ಮತ ಎಣಿಕೆ ಜವಾಬ್ದಾರಿಯಿಂದ ನಿರ್ವಹಿಸಿ
Manage vote count responsibly
Team Udayavani, May 21, 2019, 7:20 AM IST
ಬಾಗಲಕೋಟೆ: ನಗರದಲ್ಲಿ ನಡೆದ ಮತ ಎಣಿಕೆ ವಿಧಾನ ಕುರಿತು ಕೊನೆಯ ಹಂತದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಆರ್. ರಾಮಚಂದ್ರನ್ ಮಾತನಾಡಿದರು.
ಬಾಗಲಕೋಟೆ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮೇ 23ರಂದು ಬಾಗಲಕೋಟೆ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿರುವ ನೂತನ ಸಭಾಭವನದಲ್ಲಿ ಮತ ಎಣಿಕೆ ಮೇಲ್ವಿಚಾರಕರು, ಸಹಾಯಕರು ಹಾಗೂ ಮೈಕ್ರೋ ವೀಕ್ಷಕರಿಗೆ ಹಮ್ಮಿಕೊಂಡ ಮತ ಎಣಿಕೆ ವಿಧಾನ ಕುರಿತು ಕೊನೆಯ ಹಂತದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತೋಟಗಾರಿಕೆ ವಿವಿಯಲ್ಲಿ ಬಾಗಲಕೋಟೆ ಲೋಕಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದ 8 ವಿಧಾನಸಭಾ ಮತಕ್ಷೇತ್ರಗಳ ಎಣಿಕೆ ಕಾರ್ಯ ನಡೆಸಲಾಗುತ್ತಿದ್ದು, ಮತ ಎಣಿಕೆಗೆ ಸಂಬಂಧಿಸಿದ ಯಾವುದೇ ಕರ್ತವ್ಯ ನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿ ಮತದಾನದ ರಹಸ್ಯ ಕಾಪಾಡತಕ್ಕದ್ದು ಎಂದರು.
ಪ್ರತಿ ಮತಕ್ಷೇತ್ರಕ್ಕೆ 14 ಟೇಬಲ್ಗಳನ್ನು ಇರಿಸಲಾಗುತ್ತಿದ್ದು, ಪ್ರತಿ ಟೇಬಲ್ಗೆ ತಲಾ ಒಬ್ಬರಂತೆ ಮತ ಎಣಿಕಾ ಮೇಲ್ವಿಚಾರಕ, ಸಹಾಯಕ ಮತ್ತು ಮೈಕ್ರೋ ವೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ. ಬಾಗಲಕೋಟೆ ಲೋಕಸಭಾ ಮತಕ್ಷೇತ್ರಕ್ಕೆ ಒಟ್ಟು 8 ಮತಕ್ಷೇತ್ರಗಳಿದ್ದು, ಮತ ಎಣಿಕೆ ಕಾರ್ಯಕ್ಕೆ ಪ್ರತಿ ಮತಕ್ಷೇತ್ರಗಳಿಗೆ 16 ಜನ ಮೇಲ್ವಿಚಾರಕರು, ಸಹಾಯಕರು ಹಾಗೂ ಮೈಕ್ರೋ ವೀಕ್ಷಕರನ್ನು ನೇಮಿಸಲಾಗಿದೆ. ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಪ್ರತಿಯೊಬ್ಬರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಮತ ಎಣಿಕೆ ಕಾರ್ಯದಲ್ಲಿ ತೊಡಗಿದ ಸಿಬ್ಬಂದಿಗೆ ಬೆಳಗಿನ ಉಪಹಾರ, ಟೀ ಹಾಗೂ ಮಧ್ಯಾಹ್ನದ ಊಟ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಮತ ಎಣಿಕಾ ಕೇಂದ್ರದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದ್ದು, ಮತ ಎಣಿಕಾ ಕೇಂದ್ರದೊಳಗೆ ಬರುವ ಪ್ರತಿಯೊಬ್ಬರು ಆಯಾ ಪ್ರವೇಶದ್ವಾರ ಹಾಗೂ ನಿಗದಿಪಡಿಸಿದ ಸ್ಥಳಗಳಲ್ಲಿ ಮೊಬೈಲ್ ಡಿಪಾಜಿಟ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಯಾವುದೇ ಉಹಾಪೋಹಗಳಿಗೆ ಅವಕಾಶವಿಲ್ಲದಂತೆ ಚುನಾವಣಾ ಆಯೋಗದ ನಿರ್ದೇಶನ ಮತ್ತು ಮಾರ್ಗದರ್ಶನದನ್ವಯ ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸುವಂತೆ ಸೂಚಿಸಿದರು.
ಮಾಸ್ಟರ್ ಟ್ರೈನರ್ ಗಂಗಾಧರ ದಿವಟರ್ ಮತ ಎಣಿಕೆಗೆ ಸಂಬಂಧಿಸಿದಂತೆ ಎಣಿಕೆ ಟೇಬಲ್, ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ ವಿಧಾನ, ಮತ ಎಣಿಕೆ ಪ್ರಕ್ರಿಯೆಯಲ್ಲಿ ಮೂಡಿಬಂದ ಸಂದೇಶಗಳು, ವಿಶೇಷ ಪ್ರಕರಣ, ಮತದಾನ ಖಾತ್ರಿ ಯಂತ್ರದಲ್ಲಿ ಮತ ಎಣಿಕೆ ವಿಧಾನ, ಅಂಚೆ ಮತಪತ್ರಗಳ ಎಣಿಕೆ, ಮತದಾನದ ಗೌಪ್ಯತೆ ಕುರಿತು ವಿವರಿಸಿದರು.
ಅಪರ ಜಿಲಾಧ್ಲಿಕಾರಿ ಶಶಿಧರ ಕುರೇರ, ಉಪವಿಭಾಗಾಧಿಕಾರಿ ಎಚ್.ಜಯಾ, ಇಕ್ರಮ ಸೇರಿದಂತೆ ಆಯಾ ಮತಕ್ಷೇತ್ರಗಳ ಚುನಾವಣಾಧಿಕಾರಿಗಳು, ಮತ ಎಣಿಕಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.