ತಂಪೆರೆದ ಮಳೆರಾಯ: ಮೂರು ದಿನ ಮಳೆ ಸಾಧ್ಯತೆ

Team Udayavani, May 21, 2019, 6:03 AM IST

tamperagida-maleraya

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರವಿವಾರ ರಾತ್ರಿ ಮತ್ತು ಸೋಮವಾರ ಬೆಳಗ್ಗಿನ ವೇಳೆ ಗುಡುಗು, ಸಿಡಿಲು ಮಿಂಚಿನಿಂದ ಕೂಡಿದ ಮಳೆಯಾಗಿದೆ. ಕೆಲವು ದಿನಗಳಿಂದ ವಿಪರೀತ ಸೆಕೆ ಯಿಂದ ಕೂಡಿದ್ದ ವಾತಾವರಣವು ತಂಪಾಗಿದೆ.

ರವಿವಾರ ತಡರಾತ್ರಿ ಮಂಗಳೂರು, ಕಂಕನಾಡಿ, ಬಿ.ಸಿ. ರೋಡ್‌, ಮಾಣಿ, ಪುತ್ತೂರು, ಉಪ್ಪಿನಂಗಡಿ, ವೇಣೂರು, ಸಜಿಪಮೂಡ, ಮಣಿನಾಲ್ಕೂರು, ನಾವೂರು, ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ, ಕಕ್ಕೆಪದವು, ಗರಡಿ, ಪೂಂಜಾಲಕಟ್ಟೆ, ಮೂಡುಬಿದಿರೆ, ಕಾರ್ಕಳ, ಉಳ್ಳಾಲ, ಕೋಟೆಕಾರ್‌, ಬೀರಿ, ಸಿದ್ದಕಟ್ಟೆ, ಸುರತ್ಕಲ್‌, ಗಂಟಾಲ್‌ಕಟ್ಟೆ, ಪಡುಬಿದ್ರಿ, ವಿಟ್ಲ, ಕನ್ಯಾನ, ಸುಳ್ಯ, ಬೆಳ್ಳಾರೆ, ವೇಣೂರು, ಕಡಬ, ಕಾಪು, ಹಳೆಯಂಗಡಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಯಾಗಿದೆ. ಸೋಮವಾರ ಬೆಳಗ್ಗೆ ಕೂಡ ಜಿಲ್ಲೆಯ ಅನೇಕ ಕಡೆಗಳಲ್ಲಿ ಮಳೆ ಯಾಗಿದ್ದು, ಸಂಜೆ ವೇಳೆಗೆ ವಿವಿಧೆಡೆ ಮೋಡ ಕವಿದ ವಾತಾವರಣ ಇತ್ತು.

ಸಿಡಿಲಿನಿಂದ ಹಾನಿ
ಸೋಮವಾರ ಮುಂಜಾನೆ ಸುರಿದ ಮಳೆಗೆ ಕಾಟಿಪಳ್ಳ ಎರಡನೇ ಬ್ಲಾಕ್‌ನ ಜೈಸನ್‌ ಎಂಬವರ ಮನೆ ಸಮೀಪದ ಕಾಂಕ್ರೀಟ್‌ ತಡೆಗೋಡೆ ಕುಸಿದು ಮನೆಗೆ ಹಾನಿಯಾಗಿ ಬಿರುಕು ಬಿಟ್ಟಿದೆ. ತಡಂಬೈಲ್‌ ಬಳಿಯ ನಿವಾಸಿ ಉಷಾ ಭಾಸ್ಕರ್‌ ಅವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿಯಾಗಿದೆ. ಇರಾ ಗ್ರಾಮದ ಕೆಂಜಿಲ ಬಂಡಶಾಲೆ ನಿವಾಸಿ ರಾಧಮ್ಮ ಅವರ ಮನೆಗೆ ಸಿಡಿಲು ಬಡಿದು ಮನೆಗೆ ಹಾನಿಯಾಗಿದೆ. ಮನೆಯಲ್ಲಿದ್ದ ಮೂರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುಂದಿನ 3 ದಿನಗಳ ಕಾಲ ಕರಾವಳಿ ಸಹಿತ ಮಲೆನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ. ರವಿವಾರ ವಾಡಿಕೆಯ ಗರಿಷ್ಠ ಉಷ್ಣಾಂಶಕ್ಕಿಂತ ಶೇ.3ರಷ್ಟು ಹೆಚ್ಚಿತ್ತು. ಆದರೆ ಮಳೆ ಬಂದ ಕಾರಣ ಜಿಲ್ಲೆಯಲ್ಲಿ ಉಷ್ಣಾಂಶ ಕಡಿಮೆಯಾಗಿದೆ. ಸೋಮ ವಾರ ಜಿಲ್ಲೆ ಯಲ್ಲಿ 34 ಡಿ.ಸೆ. ಗರಿಷ್ಠ ಉಷ್ಣಾಂಶ, 24 ಡಿ.ಸೆ. ಕನಿಷ್ಠ ಉಷ್ಣಾಂಶ ಇತ್ತು.

ಉಡುಪಿಯಲ್ಲಿ ಸಾಮಾನ್ಯ ಮಳೆ
ಉಡುಪಿ: ಸೋಮವಾರ ಜಿಲ್ಲೆಯ ವಿವಿಧೆಡೆ ಮಳೆ ಬಂದಿದೆ. ತೆಕ್ಕಟ್ಟೆ, ಶಿರ್ವ, ಶಿರೂರು, ಬೈಂದೂರು, ಪಡುಬಿದ್ರಿ, ಕಟಪಾಡಿ, ಕಾಪು, ಕಾರ್ಕಳ, ಬ್ರಹ್ಮಾವರ, ಉಡುಪಿ ಮೊದಲಾದೆಡೆ ಸಾಮಾನ್ಯ ಮಳೆ ಯಾಗಿತ್ತು. ಸಿದ್ದಾಪುರ, ಹೆಬ್ರಿಯಲ್ಲಿ ಭಾರೀ ಪ್ರಮಾಣದ ಗುಡುಗಿನೊಂದಿಗೆ ಹನಿಹನಿ ಮಳೆ ಬಂದಿದೆ.

ಕಾಸರಗೋಡಿನಲ್ಲಿ ಮಳೆ; ಸಿಡಿಲಿನಿಂದ ಹಾನಿ
ಕುಂಬಳೆ: ಕಾಸರಗೋಡು ಜಿಲ್ಲೆ ಯಲ್ಲಿ ಸೋಮವಾರ ಮುಂಜಾನೆ ಸುರಿದ ಬೇಸಗೆ ಮಳೆಯಿಂದ ಇಳೆ ಅಲ್ಪ ತಂಪಾಯಿತು. ಕೆಲವು ಕಡೆ ಗಳಲ್ಲಿ ಸಿಡಿಲಿನಿಂದ ಮನೆಗಳಿಗೆ ಹಾನಿಗೀಡಾದ ವರದಿಯಾಗಿದೆ. ಪೆರ್ಲದ ಬಜಕೂಡ್ಲು ಎಂಬಲ್ಲಿ ಲಕ್ಷ್ಮಣ ನಾಯ್ಕರ ಪತ್ನಿ ಕಮಲಾ (55) ಸಿಡಿಲಾಘಾತದಿಂದ ಪ್ರಜ್ಞಾಹೀನ ರಾದರು. ಅವರನ್ನು ಪೆರ್ಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರ ಮನೆ ಬಳಿಯ ಮರಕ್ಕೆ ಸಿಡಿಲು ಬಡಿದಿದ್ದು, ಬಾವಿಯ ಪಂಪು, ಮನೆಯ ವಿದ್ಯುತ್‌ ಉಪಕರಣಗಳಿಗೆ ಹಾನಿಯಾಗಿದೆ.

ಅಡೂರು ಕೊರತಿಮೂಲೆ ದುಗ್ಗಮ್ಮ ಎಂಬವರ ಮನೆಗೆ ಸಿಡಿಲು ಬಡಿದು
ಮನೆ ಗೋಡೆ ಬಿರುಕು ಬಿಟ್ಟಿರುವು ದಲ್ಲದೆ ಟಿವಿ ಮತ್ತು ವಿದ್ಯುತ್‌ ಉಪ ಕರಣಗಳಿಗೆ ಹಾನಿಯಾಗಿದೆ.

ಟಾಪ್ ನ್ಯೂಸ್

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.