ಹೋರಾಟದಿಂದ ಮಾತ್ರ ಕಾರ್ಮಿಕರಿಗೆ ಸೌಲಭ್ಯ ಲಭ್ಯ
Team Udayavani, May 20, 2019, 5:09 PM IST
ಪಾವಗಡ: ಹಲವು ಹೋರಾಟಗಳ ಫಲವಾಗಿ ಕಟ್ಟಡ ಕಾರ್ಮಿಕರಿಗೆ ಇಂದು ಸೌಲಭ್ಯಗಳು ದೊರಕುತ್ತಿವೆ ಎಂದುತುಮಕೂರು ಜಿಲ್ಲಾ ಕಾರ್ಮಿಕ ಸಂಘಟನೆ ಎಐಟಿಸಿ ಮುಖಂಡ ಗಿರೀಶ್ ಹೇಳಿದರು.
ಭಾನುವಾರ ತಾಲೂಕಿನ ವೆಂಕಟಾಪುರ ಗ್ರಾಮದ ಕನಕ ಭವನದಲ್ಲಿ ಕಟ್ಟಡಕಾರ್ಮಿಕರ ಸಂಘದಿಂದ ನಡೆದ ಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿದ ಅವರು ಮಾತನಾಡಿ, ಸೌಲಭ್ಯಗಳನ್ನು ಪಡೆಯಬೇಕಾದರೆ ಸಂಘಟಿತರಾಗ ಬೇಕು. ಸಂಘದಿಂದ ನಡೆಯುವ ಪ್ರತಿಯೊಂದು ಸಭೆಗೂ ಅಗಮಿಸಿ,
ಮಾಹಿತಿಯನ್ನು ಪಡೆದುಕೊಳ್ಳ ಬೇಕು ಎಂದು ಹೇಳಿದರು. ಮುಖಂಡ ಗೌಡ ರಂಗಪ್ಪ ಮಾತನಾಡಿ, ದುಡಿಯುವ ವರ್ಗಕ್ಕೆ ಎಐಟಿ ಯುಸಿ ನ್ಯಾಯ ಕಲ್ಪಿಸಿದೆ. ಸಂಘಟಿತರಾಗಿ ಹೋರಾಡಿದರೆ ಮಾತ್ರ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಬಹುದು ಎಂದರು.
ಅಂಧ್ರದ ಅನಂತಪುರ ಜಿಲ್ಲೆಯ ಸಿಪಿಐ. ನಾಯಕ ಚಿಟ್ಲು ರುದ್ರಯ್ಯ ಮಾತನಾಡಿ, ಕಾರ್ಮಿಕರು ಎಂದರೆದೇಶದ ಸಂಪತ್ತು. ಆದರೆ, ಕಾರ್ಮಿಕರನ್ನು ಕಡೆಗಣಿಸುತ್ತಿದ್ದಾರೆ. ವಿಶ್ವ ಕಾರ್ಮಿಕರಲ್ಲಿ ಮಹಿಳೆಯರ ಪಾತ್ರ ಅಪಾರವಿದೆ ಎಂದು ತಿಳಿಸಿದರು. ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ಉಪಾಧ್ಯಕ್ಷ ಬಲ್ಲೇನಹಳ್ಳಿ ಶ್ರೀರಾಮಯ್ಯ,ಕಾರ್ಮಿಕ ಮುಖಂಡ ಗೌಡೇಟಿ ನಾಗರತ್ನಪ್ಪ, ಸಿಪಿಐ ಮುಖಂಡ ಅಶ್ವಥ್ ನಾರಾಯಣ, ಮುಖಂಡರಾದ ಕೃಷ್ಣ ಮೂರ್ತಿ, ತಿಪೇಸ್ವಾಮಿ, ರಾಮನಾಥ್,ಜಿ.ಎಚ್.ರಾಮಾಂಜಿ, ವೆಂಕಟರಮಣಪ್ಪ ಮತ್ತು ನೂರಾರು ಕಾರ್ಮಿಕರು ಭಾಗವಹಿಸಿದ್ದರು. ವೆಂಕಟಾ ಪುರ ಗ್ರಾಮದ ಮುಖ್ಯ ರಸ್ತೆಗಳಲ್ಲಿ ಜಾಥಾ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.