ಸಂಗಮ್ ಜಂಕ್ಷನ್: ವಾಹನಗಳದ್ದೇ ಟೆನ್ಶನ್
ಗೊಂದಲಮಯ ರಸ್ತೆ ಸಂಚಾರ, ಬ್ಯಾರಿಕೇಡ್ ಅಳವಡಿಕೆಗೆ ಆಗ್ರಹ
Team Udayavani, May 20, 2019, 6:00 AM IST
ಕುಂದಾಪುರ: ಬೈಂದೂರು – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಸಂಗಮ್ ಜಂಕ್ಷನ್‌ನಲ್ಲಿ ವಾಹನ ಸವಾರರಿಗೆ ರಸ್ತೆ ಕ್ರಾಸ್ ಮಾಡುವುದೇ ದೊಡ್ಡ ಸವಾಲಾಗಿದೆ. ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಗೊಂದಲದ ವಾತವಾರಣ ಸೃಷ್ಟಿಯಾಗಿದೆ.
ಕುಂದಾಪುರದಿಂದ ಅಂಚೆ ಕಚೇರಿ ಮಾರ್ಗವಾಗಿ ಆನಗಳ್ಳಿ ಕಡೆಗೆ ತೆರಳ ಬೇಕಾದರೆ ದೊಡ್ಡ ಸಾಹಸವನ್ನೇ ಮಾಡ ಬೇಕಾಗಿದೆ. ಇನ್ನು ಅದೇ ರೀತಿ ಆನಗಳ್ಳಿ ಕಡೆಯಿಂದ ಕುಂದಾಪುರ ಕಡೆಗೆ ಸಂಚರಿಸ ಬೇಕಾದರೂ, ಇದೇ ರೀತಿಯ ಸವಾಲು ಎದುರಿಸಬೇಕು. ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಅಂಚೆ ಕಚೇರಿ ಮಾರ್ಗವಾಗಿ ತೆರಳಲು ಕ್ರಾಸ್ ಆಗಬೇಕಾದರೂ ಇನ್ನಷ್ಟು ಕಷ್ಟ ಪಡಬೇಕಾಗಿದೆ.
ರಸ್ತೆ ದಾಟುವುದೇ ಕಷ್ಟ
ಹೆದ್ದಾರಿಯಲ್ಲಿ ವಾಹನಗಳ ದಟ್ಟಣೆ ನಿರಂತರವಾಗಿದ್ದು, ಇಲ್ಲಿ ಪಾದಚಾರಿ ಗಳಂತೂ ರಸ್ತೆ ದಾಟುವುದೇ ದುಸ್ತರವಾಗಿದೆ. ಯಾವ ಕಡೆಯಿಂದ ವಾಹನಗಳು ಬರುತ್ತದೋ ಎಂದು ಹೇಳುವುದು ಕಷ್ಟ. ಅದರಲ್ಲೂ ಹಿರಿಯರಂತೂ ಒಂದು ಬದಿ ಯಿಂದ ಮತ್ತೂಂದು ಕಡೆಗೆ ರಸ್ತೆ ದಾಟಲು ಸಾಧ್ಯವೇ ಇಲ್ಲದಂತಾಗಿದೆ. ಇನ್ನು ಆನಗಳ್ಳಿ ಕಡೆಗೆ ತೆರಳುವ ರಸ್ತೆಯಾಗಿ ಡಾ| ಬಿ.ಬಿ. ಹೆಗ್ಡೆ ಕಾಲೇಜು, ಹಿ.ಪ್ರಾ. ಶಾಲೆಯಿದ್ದು, ವಿದ್ಯಾರ್ಥಿಗಳಿಗೂ ತೊಂದರೆ ಯಾಗುತ್ತಿದೆ.
ಅಪಘಾತ ವಲಯ..!
ಸರಿಯಾದ ಸಂಚಾರ ವ್ಯವಸ್ಥೆ ಇಲ್ಲದಿರು ವುದರಿಂದ ಇದೊಂದು ಅಪಘಾತ ವಲಯವಾಗಿ ಮಾರ್ಪಡಾಗಿದೆ. ರಾತ್ರಿ ವೇಳೆಯಂತೂ ಇಲ್ಲಿ ಸಂಚರಿಸುವುದೇ ಅಸಾಧ್ಯ ಎನ್ನುವಂತಾಗಿದೆ.
ಟ್ರಾಫಿಕ್ ಜಾಂ
ಇದು ಹೆದ್ದಾರಿಯಾಗಿದ್ದು, ಪ್ರತಿ ದಿನ ಇಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಆಗಾಗ ಟ್ರಾಫಿಕ್ ಜಾಂ ಉಂಟಾಗುತ್ತಿರುತ್ತದೆ. ಅದರಲ್ಲೂ ಬೆಳಗ್ಗಿನ ಅವಧಿ ಹಾಗೂ ಸಂಜೆ ವೇಳೆ ಯಾವಾಗಲೂ ಇಲ್ಲಿ ವಾಹನ ದಟ್ಟಣೆ ಹೆಚ್ಚಿರುತ್ತದೆ.
ಇಲ್ಲಿ ಹೆದ್ದಾರಿಯ ಎರಡೂ ಕಡೆಗಳಲ್ಲಿ ಸಂಚಾರವನ್ನು ಆರಂಭಿಸದೇ ಇರುವುದರಿಂದ ಈ ಗೊಂದಲಮಯ ಸ್ಥಿತಿ ನಿರ್ಮಾಣವಾಗಿದ್ದು, ಅದಲ್ಲದೆ ಡಿವೈಡರ್ ಮಧ್ಯೆ ಹೆಚ್ಚಿನ ಅಂತರ ಕೂಡ ಇಲ್ಲದಿರುವುದರಿಂದ ಈ ಸಮಸ್ಯೆ ಉಂಟಾಗಿದ್ದು, ಇಲ್ಲಿ ವಾಹನಗಳ ವೇಗ ನಿಯಂತ್ರಿಸಲು ಬ್ಯಾರಿಕೇಡ್‌ಗಳನ್ನು ಹಾಕಿದರೆ ಉತ್ತಮ ಎನ್ನುವ ಬೇಡಿಕೆ ಸಾರ್ವಜನಿಕರಿಂದ ಕೇಳಿ ಬಂದಿದೆ.
ಬ್ಯಾರಿಕೇಡ್ ಅಳವಡಿಕೆಗೆ ಕ್ರಮ
ಸಂಗಮ್ ಜಂಕ್ಷನ್‌ನಲ್ಲಿರುವ ಸಂಚಾರಿ ವ್ಯವಸ್ಥೆಯ ಅವ್ಯವಸ್ಥೆ ಬಗ್ಗೆ ಕೂಡಲೇ ಪರಿಶೀಲಿಸಿ, ಸೂಕ್ತ ಕ್ರಮಕೈಗೊಳ್ಳಲಾಗುವುದು. ವಾಹನಗಳ ವೇಗ ನಿಯಂತ್ರಿಸಲು ಸದ್ಯದಲ್ಲಿಯೇ ಬ್ಯಾರಿಕೇಡ್‌ಗಳನ್ನು ಅಳವಡಿಸುವ ಕುರಿತಂತೆ ಚಿಂತಿಸಲಾಗಿದೆ.
-ಬಿ.ಪಿ. ದಿನೇಶ್ ಕುಮಾರ್, ಕುಂದಾಪುರ ಡಿವೈಎಸ್‌ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.