ವಿವೇಕ್ ಒಬೆರಾಯ್ ವಿವಾದಿತ ಟ್ವೀಟ್ ಡಿಲೀಟ್, ಮಹಿಳೆಯನ್ನೆಂದೂ ಅಗೌರವಿಸಿಲ್ಲ
Team Udayavani, May 21, 2019, 11:17 AM IST
ಮುಂಬಯಿ : ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರು ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಕುರಿತ ತನ್ನ ವಿವಾದಿತ ಟ್ವೀಟನ್ನು ಡಿಲೀಟ್ ಮಾಡಿದ್ದಾರೆ. ಯಾವುದೇ ಮಹಿಳೆಯನ್ನು ಅಗೌರವದಿಂದ ಕಾಣುವುದನ್ನು ನಾನೆಂದೂ ಯೋಚಿಸಲಾರೆ ಎಂದು ವಿವೇಕ್ ಹೇಳಿದ್ದಾರೆ.
ಒಬೆರಾಯ್ ಅವರು ಮತಗಟ್ಟೆ ಸಮೀಕ್ಷೆಗೆ ಸಂಬಂಧಿಸಿ ತಾನು, ಐಶ್ವರ್ಯಾ ರೈ ಬಚ್ಚನ್ ಮತ್ತು ನಟ ಸಲ್ಮಾನ್ ಖಾನ್ ಇರುವ ವಿವಾದಿತ ಮೀಮ್ (meme) ಒಂದನ್ನು ಶೇರ್ ಮಾಡಿಕೊಂಡಿದ್ದರು. ಅದಕ್ಕೆ ವ್ಯಾಪಕ ಟೀಕೆ, ಖಂಡನೆ ವ್ಯಕ್ತವಾಗಿತ್ತು.
ಮಾತ್ರವಲ್ಲದೆ ಮಹಾರಾಷ್ಟ್ರ ರಾಜ್ಯದ ಮಹಿಳಾ ಆಯೋಗ ಮತು ರಾಷ್ಟ್ರೀಯ ಮಹಿಳಾ ಆಯೋಗದಿಂದಲೂ ವಿವೇಕ್ ಒಬೆರಾಯ್ ಗೆ ನೊಟೀಸ್ ಜಾರಿಯಾಗಿ ಸ್ಪಷ್ಟನೆಯನ್ನು ಕೋರಲಾಗಿತ್ತು.
“ಕೆಲವೊಮ್ಮೆ ಮೇಲ್ನೋಟಕ್ಕೆ ತಮಾಷೆಯ ನಿರುಪದ್ರವಿ ಸಂಗತಿಗಳು ಕೆಲವರಿಗೆ ಹಾಗೆ ಅನ್ನಿಸದಿರಬಹುದು; ನಾನು ಕಳೆದ ಹತ್ತು ವರ್ಷಗಳನ್ನು 2,000 ಕ್ಕೂ ಅಧಿಕ ಅವಕಾಶ ವಂಚಿತ ಹೆಣ್ಣು ಮಕ್ಕಳ ಸಶಕ್ತೀಕರಣಕ್ಕಾಗಿ ದುಡಿದಿದ್ದೇನೆ; ಯಾವೊಬ್ಬ ಮಹಿಳೆಯನ್ನೂ ಅಗೌರವದಿಂದ ನಾನು ಕಾಣಲಾರೆ” ಎಂದು ವಿವೇಕ್ ಒಬೆರಾಯ್ ಟ್ವಿಟರ್ನಲ್ಲಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.