ಬಗರ್ ಹುಕುಂ ಸಾಗುವಳಿ ಹಕ್ಕುಪತ್ರ ವಿತರಣೆಗೆ ಆಗ್ರಹ
Team Udayavani, May 21, 2019, 12:04 PM IST
ದಾವಣಗೆರೆ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
ದಾವಣಗೆರೆ: ಅರಣ್ಯಭೂಮಿ, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ(ಹುಚ್ಚವ್ವನಹಳ್ಳಿ ಮಂಜುನಾಥ್ ಬಣ) ನೇತೃತ್ವದಲ್ಲಿ ಸಾಗುವಳಿದಾರರರು ಸೋಮವಾರ ಪ್ರತಿಭಟನೆ ನಡೆಸಿದರು.
ಶ್ರೀ ಜಯದೇವ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ತಾಲೂಕು ಆಡಳಿತ ಕೂಡಲೇ ತಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲದೇ ಹೋದಲ್ಲಿ ಮಾಯಕೊಂಡ ಹೋಬಳಿಯ ಎಲ್ಲಾ ಕಡೆ ತಹಶೀಲ್ದಾರ್ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.
ಅರಣ್ಯಭೂಮಿ, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಸಂಘಟನೆಯ ನೇತೃತ್ವದಲ್ಲಿ ವಿವಿಧ ಹಂತದ ಹಲವಾರು ಹೋರಾಟ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ 1992 ಮತ್ತು 1999 ರಲ್ಲಿ ಬಗರ್ ಹುಕುಂ ಸಾಗುವಳಿದಾರರಿಂದ ಹಕ್ಕುಪತ್ರಕ್ಕಾಗಿ ಫಾರಂ ನಂಬರ್ 52 ಮತ್ತು ಫಾರಂ ನಂಬರ್ 53 ಅರ್ಜಿ ಆಹ್ವಾನಿಸಿತ್ತು. ಅದರಂತೆ ಅನೇಕರು ಸಲ್ಲಿಸಿರುವ ಅರ್ಜಿಗಳನ್ನು ಬಗರ್ ಹುಕುಂ ಸಮಿತಿ ಸರಿಯಾಗಿ ನಿರ್ವಹಣೆ ಮಾಡಿಯೇ ಇಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಈಗ ಸರ್ಕಾರ ಫಾರಂ ನಂಬರ್ 57 ಆಹ್ವಾನಿಸಿದೆ. ದಾವಣಗೆರೆ ತಾಲೂಕಿನಲ್ಲೇ 2,650 ಅರ್ಜಿಗಳನ್ನು ತಾಲೂಕು ಆಡಳಿತಕ್ಕೆ ಸಲ್ಲಿಸಲಾಗಿದೆ. ಸರ್ಕಾರದಿಂದ ಈಗಾಗಲೇ ದಾವಣಗೆರೆ ತಾಲೂಕು ಮತ್ತು ಮಾಯಕೊಂಡ ಕ್ಷೇತ್ರದ ಬಗರ್ ಹುಕುಂ ಸಮಿತಿ ಸಹ ರಚನೆಯಾಗಿವೆ. ಅದೇ ರೀತಿ ಇತರೆಡೆಯೂ ಬಗರ್ ಹುಕುಂ ಸಮಿತಿ ರಚಿಸಬೇಕು ಹಾಗೂ ಫಾರಂ ನಂ. 52, 53 ಹಾಗೂ 57 ಅರ್ಜಿಗಳನ್ನು ತಕ್ಷಣವೇ ವಿಲೇವಾರಿ ಮಾಡುವ ಮೂಲಕ ಭೂಮಿ ಹಂಚಿಕೆ ಹಾಗೂ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಕಂದಾಯ ಇಲಾಖೆ 2000 ಹಾಗೂ 2004ರಲ್ಲಿ ತನ್ನ ವ್ಯಾಪ್ತಿಯಲ್ಲಿನ ಅರಣ್ಯ ಭೂಮಿಯನ್ನು ಸಂಬಂಧಿತ ಇಲಾಖೆಗೆ ವರ್ಗಾಯಿಸಿದೆ. ಅಂತಹ ಸಂದರ್ಭದಲ್ಲಿ ಅರಣ್ಯ ಅತಿಕ್ರಮಣದಾರರ ಅರ್ಜಿ ಪರಿಶೀಲನೆ ಮಾಡುವಾಗ ಯಾವ ವರ್ಷದ ದಾಖಲೆ ಆಧಾರದ ಮೇಲೆ ಭೂಮಿಯನ್ನು ಮಂಜೂರಾತಿ ಮಾಡುತ್ತಿದೆ ಎಂಬುದನ್ನು ಸರ್ಕಾರ, ತಹಶೀಲ್ದಾರ್ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ಎಲ್ಲಾ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು. ಇಲ್ಲದೇ ಹೋದಲ್ಲಿ ಸಂಘಟನೆ ನೇತೃತ್ವದಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸಂಘಟನೆ ರಾಜ್ಯ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, ಹೊನ್ನೂರು ಸಿದ್ದವೀರಪ್ಪ, ಗುಮ್ಮನೂರು ಬಸವರಾಜ್, ಕೋಲ್ಕುಂಟೆ ಬಸಣ್ಣ, ಕುಕ್ಕುವಾಡ ಪರಮೇಶ್, ಕಾಡಜ್ಜಿ ಪ್ರಕಾಶ್, ಆಲೂರು ಪರಶುರಾಮ್, ಬಾತಿ ಮಂಜಪ್ಪ, ಹುಚ್ಚವ್ವನಹಳ್ಳಿ ಪ್ರಕಾಶ್, ಚಿಕ್ಕಬೂದಾಳ್ ಭಗತ್‌ಸಿಂಹ, ಹೂವಿನಮಡು ನಾಗರಾಜ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.