ಲೋಕ ಸಮರ: ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು
10 ಕೊಠಡಿಗಳಲ್ಲಿ ಎಣಿಕೆ • ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮತ 10 ಟೇಬಲ್ • 89 ಮಂದಿ ಮೇಲ್ವಿಚಾರಕರು
Team Udayavani, May 22, 2019, 8:36 AM IST
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್, ಪೊಲೀಸ್ ವರಿಷ್ಠಾಧಿಕಾರಿ ಸಂತೋಷಬಾಬು ಜಂಟಿ ಸುದ್ದಿಗೋಷ್ಠಿ ನಡೆಸಿ ಮತ ಎಣಿಕೆ ಕಾರ್ಯದ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.
ಚಿಕ್ಕಬಳ್ಳಾಪುರ: ಕಳೆದ ಏ.18 ರಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಒಟ್ಟು 2,284 ಮತಗಟ್ಟೆಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮೇ.23 ರಂದು ನಗರದ ಹೊರ ವಲಯದ ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ನಡೆಯಲಿದ್ದು, ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿಯು ಆಗಿರುವ ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಅನಿರುದ್ಧ್ ಶ್ರವಣ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 9,10,472 ಮಂದಿ ಪುರುಷ, 8.97,681 ಮಹಿಳಾ ಹಾಗೂ 238 ಇತರೆ ಮತದಾರರು ಸೇರಿ 18,08,391 ಮಂದಿ ಪೈಕಿ 7,06.695 ಪುರುಷ, 6,78,656 ಮಹಿಳೆಯರ ಹಾಗೂ ಇತರೆ 36 ಮಂದಿ ಸೇರಿ ಒಟ್ಟು 13,85,387 ಮಂದಿ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಿದ್ದು, ಶೇ.76.61 ಮತದಾನ ದಾಖಲುಗೊಂಡಿದೆ ಎಂದರು.
10 ಕೊಠಡಿಗಳಲ್ಲಿ ಮತ ಎಣಿಕೆ: ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ಒಂದು ಕೊಠಡಿಯಲ್ಲಿ ಮತ ಎಣಿಕೆ ನಡೆದರೆ, ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಎರಡು ಕೊಠಡಿಗಳಲ್ಲಿ ಹಾಗೂ ಅಂಚೆ ಮತಗಳಿಗೆ ಒಂದು ಕೊಠಡಿ ಸೇರಿ ಒಟ್ಟು 10 ಕೊಠಡಿಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮತ ಎಣಿಕೆ ಕಾರ್ಯಕ್ಕೆ ತಲಾ 10 ಟೇಬಲ್ಗಳಂತೆ ಹಾಗೂ ಯಲಹಂಕ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್ ಹಾಗೂ ಅಂಚೆ ಮತಗಳ ಎಣಿಕೆಗೆ 4, ಇಟಿಪಿಬಿಎಸ್‌ಗೆ 1 ಸೇರಿ ಒಟ್ಟು 89 ಟೇಬಲ್ಗಳನ್ನು ಅಳವಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ತಿಳಿಸಿದರು.
ಮತ ಎಣಿಕೆಗೆ 89 ಮೇಲ್ವಿಚಾರಕರು: ಮತ ಎಣಿಕೆ ಕಾರ್ಯವನ್ನು ಒಟ್ಟು 222 ಸುತ್ತುಗಳಲ್ಲಿ ನಡೆಯಲಿದೆ. ಆ ಪೈಕಿ ಗೌರಿಬಿದನೂರು ವಿಧಾನಸಭಾ ಕ್ಷೇತ್ರಕ್ಕೆ 27, ಬಾಗೇಪಲ್ಲಿ 27, ಚಿಕ್ಕಬಳ್ಳಾಪುರ 26, ಯಲಹಂಕ 27, ಹೊಸಕೋಟೆ 29, ದೇವನಹಳ್ಳಿ 30, ದೊಡ್ಡಬಳ್ಳಾಪುರ 28, ನೆಲಮಂಗಲ 28 ಸೇರಿ ಒಟ್ಟು 222 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.
ಹೊಸಕೋಟೆ ಹಾಗೂ ದೇವನಹಳ್ಳಿ ಕ್ಷೇತ್ರಗಳಲ್ಲಿ ಉಳಿದ ಕ್ಷೇತ್ರಗಳಿಂದ ಹೆಚ್ಚು ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದರು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮತ ಎಣಿಕೆ ವೇಳೆ ಸುಗಮ ಹಾಗೂ ಪಾರದರ್ಶಕತೆ ಕಾಯ್ದುಕೊಳ್ಳಲು ಪ್ರತಿ ಕ್ಷೇತ್ರಕ್ಕೆ ತಲಾ 10 ಹಾಗೂ ಯಲಹಂಕ ಕ್ಷೇತ್ರಕ್ಕೆ 14 ಮಂದಿ ಸೇರಿ ಒಟ್ಟು 89 ಮಂದಿ ಎಣಿಕೆ ಮೇಲ್ವಿಚಾರಕರನ್ನು ಕೂಡ ನೇಮಿಸಲಾಗಿದೆ.
ಎಣಿಕೆಗೆ ಒಟ್ಟು 90 ರಿಂದ 120 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಣಿಕೆ ಸೂಕ್ಷ್ಮ ವೀಕ್ಷಕರಾಗಿ ಒಟ್ಟು 89 ಮಂದಿಯನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮೊದಲು ಅಂಚೆ ಮತ ಎಣಿಕೆ: ಮೊದಲು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬೆಳಗ್ಗೆ 8 ಗಂಟೆಗೆ ಅಂಚೆ ಮತಗಳ ಎಣಿಕೆ ನಡೆಯಲಿದ್ದು, ಬಳಿಕವಷ್ಟೇ ಇವಿಎಂ ಮತಗಳ ಎಣಿಕೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಮತ ಎಣಿಕೆ ಕೇಂದ್ರದೊಳಗೆ ಅಭ್ಯರ್ಥಿಗಳು, ಬೂತ್ ಏಜೆಂಟರು, ಎಣಿಕೆ ಸಿಬ್ಬಂದಿ, ಭದ್ರತಾ ಸಿಬ್ಬಂದಿ ಹಾಗೂ ಮಾಧ್ಯಮದವರನ್ನು ಹೊರತುಪಡಿಸಿ ಬೇರೆ ಯಾರನ್ನು ಕೂಡ ಒಳಗೆ ಬಿಡುವುದಿಲ್ಲ.
ಪ್ರತಿಯೊಬ್ಬರಿಗೂ ಗುರುತಿಚಿನ ಚೀಟಿ ವಿತರಿಸಲಾಗಿದ್ದು, ಗುರುತಿನ ಚೀಟಿ ತೋರಿಸಿದರೆ ಮಾತ್ರ ಒಳಗೆ ಬಿಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದ ಇವಿಎಂ ಹಾಗು ವಿವಿಪ್ಯಾಟ್ ಯಂತ್ರಗಳನ್ನು ತಂದು ಕೊಡುವ ಸಿಬ್ಬಂದಿಗೆ ಪ್ರತ್ಯೇಕವಾಗಿ ಸಮವಸ್ತ್ರ ವಿತರಿಸಲಾಗುವುದು ಎಂದು ತಿಳಿಸಿದರು.
2,380 ಅಂಚೆ ಮತಗಳ ಸ್ವೀಕಾರ: ಜಿಲ್ಲೆಯಲ್ಲಿ ಇದುವರೆಗೂ ಕೇವಲ 2,380 ಅಂಚೆ ಮತಗಳ ಸ್ವೀಕಾರ ಆಗಿದೆ. ಆ ಪೈಕಿ ಗೌರಿಬಿದನೂರು ಕ್ಷೇತ್ರದಲ್ಲಿ 265, ಬಾಗೇಪಲ್ಲಿ 39, ಚಿಕ್ಕಬಳ್ಳಾಪುರ 533, ಯಲಹಂಕ ಕ್ಷೇತ್ರದಲ್ಲಿ 733, ಹೊಸಕೋಟೆ ಕ್ಷೇತ್ರದಲ್ಲಿ 169, ದೇವನಹಳ್ಳಿ ಕ್ಷೇತ್ರದಲ್ಲಿ 111, ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ 238, ನೆಲಮಂಗಲ ಕ್ಷೇತ್ರದಲ್ಲಿ ಒಟ್ಟು 292 ಸೇರಿ ಒಟ್ಟು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ 2,380 ಅಂಚೆ ಮತಗಳು ಸಲ್ಲಿಕೆಯಾಗಿವೆ. ಮೇ.23 ರಂದು ಬೆಳಗ್ಗೆ 8 ಗಂಟೆಯ ವ ರೆಗೂ ಉಳಿದ ಅಂಚೆ ಮತಗಳ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದರು.
ಮತ ಎಣಿಕೆಗೆ ವಿಧಾನಸಭಾ ಕ್ಷೇತ್ರವಾರು ವಿವರ:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.