ಸಾವಿನಲ್ಲೂ ಒಂದಾದ ವೃದ್ಧ ದಂಪತಿ
Team Udayavani, May 20, 2019, 10:36 AM IST
ಬಳ್ಳಾರಿ: ಆರೂವರೆ ದಶಕಗಳ ಕಾಲ ಒಂದಾಗಿ ಜೀವನ ಸಾಗಿಸಿದ ದಂಪತಿ ಸಾವಿನಲ್ಲೂ ಒಂದಾದ ಘಟನೆ ನಗರದಲ್ಲಿ ಭಾನುವಾರ ನಡೆದಿದೆ. ನಗರದ 17ನೇ ವಾರ್ಡ್ ವ್ಯಾಪ್ತಿಯ ಬಿಸಿಲಹಳ್ಳಿ ಗ್ರಾಮದ ಬೆಳ್ಳಿಕಟ್ಟೆ ಬಸಪ್ಪ (86) ಬೆಳ್ಳಿ ಲಕ್ಷ್ಮಮ್ಮ (82)ಭಾನುವಾರ ಬೆಳಗಿನ ಜಾವ 2 ಗಂಟೆ ಅಂತರದಲ್ಲಿ ಇಹಲೋಕ ತ್ಯಜಿಸುವ ಮೂಲಕ ಸಾವಿನಲ್ಲೂ ಒಂದಾಗಿದ್ದಾರೆ. ಬೆಳ್ಳಿಕಟ್ಟೆ ಬಸಪ್ಪನಿಗೆ 20 ವರ್ಷ, ಬೆಳ್ಳಿ ಲಕ್ಷ್ಮಮ್ಮಳಿಗೆ 16 ವರ್ಷವಾಗಿದ್ದಾಗ ಹಿರಿಯರ ನಿಶ್ಚಯದಂತೆ ಮದುವೆಯಾಗಿದ್ದರು. ಬರೋಬ್ಬರಿ 66 ವರ್ಷಗಳ ಕಾಲ ಒಂದಾಗಿ ಜೀವನ ಸಾಗಿಸಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಈ ವೃದ್ಧ ದಂಪತಿ ಹಲವು ತಿಂಗಳಿಂದ ಹಾಸಿಗೆ ಹಿಡಿದಿದ್ದರು. ಭಾನುವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ವೃದ್ಧ ಬಸಪ್ಪನ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಆಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಬೇಕು ಎನ್ನುವಷ್ಟರಲ್ಲೇ ಕೊನೆಯುಸಿರೆಳೆದರು. ಇನ್ನು ಲಕ್ಷ್ಮಮ್ಮ ಸದಾ ಅಜ್ಜನ ಪಕ್ಕದಲ್ಲಿರುತ್ತಿದ್ದರು. ಅಜ್ಜ ತೀರಿಹೋದ ವಿಷಯವನ್ನು ಮಕ್ಕಳು, ಮೊಮ್ಮಕ್ಕಳು ಹೇಳುತ್ತಿದ್ದಂತೆ ದುಃಖತಪ್ತಳಾದ ವೃದ್ಧೆ ಲಕ್ಷ್ಮಮ್ಮ 2 ತಾಸು ಕಣ್ಣೀರಿಟ್ಟಿದ್ದಾರೆ. ಇದರಿಂದ ನಿತ್ರಾಣರಾಗಿ ಕಣ್ಣೀರಿಡುತ್ತಲೇ ಮೃತ ಪತಿಯ ಪಕ್ಕದಲ್ಲೇ ಮಲಗಿ ಅಲ್ಲಿಯೇ ಕೊನೆಯಸಿರೆಳೆದಿದ್ದಾರೆ. ಒಟ್ಟು 9 ಮಕ್ಕಳನ್ನು ಪಡೆದಿದ್ದ ಈ ದಂಪತಿ ಓರ್ವ ಮಗನನ್ನು ವಿದ್ಯುತ್ ಅವಘಡದಲ್ಲಿ ಕಳೆದುಕೊಂಡಿದ್ದರು. ಮೂವರು ಪುತ್ರರು, ಐವರು ಪುತ್ರಿಯರು ಇದ್ದಾರೆ. ನಿವೃತ್ತ ಶಿರಸ್ತೇದಾರ್ ಆಗಿದ್ದ ಬೆಳ್ಳಿಕಟ್ಟೆ ಬಸಪ್ಪ ಕೊನೆಯ ದಿನಗಳಲ್ಲಿ ಪತ್ನಿ, ಮರಿ ಮೊಮ್ಮಕ್ಕಳ ಜತೆ ಕಾಲ ಕಳೆಯುತ್ತಿದ್ದರು. ಸ್ವಗ್ರಾಮ ಬಿಸಿಲಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಮೃತ ದಂಪತಿಯ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.