ನೀಟ್‌ ಪರೀಕ್ಷೆ

ವೈದ್ಯಕೀಯ ಕ್ಷೇತ್ರದ ಬಾಗಿಲು

Team Udayavani, May 22, 2019, 6:00 AM IST

z-16

ಶಾಲಾ ಕಾಲೇಜುಗಳ ಪರೀಕ್ಷೆಯಲ್ಲಿ ರ್‍ಯಾಂಕ್‌ ಪಡೆದರೂ ಉನ್ನತ ಶಿಕ್ಷಣಕ್ಕಾಗಿ ಹೆಚ್ಚುವರಿ ಪರೀಕ್ಷೆಗಳನ್ನು ಎದುರಿಸಬೇಕಾದದ್ದು ಸದ್ಯದ ಸ್ಥಿತಿ.

ವಿದ್ಯಾರ್ಥಿಗಳ ಜ್ಞಾನ, ಅರ್ಹತೆ ಬೆಳೆ ಸುವ ಸಲುವಾಗಿ ಈ ಹೆಚ್ಚುವರಿ ಪರೀಕ್ಷೆಗಳನ್ನು ಮಾಡಲಾಗುತ್ತದೆ. ವೈದ್ಯಕೀಯ, ಎಂಜಿನಿಯರಿಂಗ್‌ ಸೇರ ಬಯಸುವವರ ಮೊದಲ ಹೆಜ್ಞೆಯೇ ಈ ಹೆಚ್ಚುವರಿ ಪರೀಕ್ಷೆಗಳು. ಇಲ್ಲಿ ಉತ್ತಮ ರ್‍ಯಾಂಕ್‌ನಲ್ಲಿ ಉತ್ತೀರ್ಣರಾದರಷ್ಟೇ ಮುಂದಿನ ಬಾಗಿಲು ತೆರೆದುಕೊಳ್ಳುವುದು.

ಪಿಯುಸಿ ಬಳಿಕ ಎಂಜಿನಿಯರಿಂಗ್‌ , ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು ಸಿಇಟಿ, ನೀಟ್‌ನಂತಹ ಪರೀಕ್ಷೆಗಳನ್ನು ಎದುರಿಸುವ ಅನಿವಾರ್ಯತೆ ವಿದ್ಯಾರ್ಥಿಗಳಿಗೂ ಇದೆ. ಈ ಕ್ಷೇತ್ರಗಳಿಗೆ ಕಾಲಿಡಲು ಈ ಪರೀಕ್ಷೆಗಳು ಮುಖ್ಯವಾದವು. ವೈದ್ಯಕೀಯ ಕ್ಷೇತ್ರಕ್ಕೆ ಕಾಲಿಡಲು ನೀಟ್‌ ಪರೀಕ್ಷೆ ಬರೆಯಲೇಬೇಕು. ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜ್ಞಾನ, ಅರ್ಹತೆಯನ್ನು ಅಳೆಯಲಾಗುವುದು.

ನೀಟ್‌ ಪರೀಕ್ಷೆಗೆ ಅರ್ಹತೆ
ಸರಕಾರಿ ಅಥವಾ ಖಾಸಗಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಇನ್ನಿತರ ಯಾವುದೇ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಾವಕಾಶ ಕಲ್ಪಿಸುವ ಪರೀಕ್ಷೆಯೇ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌). ಎಂಬಿಬಿಎಸ್‌, ಬಿಡಿಎಸ್‌ ಅಥವಾ ಸ್ನಾತಕೋತ್ತರ ಕೋರ್ಸ್‌ ಎಂ.ಡಿ., ಎಂ.ಎಸ್‌. ಅಭ್ಯಸಿಸಲು ಬಯಸುವ ವಿದ್ಯಾರ್ಥಿಗಳಿಗೆ ಇದೊಂದು ಪ್ರವೇಶ ಪರೀಕ್ಷೆ. ನೀಟ್‌ ಪರೀಕ್ಷೆಯನ್ನು ನ್ಯಾಶ‌ನಲ್‌ ಟೆಸ್ಟಿಂಗ್‌ ಏಜೆನ್ಸಿ (ಎನ್‌ಟಿಎ) ನಡೆಸಿಕೊಡುತ್ತದೆ.

ಎನ್‌ಟಿಎಯು ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳ ವಯಸ್ಸು, ಅರ್ಹತೆ ಎಲ್ಲವನ್ನೂ ನಿರ್ಧರಿಸುತ್ತದೆ. ನೀಟ್‌ ಪರೀಕ್ಷೆ ಜಾರಿಯಾದ ಅನಂತರ ಈ ಹಿಂದೆ ಇದ್ದ ಅಲ್‌ ಇಂಡಿಯಾ ಪ್ರಿ ಮೆಡಿಕಲ್‌ ಟೆಸ್ಟ್‌ ಹಾಗೂ ಹಲವಾರು ರಾಜ್ಯಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳು ನಡೆಸುತ್ತಿದ್ದ ಪ್ರವೇಶ ಪರೀಕ್ಷೆಗಳು ರದ್ದುಗೊಂಡಿವೆ.

ನೀಟ್‌ ಪರೀಕ್ಷೆ ಬರೆಯುವವರು ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ಫಿಸಿಕ್ಸ್‌, ಕೆಮೆಸ್ಟ್ರಿ ಬಯೋಲಾಜಿ, ಬಯೋ ಟೆಕ್ನಾಲಜಿ, ಇಂಗ್ಲಿಷ್‌ ಪಠ್ಯಗಳನ್ನು ಅಭ್ಯಸಿಸಿರಬೇಕು. ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಶೇ.50ರಷ್ಟು ಅಂಕಗಳನ್ನು ಪಡೆದಿರಬೇಕು.

ನೀಟ್‌ ಪರೀಕ್ಷೆಯನ್ನು 17- 25 ವಯ ಸ್ಸಿ ನೊ ಳ ಗಿನವ ರು ಹಲವು ಬಾರಿ ಬರೆಯಬಹುದು. ಆದರೆ ವಯಸ್ಸು ಮೀರಿ ದರೆ ನೀಟ್‌ ಪರೀಕ್ಷೆ ಎದುರಿಸುವಂತಿಲ್ಲ. ಎನ್‌ಟಿಎ ರೂಪಿಸಿದ ನಿಯಮಗಳ ಅನ್ವಯ ದೇಶದ ಎಲ್ಲ ವೈದ್ಯಕೀಯ, ದಂತ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಯುತ್ತದೆ. ಆನ್‌ಲೈನ್‌ ಮೂಲಕ ನೀಟ್‌ ಪರೀಕ್ಷೆಗೆ ಅರ್ಜಿಗಳನ್ನು ಸಲ್ಲಿಸಿ ಬಂದ ಮಾಹಿತಿಯಂತೆ ಪರೀಕ್ಷೆ ಎದುರಿಸಬೇಕಾಗುತ್ತದೆ. ದೇಶದ ಯಾವುದೇ ಭಾಗಗಳ ಪರೀಕ್ಷಾ ಕೇಂದ್ರಗಳನ್ನು ಪರೀಕ್ಷಾ ಮಂಡಳಿ ಸೂಚಿಸಿದರೆ ಅಲ್ಲಿ ತೆರಳಿ ಪರೀಕ್ಷೆ ಎದುರಿಸಬೇಕಾಗುತ್ತದೆ.

ಪೂರ್ವಸಿದ್ಧತೆ ಅಗತ್ಯ
ಯಾವುದೇ ಪರೀಕ್ಷೆಯನ್ನು ಎದುರಿಸಲು ಪೂರ್ವ ಸಿದ್ಧತೆ ಅಗತ್ಯವಾಗಿರುತ್ತದೆ. ಇದರಂತೆ ನೀಟ್‌ ಪರೀಕ್ಷೆಗೂ ಪೂರ್ವ ತಯಾರಿ ಬೇಕು. ವೈದ್ಯರಾಗಿ ಸೇವೆ ಮಾಡಬೇಕು ಎಂದು ಬಯಸುವವರು ಖಾಸಗಿ ಕಾಲೇಜುಗಳಿಗೆ ದುಬಾರಿ ಫೀಸ್‌ ನೀಡಿ ಸೇರಿಕೊಳ್ಳುವುದಕ್ಕಿಂತ ಪರೀಕ್ಷೆ ಬರೆದು ಉತ್ತಮ ಅಂಕಗಳನ್ನು ಪಡೆದು ಕಾಲೇಜು ಮೆಟ್ಟಲೇರುವುದು ಉತ್ತಮ ಎಂಬ ಕಾರಣಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ನೀಟ್‌ ಪರೀಕ್ಷೆ ಬರೆಯಲು ಹವಣಿಸುತ್ತಾರೆ.

ಪ್ರಥಮ ಪಿಯುಸಿಯಲ್ಲೇ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರ ವಹಿಸಬೇಕಾಗುತ್ತದೆ. ಕಾಲೇಜು ದಿನಗಳಲ್ಲಿ ವಿಜ್ಞಾನ ವಿಷಯದಲ್ಲಿ ಆಯ್ದ ವಿಭಾಗಗಳನ್ನು ಹೆಚ್ಚು ಅಭ್ಯಸಿಸಬೇಕಾಗುತ್ತದೆ. ಆದಕ್ಕೆ ಪೂರಕವಾದ ಪುಸ್ತಕಗಳನ್ನು ಹೆಚ್ಚು ಓದಬೇಕಾಗುತ್ತದೆ.

ಏಕಾಗ್ರತೆ, ತಾಳ್ಮೆ ಈ ನೀಟ್‌ ಪರೀಕ್ಷೆಗೆ ಅತೀ ಮುಖ್ಯ. ಯಾವುದೇ ಕಾರಣಕ್ಕೂ ಬೇಜವಾಬ್ದಾರಿ ಬೇಡವೇ ಬೇಡ. ಈ ಪರೀಕ್ಷೆಯಲ್ಲೇ ಭವಿಷ್ಯ ನಿರ್ಧಾರವಾಗಲಿರುವುದರಿಂದ ಏಕಾಗ್ರತೆ, ದೃಢ ಮನಸ್ಸು, ತಾಳ್ಮೆಯಿಂದ ಪರೀಕ್ಷೆಗೆ ಸಿದ್ಧತೆ ನಡೆಸುವ ಅಗತ್ಯವಿದೆ. ಓದಿರುವ ವಿಷಯಗಳನ್ನೇ ಓದುತ್ತಿದ್ದೇನೆ ಎಂಬ ಉಡಾಫೆ ಇಟ್ಟುಕೊಳ್ಳದಿರಿ. ಇದು ನಿಮ್ಮ ಭವಿಷ್ಯಕ್ಕೆ ನೀವೇ ಅಂತ್ಯ ಹಾಡಿದಂತಾಗುತ್ತದೆ.
ಸ್ನೇಹಿತರೊಂದಿಗೆ, ಈಗಾಗಲೇ ನೀಟ್‌ ಪರೀಕ್ಷೆ ಬರೆದವರೊಂದಿಗೆ ಕೆಲ ಹೊತ್ತು ಚರ್ಚೆ ಮಾಡಿ. ಇದರಿಂದ ಕೆಲವೊಂದು ಅಗತ್ಯ ಮಾಹಿತಿಗಳು ದೊರೆಯುವ ಸಾಧ್ಯತೆಗಳಿವೆ.

ನೀಟ್‌ ಪರೀಕ್ಷೆ ಬರೆದು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದರೆ ವೈದ್ಯಕೀಯ ಸೀಟುಗಳನ್ನು ಪಡೆದು ಕೊಳ್ಳಬಹುದು. ಇಲ್ಲವಾದಲ್ಲಿ ಮುಂದೆ ಯಾವುದೇ ರೀತಿಯ ಸ್ಪರ್ಧಾತ್ಮಕ ಪರೀಕ್ಷೆ ಗಳನ್ನು ಎದುರಿಸುವಾಗ ನೀಟ್‌ ಪರೀಕ್ಷೆ ಅನುಭವ ಉಪಯೋಗಕ್ಕೆ ಬರುತ್ತದೆ.

-  ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

11(1

Udupi: ಇಲ್ಲಿ ಹೊಂಡಗಳೇ ಸ್ಪೀಡ್‌ ಬ್ರೇಕರ್‌ಗಳು!

10-uv-fusion

Rainy Season: ಮೊಬೈಲ್‌ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.