ಸಂಗಮ್ ಜಂಕ್ಷನ್: ಸಂಚಾರಿ ಪೊಲೀಸ್ ನಿಯೋಜನೆ
Team Udayavani, May 21, 2019, 6:10 AM IST
ಕುಂದಾಪುರ: ಬೈಂದೂರು – ಕುಂದಾಪುರ ರಾ.ಹೆದ್ದಾರಿ 66 ರ ಸಂಗಮ್ ಜಂಕ್ಷನ್ ಬಳಿಯ ವಾಹನ ಸಂಚಾರ ಗೊಂದಲ ನಿವಾರಣೆ ಪರಿಹರಿಸುವ ಸಲುವಾಗಿ 15 ದಿನಗಳ ಮಟ್ಟಿಗೆ ಸಂಚಾರಿ ಪೊಲೀಸರನ್ನು ನಿಯೋಜಿಸಲಾಗುವುದು ಕುಂದಾಪುರ ಡಿವೈಎಸ್‌ಪಿ ಬಿ.ಪಿ. ದಿನೇಶ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಸೋಮವಾರ ಸಂಗಮ್ ಜಂಕ್ಷನ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಬಂಧಪಟ್ಟ ಅಧಿಕಾರಿಗಳ ಜತೆಗೂ ಚರ್ಚಿಸಿದ ಅವರು, ಇಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿದರೆ ವಾಹನ ದಟ್ಟಣೆ ಹೆಚ್ಚಿರುವುದರಿಂದ ನಿರಂತರ ಟ್ರಾಫಿಕ್ ಜಾಂ ಉಂಟಾಗುತ್ತದೆ. ಅದಕ್ಕಾಗಿ ಸದ್ಯದ ಮಟ್ಟಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಪೊಲೀಸ್ ಸಿಬಂದಿಯನ್ನು ಹಾಕಲಾಗಿದೆ. ಶೀಘ್ರ ಈ ಕಡೆಯ ಸೇತುವೆ ದುರಸ್ತಿ ಕಾರ್ಯವೂ ಮುಗಿಯಲಿದ್ದು, ಆ ಬಳಿಕ ಎರಡೂ ಬದಿಯೂ ಸಂಚಾರಕ್ಕೆ ಮುಕ್ತವಾಗಲಿದ್ದು, ಆಗ ಸ್ವಲ್ಪ ಮಟ್ಟಿಗಿನ ಗೊಂದಲ ನಿವಾರಣೆಯಾಗಲಿದೆ ಎಂದರು.
ಪತ್ರಿಕೆ ವರದಿ
ಸಂಗಮ್ ಜಂಕ್ಷನ್‌ನಲ್ಲಿನ ಸಂಚಾರಿ ಗೊಂದಲಗಳ ಕುರಿತಂತೆ “ಉದಯ ವಾಣಿ’ಯು ಮೇ 20 ರಂದು “ಸಂಗಮ್ ಜಂಕ್ಷನ್: ವಾಹನಗಳದ್ದೇ ಟೆನ್ಶನ್’ ಎನ್ನುವ ತಲೆಬರಹದಡಿ ವಿಸ್ತೃತವಾದ ವರದಿಯನ್ನು ಪ್ರಕಟಿಸಿ, ಗಮನಸೆಳೆದಿತ್ತು.
ಈ ಸಂದರ್ಭದಲ್ಲಿ ಕುಂದಾಪುರ ಸಂಚಾರಿ ಠಾಣೆಯ ಪೊಲೀಸರು ಉಪಸ್ಥಿತರಿದ್ದರು.
ಸಿಗ್ನಲ್ ಲೈಟ್ ಅಳವಡಿಕೆ?
ಸಂಗಮ್ ಜಂಕ್ಷನ್, ತಲ್ಲೂರು ಪೇಟೆ, ಹೆಮ್ಮಾಡಿ ಜಂಕ್ಷನ್‌ಗಳಲ್ಲಿ ಅವೈಜ್ಞಾನಿಕ ರೀತಿಯ ಕಾಮಗಾರಿಯಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದು, ಈ ಬಗ್ಗೆ ಗುತ್ತಿಗೆ ವಹಿಸಿಕೊಂಡಿ ರುವ ಕಂಪೆನಿ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಸಂಗಮ್ ಜಂಕ್ಷನ್ ಪರಿಸರದಲ್ಲಿ ಮುಂದಿನ ದಿನಗಳಲ್ಲಿ ವಾಹನ ದಟ್ಟಣೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿದ್ದು, ಇಲ್ಲಿ ಅಂಡರ್‌ಪಾಸ್ ಮಾಡಿದರೆ ಸಾಕಷ್ಟು ಪ್ರಯೋಜನವಾಗಲಿದೆ. ಇಲಾಖೆಯಿಂದ ತಲ್ಲೂರು, ಸಂಗಮ್, ಹೆಮ್ಮಾಡಿಯಲ್ಲಿ ಸಿಗ್ನಲ್ ಲೈಟ್ ಅಳವಡಿಕೆ ಕುರಿತು ಚಿಂತಿಸಲಾಗುವುದು ಎಂದು ಡಿವೈಎಸ್‌ಪಿಯವರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.