ಶೃಂಗೇರಿ ಸಮಗ್ರ ಅಭಿವೃದ್ಧಿಗೆ ಒತ್ತು: ಶಾಸಕ ರಾಜೇಗೌಡ


Team Udayavani, May 21, 2019, 12:40 PM IST

chikmangalru-tdy-03..

ಶೃಂಗೇರಿ: ಪಪಂ ಚುನಾವಣೆ ಹಿನ್ನೆಲೆಯಲ್ಲಿ ಶಾಸಕ ಟಿ.ಡಿ.ರಾಜೇಗೌಡ ಮನೆ ಮನೆಗೆ ತೆರಳಿ ಅಭ್ಯರ್ಥಿಗಳ ಪರ ಮತಯಾಚಿಸಿದರು.

ಶೃಂಗೇರಿ: ಪಟ್ಟಣದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್‌ ಹೆಚ್ಚಿನ ಆದ್ಯತೆ ನೀಡಿದ್ದು, ಈ ಬಾರಿ ನಡೆಯುವ ಪಟ್ಟಣ ಪಂಚಾಯತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಕಾಂಗ್ರೆಸ್‌ಗೆ ಅಧಿಕಾರ ನೀಡಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ಮನವಿ ಮಾಡಿದರು.

ಸೋಮವಾರ ಪಪಂ ವ್ಯಾಪ್ತಿಯ ವಿವಿಧ ವಾರ್ಡ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಮತಯಾಚಿಸಿದ ಬಳಿಕ ಮಾತನಾಡಿದ ಅವರು, ಪಟ್ಟಣದ ಜನತೆ ಈ ಬಾರಿ ಬದಲಾವಣೆ ಬಯಸಿದ್ದು, ಈ ಬಾರಿ ಕಾಂಗ್ರೆಸ್‌ಗೆ ಪೂರ್ಣ ಬಹುಮತ ನೀಡುವ ವಿಶ್ವಾಸವಿದೆ.ಶ್ರೀಮಠಕ್ಕೆ ಬರುತ್ತಿರುವ ಸಹಸ್ರಾರು ಭಕ್ತರನ್ನು ಗಮನದಲ್ಲಿಟ್ಟುಕೊಂಡು ಸ್ವಚ್ಛ ಶೃಂಗೇರಿ ಮಾಡುವುದು ಕಾಂಗ್ರೆಸ್‌ನ ಮೊದಲ ಆದ್ಯತೆಯಾಗಿದೆ. ಪಟ್ಟಣದ ಅಭಿವೃದ್ಧಿಗೆ ಸರಕಾರ ಈ ಬಾರಿ ಹೆಚ್ಚಿನ ಅನುದಾನ ನೀಡಿದ್ದು, ಇದರಿಂದ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶ ಸಂಪೂರ್ಣವಾಗಿ ಅಭಿವೃದ್ಧಿಯಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಪಂ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಟರಾಜ್‌,ಪಟ್ಟಣ ಕಾಂಗ್ರೆಸ್‌ ಅಧ್ಯಕ್ಷ ದಿನೇಶ್‌ ಶೆಟ್ಟಿ, ಮುಖಂಡರಾದ ವಿಜಯಕುಮಾರ್‌, ಅಭ್ಯರ್ಥಿಗಳಾದ ಉಮೇಶ್‌ ಪುದುವಾಳ್‌ ,ಲತಾ, ಆಶಾಶೆಟ್ಟಿ, ಸೌಮ್ಯವಿಜಯಕುಮಾರ್‌ ಇನ್ನಿತರರಿದ್ದರು.

ಪುರಸಭೆ17 ನಾಮಪತ್ರ ವಾಪಸ್‌:

ಮೂಡಿಗೆರೆ: ಮೇ.29ರಂದು 11 ವಾರ್ಡ್‌ಗೆ ನಡೆಯುವ ಪಪಂ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಸೇರಿದಂತೆ ಒಂಭತ್ತು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, ಒಟ್ಟು 37 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದ್ದು, ಜೆಡಿಎಸ್‌ನ ಹಮ್ಮಬ್ಬ, ಮುಕ್ತಿಯಾರ್‌ಹುಸೇನ್‌ ಸೇರಿದಂತೆ 9 ಮಂದಿ ನಾಮಪತ್ರ ಹಿಂಪಡೆದಿದ್ದಾರೆ. ಒಟ್ಟು 49 ಅಭ್ಯರ್ಥಿಗಳು 68 ನಾಮಪತ್ರ ಸಲ್ಲಿಸಿದ್ದು, ಈ ಪೈಕಿ 22 ನಾಮಪತ್ರ ತಿರಸ್ಕೃತಗೊಂಡು 14 ಪಕ್ಷೇತರರು ನಾಮಪತ್ರ ಸಲ್ಲಿಸಿದ್ದು ಇದರಲ್ಲಿ 7 ಪಕ್ಷೇತರರು ನಾಮಪತ್ರ ಹಿಂಪಡೆದಿದ್ದರಿಂದ 7 ಪಕ್ಷೇತರ ಸಹಿತ ಒಟ್ಟು 37 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ ಎಲ್ಲಾ 11 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ಉಳಿಸಿಕೊಂಡರೆ, ಜೆಡಿಎಸ್‌ನ 10 ಅಭ್ಯರ್ಥಿಗಳ ಪೈಕಿ 2 ಇಬ್ಬರು ನಾಮಪತ್ರ ಹಿಂಪಡೆದು 8 ವಾರ್ಡ್‌ಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಕಡೂರು: ಮೇ.29ರಂದು ಕಡೂರು ಪುರಸಭೆಗೆ ನಡೆಯುವ ಚುನಾವಣೆಗೆ ಅಂತಿಮವಾಗಿ 23 ವಾರ್ಡ್‌ಗಳಿಂದ 89 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿಗಳಾದ ಡಾ| ದೇವರಾಜನಾಯ್ಕ, ರಾಜಪ್ಪ ತಿಳಿಸಿದ್ದಾರೆ. ಸೋಮವಾರ ಉಮೇದುವಾರಿಕೆ ಹಿಂಪಡೆಯಲು ಕಡೆ ದಿನವಾಗಿತ್ತು. 17 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದ ನಂತರ 23 ವಾರ್ಡ್‌ಗಳಿಂದ 89 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ ಎಂದು ತಿಳಿಸಿದ್ದಾರೆ.
ಕಣದಿಂದ ಹಿಂದೆ ಸರಿದ 8 ಅಭ್ಯರ್ಥಿಗಳು:ಶೃಂಗೇರಿ ಮೇ.29 ರಂದು 11 ವಾರ್ಡ್‌ಗಳಿಗೆ ನಡೆಯುವ ಪಟ್ಟಣ ಪಂಚಾಯತ್‌ ಚುನಾವಣೆಯ ಅಂತಿಮ ಕಣದಲ್ಲಿ 25 ಅಭ್ಯರ್ಥಿಗಳು ಉಳಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ ಎಲ್ಲಾ ವಾರ್ಡ್‌ನಲ್ಲೂ ಸ್ಪರ್ಧೆ ಮಾಡಿದ್ದು, 1ನೇ ವಾರ್ಡ್‌ನಲ್ಲಿ ಜೆಡಿಎಸ್‌ ಹಾಗೂ ಇಬ್ಬರು ಪಕ್ಷೇತರರು ಸ್ಪರ್ಧೆ ಮಾಡಿದ್ದಾರೆ. ಒಟ್ಟು 33 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 8 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ ಎಂದು ಚುನಾವಣಾಧಿಕಾರಿ ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.