ಅಪಘಾತಕ್ಕೆ ವೇಗದ ಚಾಲನೆ ಕಾರಣ: ಕುಮಾರ್
ವಾಹನಗಳ ದಾಖಲಾತಿ ಕಡ್ಡಾಯ
Team Udayavani, May 20, 2019, 3:51 PM IST
ಸಂಡೂರು: ಧರ್ಮಾಪುರ ಗ್ರಾಮದಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಸಭೆಯಲ್ಲಿ ಸಿಪಿಐ ಕೆ. ಕುಮಾರ್ ಮಾತನಾಡಿದರು
ಸಂಡೂರು: ಅಪಘಾತಗಳಿಗೆ ವೇಗದ ಚಾಲನೆ, ಚಾಲಕನ ನಿರ್ಲಕ್ಷ್ಯ ಮನೋಭಾವ, ಉದಾಸೀನತೆಯೇ ಕಾರಣವಾಗಿದ್ದು, ತಾಲೂಕಿನಲ್ಲಿ 3 ತಿಂಗಳಲ್ಲಿ 15 ರಿಂದ 20 ಅವಘಡಗಳು ಜರುಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇದನ್ನು ತಡೆಯಲು ಲಾರಿ ಮಾಲೀಕರು, ಚಾಲಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಿಪಿಐ ಕುಮಾರ್ ತಿಳಿಸಿದರು.
ಪುರಸಭೆ ವ್ಯಾಪ್ತಿಯಲ್ಲಿ ಬರುವ ಸಂಡೂರು ತಾಲೂಕಿನ ಧರ್ಮಾಪುರ ಗ್ರಾಮದಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಲಾರಿ, ಟ್ರ್ಯಾಕ್ಸ್, ಆಟೋ ಮಾಲೀಕರು, ಚಾಲಕರಿಗಾಗಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಜಾಗೃತ ಸಭೆಯಲ್ಲಿ ಮಾತನಾಡಿದರು. ಶೇ.40% ಅವಘಡಗಳು ವೇಗದ ಚಾಲನೆ ಶೇ 10% ರಷ್ಟು ಕುಡಿತದ ಚಾಲನೆಗೆ ಕಾರಣ. ಕಳೆದುಹೋದ ಜೀವನವನ್ನ ಮತ್ತೆ ಮರಳಿ ತರಲು ಸಾಧ್ಯವಲ್ಲ ಎಂದರು. ವಾಹನಗಳನ್ನು ರಸ್ತೆ ಮಧ್ಯೆದಲ್ಲಿ ನಿಲ್ಲಿಸಬಾರದು. ಚಾಲಕರು, ವಾಹನಗಳ ಜಾಗರೂಕತೆಯಿಂದ ಚಾಲನೆ ಮಾಡಿದರೆ ಮಾತ್ರ ಅವಘಡಗಳು ಆಗುವುದನ್ನು ತಪ್ಪಿಸಬಹುದು ಎಂದು ಸಲಹೆ ನೀಡಿದರು.
ಆರ್‌ಟಿಒ ಇನ್ಸ್‌ಪೆಕ್ಟರ್ ಪದ್ಮನಾಭರಾವ್ ಮಾತನಾಡಿ, ಚಾಲಕನಿಗೆ ತಾಳ್ಮೆ ಬಹಳ ಮುಖ್ಯ. ಮಾಲೀಕರು, ಚಾಲಕರ ಮಾಹಿತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಚಾಲನೆ ಪರವಾನಗಿ ಪಡೆದವರಿಗೆ ಮಾತ್ರ ಅವಕಾಶ ನೀಡಬೇಕು ಎಂದು ತಿಳಿಸಿದರು. ದಕ್ಷಿಣ ವಲಯ ಅರಣ್ಯಾಧಿಕಾರಿ ಶಶಿಧರ ಗಣಿ ಮತ್ತು ಭೂ-ವಿಜ್ಞಾನಗಳ ಇಲಾಖೆಯ ಧರಣೇಂದ್ರ, ಪಿಎಸ್‌ಐ ಅಮರೇಶ ಹುಬ್ಬಳ್ಳಿ ಮಾತನಾಡಿದರು. ತೋರಣಗಲ್ ಪಿಎಸ್‌ಐ ವಿಜಯಕುಮಾರ ಗಾದಿಗನೂರು, ಪಿಎಸ್‌ಐ ಶೈಲಜಾ ಪ್ಯಾಟಿ ಶೆಟ್ಟರ, ಪುರಸಭಾ ಮುಖ್ಯಾಧಿಕಾರಿ ಸತ್ಯನಾರಾಯಣರಾವ್, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಕೆ. ಮಲ್ಲಿಕಾರ್ಜುನ, ಧರ್ಮಾಪುರ ಘಟಕದ ಅಧ್ಯಕ್ಷ ಜಿ.ಎಸ್. ಸಿದ್ದಪ್ಪ, ಜಿಂದಾಲ್ ಕಂಪನಿಯನ್ನೊಳಗೊಂಡು ಬಹುತೇಕ ಕಂಪನಿಯ ಎಲ್ಲ ಅಧಿಕಾರಿಗಳು, ಚಾಲಕರು ಲಾರಿ ಮಾಲೀಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.