84ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ರಿ ಖಾತೆ!

ಅಕ್ಷರ ಜಾತ್ರೆಯ ಬಾಕಿ ಹಣ ಇನ್ನೂ ಬಂದಿಲ್ಲ ; ಕೇಳಿದ್ದು 12 ಕೋಟಿ, ಸರ್ಕಾರ ಕೊಟ್ಟಿದ್ದು 7 ಕೋಟಿ

Team Udayavani, May 21, 2019, 6:00 AM IST

aaa

ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಕಳೆದ ಜನವರಿಯಲ್ಲಿ ನಡೆದ 84ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಖರ್ಚು ವೆಚ್ಚ ಮಾಡಿದವರು ಉದ್ರಿ ಖಾತೆಯಲ್ಲೇ ಲೆಕ್ಕ ಬರೆದಿಟ್ಟುಕೊಳ್ಳುವಂತಾಗಿದ್ದು, ಇನ್ನೂ 3 ಕೋಟಿ ರೂ.ಗೂ ಅಧಿಕ ಹಣ ಸರ್ಕಾರದಿಂದ ಬಿಡುಗಡೆಯಾಗಿಲ್ಲ.

84ನೇ ಅಖೀಲ ಭಾರತ ಸಾಹಿತ್ಯ ಸಮ್ಮೇಳನವನ್ನು ಸುಂದರ ಮಂಟಪ ಮತ್ತು ವೇದಿಕೆ ನಿರ್ಮಿಸಿ, ಅದಕ್ಕೆ ತಕ್ಕನಾದ ಕುರ್ಚಿ, ಕಲಾತಂಡಗಳು, ಕಲಾವಿದರು ಸೇರಿ ಅನೇಕರು ಶ್ರಮ ಹಾಕಿ ಸಮ್ಮೇಳನ ಯಶಸ್ವಿಗೊಳಿಸಿದರು. ಇದಕ್ಕೆ ಜಿಲ್ಲಾಡಳಿತವೇ ನೇತೃತ್ವ ವಹಿಸಿಕೊಂಡು ಕೆಲಸ ಮಾಡಿ ಸಮ್ಮೇಳನಕ್ಕೆ ಭರ್ಜರಿ ಮೆರುಗು ತಂದಿತ್ತು. ಆದರೆ ಸಮ್ಮೇಳನ ಮುಗಿದು 4 ತಿಂಗಳು ಕಳೆದರೂ ಕಲಾವಿದರು ಮತ್ತು ಸಣ್ಣಪುಟ್ಟ ಖರ್ಚು ಮಾಡಿದ ತುಂಡು ಗುತ್ತಿಗೆದಾರರು ಇನ್ನೂ ಸರ್ಕಾರ ದಿಂದ ಬರುವ ಬಾಕಿ ಹಣಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ.

ರಾಜ್ಯ ಸರ್ಕಾರಕ್ಕೆ ಧಾರವಾಡ ಸಮ್ಮೇಳನ ನಡೆಸಲು 12 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆ ಕೂಡ ಸರ್ಕಾರದ ಮಟ್ಟದಲ್ಲಿ ಲಾಬಿ ಮಾಡಿ ಹೆಚ್ಚಿನ ಹಣಕಾಸಿನ ನೆರವು ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೆ ಸರ್ಕಾರ ಕೇವಲ 8 ಕೋಟಿ ಮಾತ್ರ ನೀಡುವುದಾಗಿ ಹೇಳಿತ್ತು. ಈ ಪೈಕಿ ಸದ್ಯಕ್ಕೆ 7 ಕೋಟಿ ಮಾತ್ರ ಜಿಲ್ಲಾಡಳಿತಕ್ಕೆ ತಲುಪಿಸಿದೆ.

ಸಮ್ಮೇಳನಕ್ಕೆ ವರ್ಷದಿಂದ ವರ್ಷಕ್ಕೆ ಖರ್ಚು ಹೆಚ್ಚಾಗುತ್ತಿದ್ದು, ಸರ್ಕಾರ ಕನ್ನಡದ ಕೆಲಸಕ್ಕೆ ಹಣ ನೀಡಬೇಕೆಂದು ಧಾರವಾಡದ ಸಾಹಿತಿಗಳು ನೇರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಅವರಲ್ಲಿ ಮನವಿ ಮಾಡಿದ್ದರು. ಧಾರವಾಡದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಕನಿಷ್ಠ 12 ಕೋಟಿ ರೂ.ನೀಡುವಂತೆ ಆರಂಭದಲ್ಲೇ ಆಗ್ರಹಿಸಿದ್ದರು. ಈವರೆಗೂ ಈ 12 ಕೋಟಿ ಪೈಕಿ ಸರ್ಕಾರದಿಂದ ಬರೀ 7 ಕೋಟಿ ರೂ. ಮಾತ್ರ ಬಂದಿದೆ. ಸಾಹಿತ್ಯ ಪರಿಷತ್ತಿನಿಂದ 1 ಕೋಟಿ ರೂ. ಬಂದಿದೆ. ಸದ್ಯಕ್ಕೆ ಇನ್ನು 3 ಕೋಟಿ ರೂ.ಗಳಾದರೂ ಸರ್ಕಾರ ಭರಿಸಲೇಬೇಕಿದ್ದು ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆಯಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ತಿಳಿಸಿದ್ದಾರೆ.

ಕನ್ನಡದ ಕೆಲಸಕ್ಕೆ ಹಣವಿಲ್ಲವೇ?: ಪ್ರತಿ ವರ್ಷ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸರ್ಕಾರ ಅದ್ಧೂರಿಯಾಗಿ ನಡೆಸಿಕೊಂಡು ಬಂದಿದೆ. ಸಾಹಿತ್ಯ ಪರಿಷತ್ತಿನ ಮೂಲಕ ನಡೆಯುವ ಈ ಕಾರ್ಯಕ್ರಮಕ್ಕೆ ಎಂದಿಗೂ ಅನುದಾನದ ಕೊರತೆ ಇಲ್ಲವೇ ಇಲ್ಲ ಎಂದು ಮುಖ್ಯಮಂತ್ರಿಯಾದಿಯಾಗಿ ಎಲ್ಲರೂ ಮೇಲಿಂದ ಮೇಲೆ ಹೇಳುತ್ತಲೇ ಇರುತ್ತಾರೆ. ಆದರೆ ಸಮ್ಮೇಳನ ಮುಗಿದು 4 ತಿಂಗಳು ಕಳೆದರೂ ಇನ್ನೂ ಸಮ್ಮೇಳನಕ್ಕೆ ಖರ್ಚು ಮಾಡಿದ ಹಣವನ್ನು ಸರ್ಕಾರ ಬಿಡುಗಡೆ ಮಾಡುತ್ತಿಲ್ಲ. ಇದೇನು ನೂರಾರು ಕೋಟಿ ಹಣವಲ್ಲ, ಕೇವಲ 12 ಕೋಟಿ ಅಷ್ಟೇ. ಇದಕ್ಕೆ ಸರ್ಕಾರ ಏಕೆ ಮೀನಮೇಷ ಎಣಿಸಬೇಕು ಎಂದು ಕನ್ನಡ ಸಾಹಿತ್ಯ ವಲಯ ಸರ್ಕಾರವನ್ನು ಪ್ರಶ್ನೆ ಮಾಡುತ್ತಿದೆ.

ಸಾಹಿತಿಗಳು- ಸರ್ಕಾರ ನಡುವೆ ಮನಸ್ತಾಪ
ಧಾರವಾಡದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಂದಾಜು 6 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು. ಬಂದವರಿಗೆಲ್ಲರಿಗೂ ಊಟ, ವಸತಿಗೆ ಕೋಟಿಗಟ್ಟಲೇ ಹಣ ಖರ್ಚಾಗಿದೆ. ಪೆಂಡಾಲ್, ಕುರ್ಚಿ, ಅಡುಗೆ, ಗೌರವಧನ ಹೀಗೆ ಎಲ್ಲವನ್ನೂ ಲೆಕ್ಕ ಹಾಕಿದರೆ ಸಮ್ಮೇಳನದ ಖರ್ಚು 11 ಕೋಟಿ ಗಡಿ ದಾಟುತ್ತಿದೆ. ಸರ್ಕಾರ ಈವರೆಗೂ ಬರೀ 7 ಕೋಟಿ ಮಾತ್ರ ನೀಡಿದ್ದು ಇನ್ನುಳಿದ ಹಣವನ್ನು ಬೇಗನೆ ನೀಡಬೇಕು ಎನ್ನುತ್ತಿದ್ದಾರೆ ಸಮ್ಮೇಳನದ ನೇತೃತ್ವ ವಹಿಸಿದ್ದ ಧಾರವಾಡ ಸಾಹಿತ್ಯ ಪರಿಷತ್ತಿನ ಸದಸ್ಯರು. ಆದರೆ ಸರ್ಕಾರ ಮಾತ್ರ 8 ಕೋಟಿಗಿಂತ ಹೆಚ್ಚಿನ ಹಣ ನೀಡುವುದು ಕಷ್ಟ ಎನ್ನುತ್ತಿದ್ದು, ಇದು ಸಾಹಿತಿಗಳು ಮತ್ತು ಸರ್ಕಾರದ ಮಧ್ಯೆ ಮನಸ್ತಾಪಕ್ಕೆ ಕಾರಣವಾಗಿದೆ.

-ಬಸವರಾಜ ಹೊಂಗಲ್

ಟಾಪ್ ನ್ಯೂಸ್

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.