ಅಭ್ಯರ್ಥಿ ಹಣೆಬರಹ ನಾಳೆ ಬಯಲು
•ಜಿಲ್ಲಾಧಿಕಾರಿ ಸ್ಟ್ರಾಂಗ್ ರೂಂ ಪರಿಶೀಲನೆ•ಪ್ರತಿ ಕ್ಷೇತ್ರದಿಂದ 5 ವಿವಿ ಪ್ಯಾಟ್ ಮತ ಎಣಿಕೆ
Team Udayavani, May 22, 2019, 9:54 AM IST
ಕೊಪ್ಪಳ: ಮತ ಎಣಿಕಾ ಕಾರ್ಯದ ಕೊಠಡಿಗಳ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದರು.
ಕೊಪ್ಪಳ: ಲೋಕಸಭಾ ಕ್ಷೇತ್ರದ ಮತ ಎಣಿಕೆ ಮೇ 23ರಂದು ನಗರದ ಗವಿಸಿದ್ದೇಶ್ವರ ಮಹಾವಿದ್ಯಾಲಯದಲ್ಲಿ ಬೆಳಗ್ಗೆ 8ರಿಂದ ಆರಂಭವಾಗಲಿದ್ದು, ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಒಟ್ಟು 569 ಸಿಬ್ಬಂದಿಯನ್ನು ನೇಮಕ ಮಾಡಿದ್ದು, ಪ್ರತಿ ಕ್ಷೇತ್ರಕ್ಕೆ 68 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪಿ. ಸುನೀಲ್ಕುಮಾರ ಹೇಳಿದರು.
ನಗರದ ಗವಿಸಿದ್ದೇಶ್ವರ ಮಹಾವಿದ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸ್ಟ್ರಾಂಗ್ ರೂಂ ಹಾಗೂ ಸಿದ್ಧತೆ ಪರಿಶೀಲನೆ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು. ಒಂದು ತಿಂಗಳಿಂದ ಮತಯಂತ್ರ ಇರುವ ಕೊಠಡಿಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಸಿಎಪಿಎಫ್, ಪೊಲೀಸ್ ಪಡೆ ಸೇರಿ ಇತರೆ ತಂಡಗಳು ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಿವೆ. ಇನ್ನೂ ಕಾಲೇಜಿನ ಕೆಳ ಕೊಠಡಿಗಳಲ್ಲಿ ಸಿಂಧನೂರು, ಮಸ್ಕಿ, ಕನಕಗಿರಿ, ಸಿರಗುಪ್ಪಾ ಕ್ಷೇತ್ರಗಳ ಮತಯಂತ್ರಗಳನ್ನು ಇರಿಸಲಾಗಿದೆ. ಮೊದಲ ಮಹಡಿಯಲ್ಲಿ ಕುಷ್ಟಗಿ, ಗಂಗಾವತಿ, ಕೊಪ್ಪಳ ಹಾಗೂ ಯಲಬುರ್ಗಾ ಕ್ಷೇತ್ರದ ಮತಯಂತ್ರಗಳನ್ನು ಇರಿಸಲಾಗಿದೆ. ಪ್ರತಿ ಮತ ಕ್ಷೇತ್ರಕ್ಕೆ 68 ಸಿಬ್ಬಂದಿ ನೇಮಕ ಮಾಡಲಾಗಿದೆ. ಎಂಟೂ ಕ್ಷೇತ್ರಕ್ಕೆ 569 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದರು.
ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ 117 ಏಜೆಂಟರ್ ನೇಮಕಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ವೀಕ್ಷಕರಾಗಿ ರಣ ವಿಜಯ್ ಯಾದವ್ ಹಾಗೂ ಉರ್ಮಿಳಾ ಸುರೇಂದರ್ ಶುಕ್ಲಾ ಅವರನ್ನು ಭಾರತ ಚುನಾವಣಾ ಆಯೋಗವು ನೇಮಕ ಮಾಡಿದೆ. ಈ ಇಬ್ಬರು ಅಧಿಕಾರಿಗಳು ತಲಾ 4 ಕ್ಷೇತ್ರಗಳ ಮತ ಎಣಿಕೆಯ ವೀಕ್ಷಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.
ಬೆಳಗ್ಗೆ 7:45ಕ್ಕೆ ಸ್ಟ್ರಾಂಗ್ ರೂಂ ಓಪನ್: ಮೇ 23ರ ಬೆಳಗ್ಗೆ 7:45ಕ್ಕೆ ಚುನಾವಣಾ ವೀಕ್ಷಕರ, ಮತ ಎಣಿಕಾ ವೀಕ್ಷಕರ ಸಮಕ್ಷಮದಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಗುವುದು. ಅಂಚೆ ಮತಗಳ ಎಣಿಕೆ ಕಾರ್ಯ ಬೆಳಗ್ಗೆ 8ರಿಂದ ಆರಂಭವಾಗಲಿದೆ. ಆಗ ಎಲ್ಲ ಎಂಟೂ ಕ್ಷೇತ್ರಗಳ ಮತ ಎಣಿಕಾ ಕಾರ್ಯ ಆರಂಭವಾಗಲಿದೆ. ಪ್ರತಿ ಸುತ್ತಿನ ಫಲಿತಾಂಶವು ಸುವಿಧಾ ಎನ್ನುವ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ. ಸಾರ್ವಜನಿಕವಾಗಿ ಮೈಕ್ ಮೂಲಕ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು. ಜೊತೆಗೆ ಎಲ್ಇಡಿ ಪರದೆ ಮೂಲಕ ಪ್ರದರ್ಶನ ಮಾಡಲಾಗುವುದು ಎಂದರು.
5 ವಿವಿಪ್ಯಾಟ್ ಮತ ಎಣಿಕೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರತಿ ವಿಧಾನಸಭಾ ಮತ ಕ್ಷೇತ್ರದ ಮತ ಎಣಿಕೆ ಮುಕ್ತಾಯದ ಬಳಿಕ ಆ ಕ್ಷೇತ್ರದಲ್ಲಿನ 5 ವಿವಿಪ್ಯಾಟ್‌ಗಳಲ್ಲಿನ ಚೀಟಿಗಳ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಇದನ್ನು ಲಾಟರಿ ಮೂಲಕ ಆಯ್ಕೆ ಮಾಡಿ ಅನುಕ್ರಮವಾಗಿ ವಿವಿ ಪ್ಯಾಟ್‌ಗಳಲ್ಲಿನ ಚೀಟಿ ಎಣಿಕೆ ಮಾಡಲಾಗುವುದು. ವಿವಿ ಪ್ಯಾಟ್‌ನ ಮತ ಎಣಿಕೆ ಮುಕ್ತಾಯದ ನಂತರವಷ್ಟೇ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದರು.
ಮೊದಲು ಅಂಚೆ ಮತ ಎಣಿಕೆ: ಈ ವರೆಗೂ 2562 ಮತಗಳು ಜಿಲ್ಲಾಡಳಿತಕ್ಕೆ ತಲುಪಿದ್ದು, ಮೇ. 22ರ ವರೆಗೂ ಅಂಚೆ ಮತಗಳನ್ನು ಸ್ವೀಕಾರ ಮಾಡಲಾಗುವುದು. ಆ ನಂತರ ಅಂಚೆ ಮತಗಳನ್ನು ಸ್ವೀಕಾರ ಮಾಡಲ್ಲ. ಅಲ್ಲದೇ, ಮೊದಲು ಅಂಚೆ ಮತಗಳನ್ನು ಎಣಿಕೆ ಮಾಡಲಾಗುವುದು. ಬಳಿಕ ಇವಿಎಂ ಯಂತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದರು.
ಮೆರವಣಿಗೆ ಮಾಡುವಂತಿಲ್ಲ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತ ಕೇಂದ್ರದ ಹೊರಗೆ ಸೇರಿದಂತೆ ಜಿಲ್ಲೆ ಎಲ್ಲೂ ಮೆರವಣಿಗೆ ಮಾಡುವಂತಿಲ್ಲ. ಅಭ್ಯರ್ಥಿಗಳು ಗೆದ್ದರೂ ನಿಯಮ ಉಲ್ಲಂಘಿಸುವಂತಿಲ್ಲ. ಈ ಬಗ್ಗೆ ಪಕ್ಷಗಳ ಅಭ್ಯರ್ಥಿಗಳ ಕರೆದು ಸಭೆ ಮಾತನಾಡಲಾಗುವುದು ಎಂದರು.
ಎಸ್‌ಪಿ ರೇಣುಕಾ ಸುಕುಮಾರ ಮಾತನಾಡಿ, ಮತ ಎಣಿಕೆಯ ದಿನದಂದು ಎಣಿಕಾ ಕೇಂದ್ರ ಸೇರಿ ಜಿಲ್ಲಾದ್ಯಂತ ವಿವಿಧ ಬಿಗಿ ಬಂದೋಬಸ್ತ್ ಒದಗಿಸಲಾಗುವುದು. ಎಸ್‌ಪಿ, 2 ಡಿಎಸ್‌ಪಿ, 500 ಗೃಹರಕ್ಷಕ ದಳ, 12 ಕೆಎಸ್‌ಆರ್‌ಪಿ, ಡಿಆರ್ 3, ಸಿಐಎಸ್‌ಎಫ್ ಸೇರಿ 2 ಸಾವಿರ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮತ ಎಣಿಕಾ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಬಿಟ್ಟರೆ ಮತ್ತ್ತ್ಯಾರು ಮೊಬೈಲ್ ಬಳಕೆ ಮಾಡುವಂತ್ತಿಲ್ಲ. ಕಾನೂನು ಸುವ್ಯವಸ್ಥೆಗೆ ಎಲ್ಲರೂ ಸಹಕಾರ ನೀಡಬೇಕೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.