ಬೀಜ-ರಸಗೊಬ್ಬರ ಕೊರತೆಯಾಗದಂತೆ ಕ್ರಮ

•ಅಂತರ್ಜಲ ಮಟ್ಟ ಭಾರೀ ಕುಸಿತ•ಸಕಾಲದಲ್ಲಿ ಮುಂಗಾರು ಮಳೆ ಸುರಿದರೆ ಬಿತ್ತನೆ ಆರಂಭ

Team Udayavani, May 21, 2019, 11:16 AM IST

yedagiri-tdy-1..

ಯಾದಗಿರಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಾತನಾಡಿದರು.

ಯಾದಗಿರಿ: ಕೆಲ ದಿನಗಳಲ್ಲಿ ಮುಂಗಾರು ಆರಂಭವಾಗಲಿದ್ದು, ಜಿಲ್ಲೆಯಲ್ಲಿ ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ಕೃಷಿ ಹಾಗೂ ಕೃಷಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಮುಂಗಾರು ಹಾಗೂ ಮುಂಗಾರು ಮುಂಚಿತವಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮತ್ತು ಇನ್ನಿತರ ವಿಷಯಗಳ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ರಾಜಕುಮಾರ ಮಾತನಾಡಿ, ಜಿಲ್ಲೆಯಲ್ಲಿ ಶೇ. 60ರಷ್ಟು ಮಳೆ ಕೊರತೆ ಇದೆ. ಸಕಾಲದಲ್ಲಿ ಮುಂಗಾರು ಮಳೆ ಸುರಿದರೆ ರೈತರು ಬಿತ್ತನೆ ಆರಂಭಿಸುತ್ತಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ಬೆಳೆಗಳಾದ ಹೆಸರು, ತೊಗರಿ, ಭತ್ತ, ಉದ್ದು, ಸಜ್ಜೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಕೆಎಸ್‌ಎಸ್‌ಸಿ, ಎನ್‌ಎಸ್‌ಸಿ ಹಾಗೂ ಖಾಸಗಿ ಸಂಸ್ಥೆಗಳಿಂದ ದಾಸ್ತಾನು ಮಾಡಲಾಗಿದೆ. ಜಿಲ್ಲೆಯಲ್ಲಿ 10,780 ಮೆಟ್ರಿಕ್‌ ಟನ್‌ ರಸಗೊಬ್ಬರ ದಾಸ್ತಾನು ಮಾಡಲಾಗಿದೆ ಎಂದು ವಿವರಿಸಿದರು.

ಮಳೆ ಸುರಿಯದ ಕಾರಣ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ಬೇಸಿಗೆ ಮುಗಿಯುವವರೆಗೆ ಕುಡಿಯುವ ನೀರಿನ ಸಮಸ್ಯೆಗಳು ಬರಬಹುದು. ಕಾರಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಅಗತ್ಯ ಸಿದ್ಧತೆಯಲ್ಲಿರಬೇಕು. ಅದೇ ರೀತಿ ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಮತ್ತು ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.

ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಹನುಮನಗೌಡ ಪಾಟೀಲ ಮಾತನಾಡಿ, ಎರಡು ಬೋಟ್‌ಗಳಿದ್ದು, ಸುಸ್ಥಿತಿಯಲ್ಲಿವೆ. ಆದರೆ, ಕೃಷ್ಣಾ ನದಿಯಲ್ಲಿ ರಬ್ಬರ್‌ ಬೋಟ್ ಚಾಲನೆ ಮಾಡಲು ಆಗುವುದಿಲ್ಲ. ಫೈಬರ್‌ ಬೋಟ್ ಬೇಕಾಗುತ್ತದೆ ಎಂದು ಸಭೆಯ ಗಮನಕ್ಕೆ ತಂದರು.

ಮಳೆ ಸುರಿಯುವ ಮುನ್ನ ನಗರ ಹಾಗೂ ಗ್ರಾಮಗಳಲ್ಲಿನ ಚರಂಡಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಇದರಿಂದ ನೀರು ಸರಾಗವಾಗಿ ಹರಿದು ಹೋಗಲು ಅನುಕೂಲವಾಗುತ್ತದೆ. ಇನ್ನು ನಗರಸಭೆ ಮತ್ತು ಪುರಸಭೆ ಹಾಗೂ ಗ್ರಾಮಗಳಲ್ಲಿನ ಸರ್ಕಾರಿ ಕಚೇರಿ ಆವರಣಗಳಲ್ಲಿ ಗಿಡ ನೆಡಲು ಕ್ರಮ ವಹಿಸಬೇಕು. ಮುಖ್ಯವಾಗಿ ಆವರಣ ಗೋಡೆ ಇದ್ದ ಸ್ಥಳಗಳಲ್ಲಿ ಗಿಡ ನೆಡಲು ಆದ್ಯತೆ ನೀಡುವುದಲ್ಲದೆ, ಅವುಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳವರು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಮೇ ತಿಂಗಳ ಕೊನೆಯಲ್ಲಿದ್ದರೂ ಬಿಸಿಲಿನ ತಾಪಮಾನ ಕಡಿಮೆಯಾಗಿಲ್ಲ. ಹಾಗಾಗಿ, ಬಿಸಿಲು ನಿರ್ವಹಣೆಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಬಿಸಿಲಿನಿಂದ ಉಂಟಾಗುವ ತೊಂದರೆಗಳಿಗೆ ಉಪಚರಿಸಲು ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಪ್ರಮುಖ ಔಷಧಗಳನ್ನು ದಾಸ್ತಾನು ಇಟ್ಟುಕೊಂಡಿರಬೇಕು. ಕಾರ್ಮಿಕರಿಗೆ ಬೆಳಗ್ಗೆ ಮತ್ತು ಸಂಜೆ ಹೊತ್ತಿನಲ್ಲಿ ಕೆಲಸ ಮಾಡಲು ತಿಳಿಸಬೇಕು. ಹೆಚ್ಚು ಬಿಸಿಲು ಇದ್ದಾಗ ಹೊರಗಡೆ ಓಡಾಡದಂತೆ ಸಲಹೆ ನೀಡಬೇಕು. ಅಲ್ಲದೆ, ಈ ಬಗ್ಗೆ ಗ್ರಾಮ ಪಂಚಾಯಿತಿಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

535 ಹುದ್ದೆಗಳಿಗೆ 338 ಅರ್ಜಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಮೇ 25, 26ರಂದು ಮತ್ತು ಜೂನ್‌ 1 ಹಾಗೂ 2ರಂದು ಯಾದಗಿರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಹೈದ್ರಾಬಾದ್‌ ಕರ್ನಾಟಕ ವೃಂದದ 535 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ಕೇವಲ 338 ಅರ್ಜಿಗಳು ಬಂದಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ ಬಿರಾದಾರ ಸಭೆಯಲ್ಲಿ ಮಾಹಿತಿ ನೀಡಿದರು. ಟಿ.ಇ.ಟಿ ಪಾಸಾದ ಡಿ.ಇಡಿ ಪದವೀಧರರಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇತ್ತು. ಹೈದ್ರಾಬಾದ್‌ ಕರ್ನಾಟಕ ಹೊರತುಪಡಿಸಿ ಶೇ. 20ರಷ್ಟು ಮೀಸಲಾತಿ ಹುದ್ದೆಗಳಿಗೆ ಸಾಕಷ್ಟು ಅರ್ಜಿಗಳು ಬಂದಿವೆ. ಆದರೆ, ಹೈ.ಕ ಭಾಗದ ಶೇ. 80ರಷ್ಟು ಸ್ಥಳೀಯ ವೃಂದದ ಮೀಸಲಾತಿಯ ಹುದ್ದೆಗಳಿಗೆ ಖಾಲಿ ಇರುವ ಹುದ್ದೆಗಳಿಗೆ ತಕ್ಕಷ್ಟು ಕೂಡ ಅರ್ಜಿ ಸಲ್ಲಿಕೆಯಾಗಿಲ್ಲ. ಹಾಗಾಗಿ, ಡಿ.ಇಡಿ ಮತ್ತು ಬಿ.ಇಡಿ ಅಭ್ಯರ್ಥಿಗಳಿಗೆ ಹೈದ್ರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ವಿಷಯ ತಜ್ಞರಿಂದ ಉಚಿತ ಕೋಚಿಂಗ್‌ ಕೊಡಿಸಲು ಕ್ರಿಯಾಯೋಜನೆ ರೂಪಿಸಿ, ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಾತನಾಡಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ರೀತಿ ಅಕ್ರಮ ನಡೆಯದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕಾರ್ಯಗಳಿಗಾಗಿ ನೇಮಕಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಕೇಂದ್ರದಲ್ಲಿ ಇರತಕ್ಕದ್ದು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ತರಹದ ಕೈ ಗಡಿಯಾರ, ಕ್ಯಾಲ್ಕು ್ಯಲೇಟರ್‌ ಹಾಗೂ ಮೊಬೈಲ್ ತರುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್‌ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಸಂತ ವಿ. ಕುಲಕರ್ಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ| ವಿ. ಮುನಿರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಹಬೀಬ ಉಸ್ಮಾನ್‌ ಪಟೇಲ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಸಂಜೀವ್‌ಕುಮಾರ ರಾಯಚೂರಕರ್‌, ಪೌರಾಯುಕ್ತ ರಮೇಶ ಸುಣಗಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ ರಾಜ್‌ಕುಮಾರ್‌ ಪತ್ತಾರ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ| ಶರಣಭೂಪಾಲರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.