು ಬಿತ್ತನೆಗೆ ಸಿದ್ಧತಾ ಚಟುವಟಿಕೆ ನಡೆಸುತ್ತಿದ್ದಾರೆ.

ಬೀದರ: ಕಳೆದ ವರ್ಷ ಹಿಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಜೋಳ ಬಿತ್ತನೆ ಮಾಡಿ ನಷ್ಟ ಅನುಭವಿಸಿದ ಜಿಲ್ಲೆಯ 657 ರೈತರಿಗೆ 48.65 ಲಕ್ಷ ರೂ. ಬೆಳೆ ವಿಮೆ ಹಣ ರೈತರ ಖಾತೆಗೆ ಜಮಾ ಮಾಡಲಾಗಿದೆ.

ಬೀದರ್‌ ತಾಲೂಕಿನ 36 ರೈತರಿಗೆ 3.68 ಲಕ್ಷ, ಭಾಲ್ಕಿ ತಾಲೂಕಿನ 490 ರೈತರಿಗೆ 35.47 ಲಕ್ಷ, ಬಸವಕಲ್ಯಾಣ ತಾಲೂಕಿನ 18 ರೈತರಿಗೆ 1.20 ಲಕ್ಷ, ಹುಮನಾಬಾದ ತಾಲೂಕಿನ 86 ರೈತರಿಗೆ 6.46 ಲಕ್ಷ ಹಾಗೂ ಔರಾದ ತಾಲೂಕಿನ 27 ರೈತರಿಗೆ 1.84 ಲಕ್ಷ ಹಣ ಬಿಡುಗಡೆ ಮಾಡಲಾಗಿದೆ. ಈಗಾಗಲೇ ರೈತರ ಖಾತೆಗೆ
ಹಣ ಹಾಕಲಾಗಿದ್ದು, ಕಡಲೆ ಸೇರಿದಂತೆ ಇತರೆ ಬೆಳೆಗಳ ವಿಮೆ ಕೂಡ ಬರುವ ಸಾಧ್ಯತೆ ಇದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಿ.ವಿದ್ಯಾನಂದ ಮಾಹಿತಿ ನೀಡಿದ್ದಾರೆ.

ಆ್ಯಪ್‌ನಲ್ಲಿ ಮಾಹಿತಿ ನಿರ್ವಹಣೆ: ಜಿಲ್ಲೆಯ ರೈತರು ಬೆಳೆ ವಿಮೆ ಮಾಡಿಸುವ ಮುನ್ನ ಹೊಲದಲ್ಲಿ ಇರುವ ಬೆಳೆಗೆ ಮಾತ್ರ ವಿಮೆ ಮಾಡಿಸಬೇಕು. ಒಂದು ಬೆಳೆ ಬೆಳೆದು, ಇನ್ನೊಂದು ಬೆಳೆಗೆ ವಿಮೆ ಮಾಡಿಸಲು ಈ ಬಾರಿ ಅವಕಾಶ ಇಲ್ಲ. ಕೃಷಿಯ ಎಲ್ಲ ಮಾಹಿತಿಗಳನ್ನು ಆ್ಯಪ್‌ ಮೂಲಕ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಹೊಲದಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ನೇರವಾಗಿ ನೋಡಬಹುದಾಗಿದೆ. ಬೆಳೆಯುವ ಬೆಳೆಗೆ ಮಾತ್ರ ವಿಮೆ ಮಾಡಿಸಬೇಕು ಎಂದು
ಕೃಷಿ ಇಲಾಖೆ ಅಧಿ ಕಾರಿಗಳು ರೈತರಿಗೆ ಸಲಹೆ ನೀಡುತ್ತಿದ್ದಾರೆ.

ತಾಂತ್ರಿಕ ಸಮಸ್ಯೆಯಾಗಿತ್ತು: ಕಳೆದ ವರ್ಷ ಬೆಳೆ ಹಾನಿ ಸಂಭವಿಸಿ 8 ತಿಂಗಳಿಗೂ ಅಧಿಕ ಸಮಯ ಕಳೆದರೂ ಕೂಡ ಇಂದಿಗೂ ಬೆಳೆ ವಿಮೆ ಹಣ
ರೈತರ ಖಾತೆಗೆ ಬಂದಿಲ್ಲ. ಇದಕ್ಕೆ ತಾಂತ್ರಿಕ ಸಮಸ್ಯೆಯೇ ಕಾರಣ ಎಂದು ಮೂಲಗಳಿಂದ ತಿಳಿದುಬಂದಿದ್ದು, ಕಳೆದ ವರ್ಷ ಸರ್ವೇ ಸಂದರ್ಭದಲ್ಲಿ ಹೊಲದಲ್ಲಿ ಬೆಳೆದ ಬೆಳೆಗೂ ಹಾಗೂ ರೈತರು ಮಾಡಿಸಿರುವ ಬೆಳೆ ವಿಮೆಗೂ
ಹೊಂದಾಣಿಕೆ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ವಿಮೆ ಹಣ ಹೊಂದಾಣಿಕೆ ಮಾಡುವಲ್ಲಿ ವಿಳಂಬ ಆಗಿರಬೇಕು ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಒಂದು ಬಾರಿ ಮಾತ್ರ ಬೆಳೆಗಳ ಸರ್ವೇ ಕಾರ್ಯ ನಡೆದಿದ್ದು, ಪ್ರಸಕ್ತ ಸಾಲಿನಲ್ಲಿ ಹೆಚ್ಚು ಸಮಸ್ಯೆಗಳು ಉದ್ಭವ ಆಗದಂತೆ ನೊಡಿಕೊಳ್ಳಲು ಮೂರು ಬಾರಿ ಬೆಳೆಗಳ ಸರ್ವೇ ನಡೆಸಲು ಕೃಷಿ ಇಲಾಖೆ ಚಿಂತನೆ ನಡೆಸಿದೆ.

ಮುಂಗಾರು ಬಿತ್ತನೆ ಸಿದ್ಧತೆ: ಕಳೆದ ಎರಡು ವರ್ಷಗಳಿಂದ ಬರಗಾಲದಿಂದ ತತ್ತರಿಸಿರುವ ಬೀದರ್‌ ಜಿಲ್ಲೆಯಲ್ಲಿ ಇದೀಗ ಮತ್ತೆ ಬರದ ಛಾಯೆ ಮಧ್ಯದಲ್ಲಿಯೇ ರೈತರು ಮುಂಗಾರು ಬಿತ್ತನೆಗೆ ಸಕಲ ಸಿದ್ಧತೆ ನಡೆಸಿದ್ದಾರೆ. ಜಿಲ್ಲೆಯ
3.60 ಲಕ್ಷ ಹೆಕ್ಟೇರ್‌ ಪ್ರದೇಶಲ್ಲಿ ಮುಂಗಾರು ಹಂಗಾಮಿನ ವಿವಿಧ ಬೆಳೆಗಳನ್ನು ಬೆಳೆಯಲು ಕೃಷಿ ಇಲಾಖೆ ಗುರಿ ಹೊಂದಿದೆ. ಜಿಲ್ಲೆಯ ಸುಮಾರು 1.07 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಸೋಯಾಬಿನ್‌ ಬಿತ್ತನೆ ಗುರಿ ಇದ್ದು, ಸುಮಾರು
45 ಸಾವಿರ ಕ್ವಿಂಟಲ್‌ ಸೋಯಾಬಿನ್‌, 74 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ತೊಗರಿ, 15 ಸಾವಿರಕ್ಕೂ ಅಧಿ ಕ ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು, ಉದ್ದು ಬೆಳೆ, 23 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಜೋಳ, 5 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಕಬ್ಬು ಬೆಳೆಸುವ ನಿಟ್ಟಿನಲ್ಲಿ ಕೃಷಿ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಮಳೆ ನಿರೀಕ್ಷೆ: ಈ ವರ್ಷ ಬೇಸಿಗೆಯಲ್ಲಿ ಸುರಿಯಬೇಕಾದ ಮಳೆ ಕೂಡ ಕೈಕೊಟ್ಟಿದ್ದು, ಜಿಲ್ಲೆಯ ರೈತರಿಗೆ ಆತಂಕ ಹುಟ್ಟಿಸುವಂತೆ
ಮಾಡಿದೆ. ಕಳೆದ ವರ್ಷ ಮುಂಗಾರು ಆರಂಭದಲ್ಲಿ ಉತ್ತಮ ಮಳೆ ಸುರಿದಿತ್ತು. ನಂತರ ಮಳೆ ಪ್ರಮಾಣ ಕಡಿಮೆಯಾಗಿ ಬೆಳೆ ಹಾನಿ ಸಂಭವಿಸಿತ್ತು. ದೇವರು ಈ ವರ್ಷವಾದರೂ ಸೂಕ್ತ ಸಮಯಕ್ಕೆ ಸೂಕ್ತ ಪ್ರಮಾಣದ ಮಳೆ ಸುರಿಸಲಿ ಎಂದು ರೈತರು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಮುಂಗಾರು ಹಂಗಾಮಿನಲ್ಲಿ
ಜಿಲ್ಲೆಯ ಸುಮಾರು 2 ಲಕ್ಷ ರೈತರು ಬಿತ್ತನೆ ಚಟುವಟಿಕೆಗಳಲ್ಲಿ ಭಾವಹಿಸಲಿದ್ದು, ಎಲ್ಲ ರೈತರು ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ.

ಮುಂಗಾರು ಬಿತ್ತನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ
171 ಕೇಂದ್ರಗಳು ಗೊಬ್ಬರ ವಿತರಣೆಗೆ ಸಜ್ಜಾಗಿವೆ. ಕಳೆದ ವರ್ಷ ಸೋಯಾ
ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ವರ್ಷ ಸೋಯಾ ಬಿಜಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಮಳೆ ಸುರಿದರೆ ಕೃಷಿ ಚಟುವಟಿಕೆಗಳು ಶುರುವಾಗಲಿದ್ದು, ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಜಿಲ್ಲೆಯ ರೈತರು ಈ ಬಾರಿ ಬೆಳೆ ವಿಮೆ ಮಾಡಿಸುವ ಸಂದರ್ಭದಲ್ಲಿ ಹೊಲದಲ್ಲಿ ಬಿತ್ತನೆ ಮಾಡಿದ ಬೆಳೆಗೆ ಮಾತ್ರ ವಿಮೆ ಮಾಡಿಸಬೇಕು. ಬಿತ್ತನೆ ಮಾಡದ ಬೆಳೆಗೆ ವಿಮೆ ಮಾಡಿಸಬಾರದು. ಕಳೆದ ವರ್ಷ ಹಿಂಗಾರಿನಲ್ಲಿ ಜೋಳ ಬಿತ್ತನೆ ಮಾಡಿದ ರೈತರಿಗೆ 48.65 ಲಕ್ಷ ವಿಮೆ ಹಣ ಬಿಡುಗಡೆ ಮಾಡಲಾಗಿದೆ.
.ಸಿ.ವಿದ್ಯಾನಂದ,
ಕೃಷಿ ಇಲಾಖೆಯ ಜಂಟಿ ನಿರ್ದೇಶಕ

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

6(1

Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್‌ ನಿಲ್ದಾಣ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.