ಲೋಕಸಭಾ ಚುನಾವಣೆ: ಮತ ಎಣಿಕೆಗೆ ಸಿದ್ಧತೆ
ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತ ಎಣಿಕೆಗೆ 14 ಟೇಬಲ್ ವ್ಯವಸ್ಥೆ ,18 ರಿಂದ 23 ಸುತ್ತುಗಳಲ್ಲಿ ಮತ ಎಣಿಕೆ: ಡೀಸಿ
Team Udayavani, May 19, 2019, 2:44 PM IST
ಹಾಸನ ಲೋಕಸಭಾ ಕ್ಷೇತ್ರದ ಮತಗಳ ಎಣಿಕೆ ಸಿದ್ಧತೆಯ ಬಗ್ಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು. ಜಿಲ್ಲಾ ರಕ್ಷಣಾಧಿಕಾರಿ ಚೇತನ್‌ಸಿಂಗ್ ರಾಥೋಡ್ ಅವರೂ ಉಪಸ್ಥಿತರಿದ್ದರು.
ಹಾಸನ: ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಾಸನ ಲೋಕಸಭಾ ಕ್ಷೇತ್ರಗಳ ಮತಗಳ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮೇ 23 ರಂದು ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು.
ಮತಗಳ ಎಣಿಕೆಯ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಜಿಲ್ಲಾ ಚುನಾವಣಾಧಿಕಾರಿಯೂ ಆದ ಅವರು, ಪ್ರತಿ ವಿಧಾನಸಭಾ ಕ್ಷೇತದ ಮತಗಳ ಎಣಿಕೆ ಒಂದೊಂದು ಕೊಠಡಿಯಲ್ಲಿ ನಡೆಯಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆಗೆ 14 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು 112 ಟೇಬಲ್ಗಳಲ್ಲಿ ನಡೆಯಲಿದೆ.
ಅಂಚೆ ಮತಪತ್ರಗಳು ಹಾಗೂ ಸೇವಾ ಮತದಾರರ ಮತಗಳ ಎಣಿಕೆಗೆ 10 ಟೇಬಲ್ಗಳ ವ್ಯವಸ್ಥೆ ಮಾಡ ಲಾಗಿದೆ. ಪ್ರತಿ ಎಣಿಕಾ ಟೇಬಲ್ನಲ್ಲೂ 3 ಮಂದಿ ಸಿಬ್ಬಂದಿ ಎಣಿಕೆ ಕಾರ್ಯನಿರ್ವಹಿಸಲಿದ್ದು, ಒಟ್ಟು 408 ಸಿಬ್ಬಂದಿ ಎಣಿಕೆ ಕಾರ್ಯನಿರ್ವಹಿಸುವರು ಎಂದರು.
18ರಿಂದ 23 ಸುತ್ತುಗಳಲ್ಲಿ ಮತ ಎಣಿಕೆ: ಅಯಾ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳನ್ನಾಧರಿಸಿ ಮತಗಳ ಎಣಿಕೆ 18ರಿಂದ 23 ಸುತ್ತುಗಳಲ್ಲಿ ಮುಗಿ ಯಲಿದೆ. ಕಡೂರು ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆ 18 ಸುತ್ತುಗಳಲ್ಲಿ ಪೂರ್ಣಗೊಂಡರೆ ಅತಿ ಹೆಚ್ಚು ಮತಗಟ್ಟೆಗಳಿರುವ ಹೊಳೆನರಸೀಪುರ ಕ್ಷೇತ್ರದ ಮತ ಗಳ ಎಣಿಕೆ 23 ಸುತ್ತುಗಳಲ್ಲಿ ಮುಗಿಯಲಿದೆ. ಎಲೆಕ್ಟ್ರಾನಿಕ್ ಮತ ಯಂತ್ರಗಳಲ್ಲಿ ದಾಖಲಾದ ಮತಗಳ ಎಣಿಕೆಯ ನಂತರ ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲೂ 5 ಮತಗಟ್ಟೆಗಳಲ್ಲಿನ ವಿ.ವಿ.ಪ್ಯಾಟ್‌ನ ಮತ ಚೀಟಿಗಳನ್ನು ಎಣಿಕೆ ಆರಂಭವಾಗಲಿದೆ. ವಿ.ವಿ.ಪ್ಯಾಟ್‌ಗಳ ಎಣಿಕೆಗೆ ಲಾಟರಿ ಮೂಲಕ ಮತಗಟ್ಟೆಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವಿವಿ ಪ್ಯಾಟ್‌ನ ಚೀಟಿ ಗಳ ಎಣಿಕೆ ಮಾಡಿದ ನಂತರ ಚುನಾವಣಾ ಫಲಿ ತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ವಿವರ ನೀಡಿದರು.
ಏಜೆಂಟರು, ಅಭ್ಯರ್ಥಿಗಳು, ಮಾಧ್ಯಮ ಪ್ರತಿನಿಧಿ ಗಳಿಗೆ ಪ್ರವೇಶ: ಮತ ಎಣಿಕೆ ಕೇಂದ್ರಕ್ಕೆ ಮತಗಳ ಎಣಿಕೆ ಸಿಬ್ಬಂದಿ, ಅಯಾ ಅಭ್ಯರ್ಥಿಗಳಿಂದ ಸೂಚಿ ಸಿದ ಏಜೆಂಟರು, ಅಭ್ಯರ್ಥಿಗಳು, ಮಾಧ್ಯಮ ಪ್ರತಿನಿಧಿ ಗಳಿಗೆ ಮಾತ್ರ ಮತ ಎಣಿಕೆ ಕೇಂದ್ರ ಪ್ರವೇಶಕ್ಕೆ ಅನು ಮತಿ ನೀಡಿದ್ದು, ಇವರೆಲ್ಲರಿಗೂ ಗುರುತಿನ ಚೀಟಿ ನೀಡಲಾಗಿದೆ. ಗುರ್ತಿನ ಚೀಟಿ ಹೊಂದಿದವರು ಮಾತ್ರ ಎಣಿಕೆ ಕೇಂದ್ರ ಪ್ರವೇಶಿಸಲು ಅವಕಾಶ ಇರುತ್ತದೆ ಎಂದು ಹೇಳಿದರು.
ಒಣ ದಿನ ಘೋಷಣೆ: ಮತಗಳ ಎಣಿಕೆ ಕಾರ್ಯ ಸುಗಮವಾಗಿ ನಡೆಯಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮೇ 22ರ ಮಧ್ಯರಾತ್ರಿ 12 ಗಂಟೆಯಿಂದ ಮೇ 24ರ ಮುಂಜಾನೆವರೆಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.