ರಮೇಶ್ ಮತ್ತೆ ಚುರುಕು
ಬಿಜೆಪಿ ವರಿಷ್ಠರ ಜತೆಗೆ ಮಾತುಕತೆ ಸಾಧ್ಯತೆ
Team Udayavani, May 21, 2019, 6:00 AM IST
ಬೆಂಗಳೂರು: ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡು ರಾಜೀನಾಮೆ ನೀಡುವುದಾಗಿ ಹೇಳಿ ಆಪ್ತರಿಂದ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆ ಯಲ್ಲಿ ಮೌನಕ್ಕೆ ಶರಣಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತಗಟ್ಟೆ ಫಲಿತಾಂಶ ಪ್ರಕಟಗೊಂಡ ತಕ್ಷಣ ಮತ್ತೆ ಸಕ್ರಿಯರಾಗಿದ್ದಾರೆ.
ಸೋಮವಾರ ಬೆಂಗಳೂರಿಗೆ ಆಗಮಿಸಿದ ಅವರು, ತಮ್ಮ ಆಪ್ತರನ್ನು ಸಂಪರ್ಕಿಸುವ ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. 23 ರ ಲೋಕಸಭೆ ಚುನಾವಣೆ ಫಲಿತಾಂಶ ಬಂದ ತಕ್ಷಣ ಕನಿಷ್ಠ ನಾಲ್ಕರಿಂದ ಐವರು ಶಾಸಕರನ್ನು ತಮ್ಮೊಂದಿಗೆ ರಾಜೀನಾಮೆ ಕೊಡಿಸುವ ಭರವಸೆ ಯನ್ನು ಬಿಜೆಪಿ ನಾಯಕರಿಗೆ ನೀಡಿದ್ದಾರೆ ಎನ್ನಲಾಗಿದ್ದು, ಅದೇ ಕಾರಣಕ್ಕೆ ಬಿಜೆಪಿ ಕೂಡ ಚುನಾವಣೆ ಫಲಿತಾಂಶ ಬಂದ ತಕ್ಷಣ ಆಪರೇ ಷನ್ ಕಮಲ ನಡೆಸುವ ತೆರೆ ಮರೆಯ ಪ್ರಯತ್ನಕ್ಕೆ ಮತ್ತೆ ಜೀವ ಬಂದಂತಾಗಿದೆ.
ತಮ್ಮ ಆಪ್ತರಾದ ಅಥಣಿ ಶಾಸಕ ಮಹೇಶ್ ಕುಮಠಳ್ಳಿ, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್, ಮಸ್ಕಿ ಶಾಸಕ ಪ್ರತಾಪ್‌ಗೌಡ ಪಾಟೀಲ್ ಅವರೊಂದಿಗೆ ಮತ್ತೂಂದು ಸುತ್ತು ಮಾತುಕತೆ ನಡೆಸಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡುವ ಬಗ್ಗೆ ಚರ್ಚೆ ನಡೆಸುವ ಪ್ರಯತ್ನವನ್ನು ರಮೇಶ್ ಜಾರಕಿ ಹೊಳಿ ಆರಂಭಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಅಜ್ಞಾತ ಸ್ಥಳದಲ್ಲಿ ಭೇಟಿಯಾಗುವ ಯತ್ನ ನಡೆಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದು, ಫಲಿತಾಂಶ ಬಂದ ತಕ್ಷಣ ರಾಜೀನಾಮೆ ನೀಡುವ ಕುರಿತಂತೆ ಅವರೊಂದಿಗೆ ಚರ್ಚಿಸಿ, ನವದೆಹಲಿಗೆ ತೆರಳಿ ಬಿಜೆಪಿ ಹೈ ಕಮಾಂಡ್ ಭೇಟಿ ಮಾಡಲು ರಮೇಶ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.