ಧೂಳು ತಿನ್ನುತ್ತಿವೆ ಕೃಷಿ ಪರಿಕರ

ಪಶು ಆಸ್ಪತ್ರೆಗೆ ರೈತ ಮುಖಂಡರ ಮುತ್ತಿಗೆ • ಎಡಿ ರಾಚಪ್ಪ ವರ್ಗಾವಣೆಗೆ ಆಗ್ರಹ

Team Udayavani, May 19, 2019, 1:28 PM IST

19-May-20

ಲಿಂಗಸುಗೂರು: ಪಶು ಆಸ್ಪತ್ರೆಯ ದಾಸ್ತಾನು ಕೊಠಡಿಯಲ್ಲಿ ಧೂಳು ತಿನ್ನುತ್ತಿರುವ ಮೇವು ಕೊರೆಯುವ ಯಂತ್ರ

ಲಿಂಗಸುಗೂರು: ಸರ್ಕಾರ ರೈತರು, ಜಾನುವಾರು ಸಾಕಾಣಿಕೆದಾರರ ಅನುಕೂಲಕ್ಕಾಗಿ ಹಲವು ಪರಿಕರಗಳನ್ನು ಒದಗಿಸಿದೆ. ಆದರೆ ಇಲ್ಲಿನ ಅಧಿಕಾರಿಗಳು ಅವುಗಳನ್ನು ಅರ್ಹರಿಗೆ ವಿತರಿಸದೇ ಇರುವುದರಿಂದ ಹಲವು ವರ್ಷದಿಂದ ಪಟ್ಟಣದ ಪಶು ಆಸ್ಪತ್ರೆ ಗೋದಾಮಿನಲ್ಲಿ ಧೂಳು ತಿನ್ನುತ್ತಿವೆ.

ಪಟ್ಟಣದ ಪಶುಪಾಲನೆ ಇಲಾಖೆಗೆ ರೈತರಿಗೆ ವಿತರಿಸಲು ಮೇವು ಕೊರೆಯುವ ಯಂತ್ರ, ಆಯಿಲ್ ಇಂಜಿನ್‌, ಮೇವಿನ ಬೀಜ ಸೇರಿ ಹಲವು ಸಾಮಾಗ್ರಿಗಳನ್ನು ನೀಡಲಾಗುತ್ತಿದೆ. ಇವುಗಳನ್ನು ಅರ್ಹರಿಗೆ ಹಂಚಿಕೆ ಮಾಡಬೇಕಾದ ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ರಾಚಪ್ಪ ಅವರ ನಿರ್ಲಕ್ಷ್ಯದಿಂದ ಗೋದಾಮಿನಲ್ಲಿ ಧೂಳು ತಿನ್ನುತ್ತಿವೆ. ಇದಲ್ಲದೇ ಗ್ರಾಮೀಣ ಭಾಗದ ಪಶು ಆಸ್ಪತ್ರೆಗೆ ಮಂಜೂರಾಗಿರುವ ಸಾಮಾಗ್ರಿಗಳು ಕೂಡ ತಾಲೂಕು ಕೇಂದ್ರ ಸ್ಥಾನದಲ್ಲಿ ಕೊಳೆಯುತ್ತಿವೆ.

ರಾಶಿ ರಾಶಿ ಸಾಮಗ್ರಿಗಳು: ಪಟ್ಟಣದ ಪಶು ಆಸ್ಪತ್ರೆ ಆವರಣದಲ್ಲಿ ಹಳೆಯ ಎರಡು ಕಟ್ಟಡ ಮತ್ತು ಹೊಸ ಕಟ್ಟಡದ ತುಂಬಾ ಮೇವು ಕೊರೆಯುವ ಯಂತ್ರ, ಇಂಜಿನ್‌, ಮೇವಿನ ಬೀಜ ಸೇರಿ ಇತರೆ ಕೃಷಿ ಪರಿಕರಗಳು ನಿರುಪಯುಕ್ತವಾಗಿ ಬಿದ್ದಿವೆ. 50 ಸಾವಿರ ರೂ. ಮೌಲ್ಯದ ಕಿರ್ಲೋಸ್ಕರ್‌ ಕಂಪನಿಯ ಎರಡು ಆಯಿಲ್ ಎಂಜಿನ್‌ಗಳ ಬಾಕ್ಸ್‌ ಗಳಿವೆ. ಇವುಗಳನ್ನು ರೈತರಿಗೂ ಹಂಚಿಕೆ ಮಾಡದೇ ಇತ್ತ ಸರ್ಕಾರಕ್ಕೂ ಮರಳಿಸದೇ ಹಾಗೇ ಇಟ್ಟಿರುವ ಉದ್ದೇಶ ತಿಳಿಯದಾಗಿದೆ.

2014-15ನೇ ಸಾಲಿನಲ್ಲಿ ತಾಯಿ ಕೋಳಿ ಘಟಕ ಮಂಜೂರಾಗಿದೆ. ಇದಕ್ಕಾಗಿ ಕಟ್ಟಡ ನಿರ್ಮಿಸಲಾಗಿದ್ದು, ಘಟಕದ ಸಾಮಾಗ್ರಿಗಳು ಬಂದಿದ್ದರೂ ಸಹ ಘಟಕವನ್ನು ಪ್ರಾರಂಭಿಸುವಲ್ಲಿ ಇಲ್ಲಿನ ಅಧಿಕಾರಿಗಳು ವಿಫಲವಾಗಿದ್ದಾರೆ. ಪಶು ಸಂಗೋಪನಾ ಸಚಿವರ ತವರು ಜಿಲ್ಲೆಯಲ್ಲೇ ಈ ರೀತಿಯಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ.

ಮುತ್ತಿಗೆ-ಆಕ್ರೋಶ: ಪಶು ಆಸ್ಪತ್ರೆ ಗೋದಾಮಿನಲ್ಲಿ ಅನೇಕ ವರ್ಷಗಳಿಂದ ಕೃಷಿ ಪರಿಕರಗಳನ್ನು ದಾಸ್ತಾನು ಮಾಡಿರುವ ವಿಷಯ ತಿಳಿದ ರೈತ ಸಂಘದ ಮುಖಂಡರು ಆಸ್ಪತ್ರೆಗೆ ದೌಡಾಯಿಸಿ ಮೂರೂ ಕಟ್ಟಡಗಳ ಬೀಗ ತೆಗೆಯುವಂತೆ ಒತ್ತಾಯಿಸಿದರು. ಒತ್ತಡಕ್ಕೆ ಮಣಿದ ಸಿಬ್ಬಂದಿ ಬೀಗ ತೆಗೆದರು. ಕಟ್ಟಡದೊಳಗೆ ಕಣ್ಣಾಯಿಸಿದಲ್ಲೆಲ್ಲ ಸಾಮಗ್ರಿಗಳನ್ನು ಕಂಡು ರೈತರು ದಂಗಾದರು.

ಈ ಕುರಿತು ಪ್ರತಿಕ್ರಿಯಿಸಿರುವ ರೈತ ಮುಖಂಡ ಅಮರಣ್ಣ ಗುಡಿಹಾಳ, ಪಶು ಸಂಗೋಪನಾ ಸಹಾಯಕ ನಿರ್ದೇಶಕ ರಾಚಪ್ಪ ಅವರು ಕಳೆದ 25 ವರ್ಷಗಳಿಂದ ಇಲ್ಲಿಯೇ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರ ರೈತರಿಗಾಗಿ ಪರಿಕರಗಳನ್ನು ಮಂಜೂರುಗೊಳಿಸಿದರೂ ರಾಚಪ್ಪ ಅವರು ರೈತರಿಗೆ ಹಂಚಿಕೆ ಮಾಡದೇ ಗೋದಾಮಿನಲ್ಲಿ ಹಾಳಾಗುವಂತೆ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ. ರೈತರಿಗೆ ಯೋಜನೆಯ ಲಾಭ ಸಿಗದಂತೆ ಮೋಸ ಮಾಡಿದ್ದಾರೆ. ಸರ್ಕಾರದ ಯಾವುದೇ ಯೋಜನೆಗಳ ಬಗ್ಗೆ ಕಚೇರಿ ಸೂಚನಾ ಫಲಕದಲ್ಲಿ ಮಾಹಿತಿ ನೀಡಬೇಕು ಎಂಬುದು ನಿಯಮವಾಗಿದೆ. ಆದರೆ ಪಶು ಇಲಾಖೆಯಿಂದ ಯಾವುದೇ ಮಾಹಿತಿ ಇಲ್ಲದಾಗಿದೆ. ಕೂಡಲೇ ರಾಚಪ್ಪ ಅವರ ಮೇಲೆ ಕಾನೂನು ಕ್ರಮ ಜರುಗಿಸಿ ಅವರನ್ನು ವರ್ಗಾವಣೆ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.