ಬೋರ್‌ವೆಲ್ ಕೊರೆಸಲು ಚಾಲನೆ

Team Udayavani, May 21, 2019, 1:41 PM IST

gulbarga-tdy-5..

ವಾಡಿ: ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಪುರಸಭೆ ವತಿಯಿಂದ ಬೋರ್‌ವೆಲ್ ಕೊರೆಸಲಾಯಿತು.

ವಾಡಿ: ಕುಡಿಯುವ ನೀರಿನ ಸಮಸ್ಯೆಯಿಂದ ತೀವ್ರ ಸಂಕಟದಲ್ಲಿರುವ ಪಟ್ಟಣದ ವಿವಿಧ ಬಡಾವಣೆಗಳ ಜನರ ಅನುಕೂಲಕ್ಕಾಗಿ ಕೊಳವೆಬಾವಿ (ಬೋರ್‌ವೆಲ್)ಗಳು ಮಂಜೂರಾಗಿದ್ದು, ಕೊನೆಗೂ ಪುರಸಭೆ ಅಧಿಕಾರಿಗಳು ಎಚ್ಚೆತುಕೊಂಡು ಬೋರ್‌ವೆಲ್ ಕೊರೆಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಪುರಸಭೆಯ ಒಟ್ಟು 23 ವಾರ್ಡ್‌ಗಳ ಜಲಮೂಲಗಳಾದ ಕಾಗಿಣಾ ಮತ್ತು ಭೀಮಾ ನದಿಗಳಲ್ಲಿ ನೀರಿಲ್ಲದೆ ಜನ-ಜಾನುವಾರುಗಳು ತತ್ತರಿಸಿ ಹೋಗಿವೆ. ಕೆಟ್ಟ ಬೋರ್‌ವೆಲ್ಗಳ ದುರಸ್ತಿ ಹಾಗೂ ಹೊಸ ಬೋರ್‌ವೆಲ್ಗಳ ಅಳವಡಿಕೆಗೆ ಬೇಡಿಕೆ ಹೆಚ್ಚಾಗಿತ್ತು. ಎರಡು ಸಲ ಬೆಣ್ಣೆತೋರಾ ಜಲಾಶಯದಿಂದ 0.025 ಟಿಎಂಸಿ ಅಡಿ ನೀರು ಕಾಗಿಣಾ ನದಿಗೆ ಹರಿಬಿಟ್ಟರೂ ಖಾಲಿ ಕೊಡಗಳ ಪ್ರದರ್ಶನ ಮುಂದುವರಿದಿದೆ. ದೂರದ ಪ್ರದೇಶಗಳಿಂದ ಜನರು ನೀರು ತರುತ್ತಿದ್ದಾರೆ. ಕೆಲವರು ನೀರು ಖರೀದಿಸುತ್ತಿದ್ದಾರೆ. ಎರಡು ನದಿಗಳಿದ್ದರೂ ನೀರಿಗಾಗಿ ಪರದಾಟ ತಪ್ಪುತ್ತಿಲ್ಲವಲ್ಲ ಎಂಬ ಕೊರಗು ಸ್ಥಳೀಯರದ್ದಾಗಿದೆ.

ಬೇಸಿಗೆ ಕೊನೆಯಾಗುವ ಗಳಿಗೆಯಲ್ಲಾದರೂ ಪುರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಕೇರ್‌ಸಿಟಿ ಅನುದಾನದಡಿ ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿರುವ ಕುಡಿಯುವ ನೀರಿನ ವಿಶೇಷ ಅನುದಾನ 16 ಲಕ್ಷ ರೂ. ವೆಚ್ಚದಲ್ಲಿ ಮೂರು ಬೋರ್‌ವೆಲ್ ಮಂಜೂರಾಗಿದ್ದು, ಜಲ ತಜ್ಞರ ಸಲಹೆಯಂತೆ ಒಟ್ಟು ಐದು ಬೋರ್‌ವೆಲ್ ಕೊರೆಸಲಾಗುತ್ತಿದೆ. ವಾರ್ಡ್‌ 1ರ ಬಸವನಕಣಿ, ವಾರ್ಡ್‌ 16 ಭೀಮನಗರ-ಮರಾಠಾಗಲ್ಲಿ, ವಾರ್ಡ್‌ 23 ಇಂದ್ರಾನಗರ, ವಾರ್ಡ್‌ 6 ಜಾಂಬವೀರ ಕಾಲೋನಿ, ವಾರ್ಡ್‌ 5ರಲ್ಲಿ ಕೊಳವೆಬಾವಿ ಕೊರೆಸಲು ಸ್ಥಳ ಗುರುತಿಸಲಾಗಿದೆ. ಬಸವನಕಣಿ ಮತ್ತು ಭೀಮನಗರದಲ್ಲಿ ಕೊರೆಸಲಾದ ಮೂರು ಬೋರ್‌ವೆಲ್ಗಳಲ್ಲಿ ಅಂತರ್ಜಲ ಜಿನುಗಿದ್ದು, ಬಡಾವಣೆ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಸದ್ಯ ಆರಂಭದಲ್ಲಿ ಐದು ಬೋರ್‌ವೆಲ್ ಕೊರೆಸಲಾಗುತ್ತಿದೆ. ಕೆಟ್ಟು ನಿಂತಿರುವ ಬೋರ್‌ವೆಲ್ಗಳ ದುರಸ್ತಿ ಜತೆಗೆ ಹೊಸ ಮೋಟರ್‌ ಅಳವಡಿಸಲಾಗುತ್ತಿದೆ. ಅಗತ್ಯವಿರುವ ಇತರ ಬಡಾವಣೆಗಳಿಗೂ ಎರಡನೇ ಹಂತದಲ್ಲಿ ಬೋರ್‌ವೆಲ್ ಕೊರೆಸಲಾಗುವುದು. ಅಲ್ಲದೆ ಈಗಾಗಲೇ ಕೊರೆಸಲಾದ ಹೊಸ ಬೋರ್‌ವೆಲ್ಗಳಿಂದ ಉತ್ತಮ ಪ್ರಮಾಣದಲ್ಲಿ ನೀರಿನ ಸೆಲೆ ಸಿಕ್ಕಿದೆ. ಆ ಕೊಳವೆಬಾವಿಗಳಿಗೆ ಸಣ್ಣ ನೀರು ಸರಬರಾಜು ಘಟಕಗಳಾಗಿ ಪರಿವರ್ತಿಸಲಾಗುತ್ತಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಸವಿತಾ ರೇಣುಕಾ ಹಾಗೂ ಕಿರಿಯ ಅಭಿಯಂತರ ಅಶೋಕ ಪುಟ್ಫಾಕ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.