ಬರಗಾಲದಲ್ಲೂ ಜಾನುವಾರು ಖರೀದಿ ಜೋರು


Team Udayavani, May 20, 2019, 3:51 PM IST

kopp-2

ಕುಷ್ಟಗಿ: ಪ್ರಕೃತಿ ಮುನಿಸಿನಿಂದ ಎದುರಾದ ಬರಗಾಲಕ್ಕೆ ತತ್ತರಿಸಿರುವ ರೈತರು ಜಾನುವಾರುಗಳನ್ನು ಸಾಕಲಾಗದೇ ಮಾರಾಟ ಮಾಡುತ್ತಿದ್ದಾರೆ. ಇನ್ನೊಂದೆಡೆ ಬರಗಾಲದಲ್ಲೂ ಜಾನುವಾರುಗಳನ್ನು ರೈತರು ಉತ್ಸಾಹದಿಂದ ಖರೀದಿಸುತ್ತಿದ್ದ ದೃಶ್ಯ ಪಟ್ಟಣದಲ್ಲಿ ನಡೆದ ಜಾನುವಾರು ಸಂತೆಯಲ್ಲಿ ಕಂಡುಬಂತು.

ಕುಷ್ಟಗಿ ಪಟ್ಟಣದಲ್ಲಿ ನಡೆದ ವಾರದ ಜಾನುವಾರು ಸಂತೆಯಲ್ಲಿ ಕಳೆದೆರಡು ವಾರಗಳಿಂದ ಮಾರಾಟ, ಖರೀದಿ ಹೆಚ್ಚಾಗಿದೆ. ಮಳೆ ನಿರೀಕ್ಷೆಯಲ್ಲಿಯೂ ಕೆಲವು ರೈತರು ಬೇಸಾಯಕ್ಕೆ ಅಗತ್ಯವಾದ ಎತ್ತುಗಳನ್ನು ಕೊಳ್ಳಲು ಆಸಕ್ತಿ ತೋರಿಸುತ್ತಿದ್ದಾರೆ. ರೈತರು ಬರಗಾಲದಲ್ಲಿ ಮೇವು, ಹೊಟ್ಟಿನ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆಯ ನಡುವೆಯೂ ಧೈರ್ಯ ಮಾಡಿ ಎತ್ತುಗಳನ್ನು ಖರೀದಿಸಲು ಮುಂದಾಗಿರುವುದರಿಂದ ಜಾನುವಾರು ವ್ಯಾಪಾರ ಜೋರಾಗಿತ್ತು. ಕೆಲವು ರೈತರು ಮೇವು, ಹೊಟ್ಟು ಖರೀಸಿ ಹೆಚ್ಚುವರಿ ಖರ್ಚಿಗೆ ಹೆದರಿ ಸಿಕ್ಕಷ್ಟೇ ಬೆಲೆ ಜಾನುವಾರು ಮಾರಾಟ ಮಾಡುತ್ತಿರುವುದೂ ಕಂಡುಬಂತು. ಮಾರುಕಟ್ಟೆಯಲ್ಲಿ ಹೂಡುವ ಎತ್ತುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಜೋಡೆತ್ತುಗಳಿಗೆ 50 ಸಾವಿರದಿಂದ 1.20 ಲಕ್ಷ ರೂ.ವರೆಗೆ ಬೆಲೆ ಕಟ್ಟಲಾಗುತ್ತಿದೆ. ಕುಷ್ಟಗಿಯ ರೈತ ಹನುಮಂತ ಗಿಡ್ಡೇರ್‌ ಅವರು 60 ಸಾವಿರಕ್ಕೆ ಜೋಡೆತ್ತು ಮಾರಾಟ ಮಾಡಿ 54 ಸಾವಿರ ರೂ. ಗಳಿಗೆ ಜೋಡೆತ್ತು ಖರೀಸಿದರು. ರ್ಯಾವಣಕಿ ನಾಗಪ್ಪ ಬನ್ನಿಗಿಡ ಅವರು 1.20 ಲಕ್ಷ ರೂ. ಬೆಲೆ ಕಟ್ಟಿದ್ದ ಜೋಡೆತ್ತಿಗೆ 90 ಸಾವಿರ ರೂ. ಕೇಳಿದ್ದರಿಂದ ಮಾರಾಟ ಮಾಡಲಿಲ್ಲ.

ಈ ಕುರಿತ ಕಂದಕೂರ ಗ್ರಾಮದ ರೈತ ಅಂದಾನಗೌಡ ಪಾಟೀಲ ಪ್ರತಿಕ್ರಿಯಿಸಿ, ಮಳೆ ಇಲ್ಲ, ಹೊಟ್ಟು, ಮೇವು ಇಲ್ಲ ಮುಂದಿನ ದಿನಗಳಲ್ಲಿ ಮಳೆಯಾಗುವ ವಿಶ್ವಾಸದಿಂದ ಎತ್ತು ಖರೀದಿಸುತ್ತಿದ್ದಾರೆ. ಹೂಡುವ ಎತ್ತುಗಳ ಬೇಡಿಕೆ ಹೆಚ್ಚಾಗುತ್ತಿದ್ದು, ಮುಂದೆ ಎತ್ತುಗಳು ದುಬಾರಿಯಾಗುತ್ತವೆ ಎಂದು ಧೈರ್ಯ ಮಾಡಿ ಖರೀದಿಸುತ್ತಿದ್ದಾರೆ. ಮಳೆಯಾಗದಿದ್ದಲ್ಲಿ ಮಾರಾಟ ಮಾಡಿ ಗುಳೆ ಹೋಗುವುದು ಅನಿವಾರ್ಯವಾಗಲಿದೆ ಎಂದರು.

ನೀರಿನ ವ್ಯವಸ್ಥೆ ಇಲ್ಲ: ಪಟ್ಟಣದ ಹೊರವಲಯದಲ್ಲಿ ನಡೆಯುವ ಜಾನುವಾರು ಸಂತೆಯಲ್ಲಿ ಎರಡು ವಾರದಿಂದ ಜಾನುವಾರುಗಳ ಸಂಖ್ಯೆ ಹೆಚ್ಚಿದ್ದು, ಪುರಸಭೆ ಹಾಗೂ ಸ್ಥಳೀಯ ಎಪಿಎಎಂಸಿ ಕರ ವಸೂಲಿ ಮಾಡಿಕೊಳ್ಳುತ್ತಿದ್ದರೂ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ. ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿಗಳನ್ನು ಇಟ್ಟಿದ್ದು ಅದರಲ್ಲಿ ಕೊಳಚೆ ನೀರು ತುಂಬಿಕೊಂಡಿದೆ. ಪ್ರತಿ ದನಕ್ಕೆ 10 ರೂ. ಕರ ನಿಗದಿ ಮಾಡಿದ್ದು, ಕುಡಿಯುವ ನೀರಿನ ವ್ಯವಸ್ಥೆ ಕೇಳಿದರೆ ಗುತ್ತಿಗೆದಾರರು, ಪುರಸಭೆಯವರನ್ನೇ ಕೇಳಿ ಎಂದು ಗದರಿಸಿ ವಸೂಲಿ ಮಾಡುತ್ತಿದ್ದಾರೆ ಎಂದು ಸಂತೆಗೆ ಆಗಮಿಸುವ ರೈತರು ಆರೋಪಿಸಿದರು.

ಸ್ವಂತ ಜಾಗೆ ಇಲ್ಲ: ಒಂದೂವರೆ ದಶಕದಿಂದ ಕುಷ್ಟಗಿ ಪಟ್ಟಣದಲ್ಲಿ ಜಾನುವಾರು ಸಂತೆ ಶುರುವಾಗಿದ್ದು, ಪ್ರತಿವಾರ ಸಾವಿರಾರು ರೈತರು ಆಗಮಿಸುತ್ತಿದ್ದು ಈಗಿರುವ ಎಪಿಎಂಸಿ ಜಾಗೆ ಸಾಲುತ್ತಿಲ್ಲ. ಪ್ರತ್ಯೇಕ ಜಾಗೆ ಖರೀದಿಸುವ ಪ್ರಸ್ತಾಪವಿದ್ದು ಅನುಷ್ಠಾನಕ್ಕೆ ಬಂದಿಲ್ಲ. ಸಂತೆ ನಡೆಯುವ ಕೃಷಿ ಇಲಾಖೆ ಹಾಗೂ ಟಿಎಪಿಸಿಎಂಎಸ್‌ ಜಾಗೆಯ ಮಧ್ಯದ ಖಾಲಿ ನಿವೇಶನ ಇಕ್ಕಟ್ಟಾಗಿದೆ.

ಟಾಪ್ ನ್ಯೂಸ್

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.