ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

ಮತದಾನೋತ್ತರ ಸಮೀಕ್ಷೆ ನಂತರ ಬೆಟ್ಟಿಂಗ್‌ ಜೋರು•ಜಿಗಜಿಣಗಿ ಗೆಲ್ಲುವ ಕುದುರೆ•ತಾಂಡಾಗಳಲ್ಲಿ ಸುನೀತಾ ಮೇಲೆ ಹೂಡಿಕೆ

Team Udayavani, May 22, 2019, 11:11 AM IST

Udayavani Kannada Newspaper

ವಿಜಯಪುರ: ಲೋಕಸಭೆ ಚುನಾವಣೆಗೆ ಕೊನೆ ಹಂತದ ಮತದಾನ ಮುಗಿಯುತ್ತಲೇ ವಿವಿಧ ಸುದ್ದಿ ಸಂಸ್ಥೆಗಳು ನಡೆಸಿರುವ ಮತದಾನೋತ್ತರ ಸಮೀಕ್ಷೆ ಹೊರ ಬೀಳುತ್ತಲೇ ವಿಜಯಪುರ ಕ್ಷೇತ್ರದಲ್ಲೂ ರಾಜಕೀಯ ಚಟುವಟಿಕೆ ಮತ್ತೆ ಜೋರಾಗಿದೆ. ಮತ ಎಣಿಕೆಗೆ ಒಂದೆಡೆ ಕ್ಷಣಗಣನೆ ಆರಂಭಗೊಂಡಿದ್ದು ಬೆಟ್ಟಿಂಗ್‌ ಕೂಡ ಜೋರಾಗಿದೆ.

ಪರಿಶಿಷ್ಟ ಜಾತಿಗೆ ಮೀಸಲಾಗಿರುವ ವಿಜಯಪುರ ಲೋಕಸಭೆ ಕ್ಷೇತ್ರ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರು ಸ್ಪರ್ಧಿಸಿರುವ ಕಾರಣ ರಾಜ್ಯ ಮಾತ್ರವಲ್ಲ ದೇಶದ ಗಮನ ಸೆಳೆದಿದೆ. ಲೋಕಸಭೆಯ ಕಳೆದ ನಾಲ್ಕು ಚುನಾವಣೆಯಲ್ಲಿ ಬಿಜೆಪಿ ನಿರಂತರ ಗೆದ್ದು, ಭದ್ರಕೋಟೆ ಎನಿಸಿರುವ ವಿಜಯಪುರ ಕ್ಷೇತ್ರದಲ್ಲಿ 2009ರಲ್ಲಿ ಕ್ಷೇತ್ರ ಮರುವಿಂಗಡಣೆಯ ಬಳಿಕ ಪರಿಶಿಷ್ಟ ಜಾತಿಮೆ ಮೀಸಲಾಗಿದೆ. ಅಲ್ಲಿಂದ ಈವರೆಗೆ ಸತತ ಎರಡು ಬಾರಿ ಗೆದ್ದು, ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರೂ ಆಗಿರುವ ರಮೇಶ ಜಿಗಜಿಣಗಿ ಹ್ಯಾಟ್ರಿಕ್‌ ಸಾಧನೆಗಾಗಿ ಮೂರನೇ ಬಾರಿಗೆ ಸ್ಪರ್ಧೆಗೆ ಇಳಿದಿದ್ದಾರೆ.

ಇನ್ನು ಇವರ ನೇರ ಸ್ಪರ್ಧಿಯಾಗಿ ಕಣಕ್ಕಿಳಿದಿರುವುದು ಮೈತ್ರಿ ಪಕ್ಷಗಳ ಕಾಂಗ್ರೆಸ್‌ ಬೆಂಬಲಿ ಜೆಡಿಎಸ್‌ ಅಭ್ಯರ್ಥಿ ಡಾ| ಸುನೀತಾ ಚವ್ಹಾಣ. ಸುನೀತಾ ಚವ್ಹಾಣ ಅವರು ನಾಗಠಾಣ ಜೆಡಿಎಸ್‌ ಶಾಸಕರೂ ಆಗಿರುವ ಶಿಕ್ಷಣ ಇಲಾಖೆಯ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ದೇವಾನಂದ ಚವ್ಹಾಣ ಅವರ ಪತ್ನಿ ಎಂಬುದು ಗಮನೀಯ.

ಮೋದಿ ಮಂತ್ರಿ ಮಂಡಲದ ಸದಸ್ಯ ರಮೇಶ ಜಿಗಜಿಣಗಿ ಹಾಗೂ ಶಾಸಕ ದೇವಾನಂದ ಚವ್ಹಾಣ ಪತ್ನಿ ಡಾ| ಸುನೀತಾ ಚವ್ಹಾಣ ಅವರ ಸ್ಪರ್ಧೆಯಿಂದ ಕ್ಷೇತ್ರದಲ್ಲಿ ರಾಜಕೀಯವಾಗಿ ಹೆಚ್ಚಿನ ಚರ್ಚೆ ನಡೆಯುತ್ತಿವೆ. ನಾಲ್ಕು ದಶಕಗಳ ರಾಜಕೀಯ ಅನುಭವಿ ಜಿಗಜಿಣಗಿ ಹಾಗೂ ಇದೇ ಮೊದಲ ಬಾರಿ ಚುನಾವಣೆ ಕಣಕ್ಕೆ ಇಳಿದಿರುವ ಡಾ| ಸುನಿತಾ ಚವ್ಹಾಣ ಇಬ್ಬರ ರಾಜಕೀಯ ಇತಿಹಾಸ ವಿಭಿನ್ನವಾಗಿದೆ. ಹೀಗಾಗಿ ಯಾರು ಹಿತವರು ಕಣದಲ್ಲಿದ್ದ 12 ಜನರೊಳಗೆ ಎಂಬ ಕುತೂಹಲ ಕ್ಷೇತ್ರದಾದ್ಯಂತ ಮೂಡಿದೆ.

ಏಪ್ರಿಲ್ 23ರಂದು ಮತದಾನ ನಡೆದ ಬಳಿಕ ಸರಿಯಾಗಿ ಒಂದು ತಿಂಗಳು ಆಂದರೆ ಮೇ 23ರಂದು ನಡೆಯುತ್ತಿರುವ ಮತ ಎಣಿಕೆ ದಿನ ಹತ್ತಿರ ಬರುತ್ತಿದ್ದಂತೆ ಸ್ಪರ್ಧಿಗಳ ಎದೆ ಬಡಿತ ಹೆಚ್ಚುವಂತೆ ಮಾಡಿದೆ. ಮತ ಎಣಿಕೆಗೆ ಕ್ಷಣಗಣನೆ ಆರಂಭಗೊಂಡಿರುವಂತೆ ತಿಂಗಳಿಂದ ಅಲ್ಲಿಲ್ಲಿ ಕಂಡು ಬರುತ್ತಿದ್ದ ಚರ್ಚೆ, ಬೆಟ್ಟಿಂಗ್‌ ಮತದಾನೋತ್ತರ ಸಮೀಕ್ಷೆ ಬಳಿಕ ಮೂರು ದಿನಗಳಿಂದ ಮತ್ತೆ ವೇಗ ಪಡೆದಿದೆ.

ಮತದಾನೋತ್ತರ ಸಮೀಕ್ಷೆ ಬಳಿಕ ಬಿಜೆಪಿ ಗೆಲುವು ನಿಶ್ಚಿತ ಎನ್ನುತ್ತಲೇ ರಮೇಶ ಜಿಗಜಿಣಗಿ ಗೆಲ್ಲುತ್ತಾರೆ ಎಂದು ಬಾಜಿ ಕಟ್ಟುವವರ ಸಂಖ್ಯೆ ಹೆಚ್ಚಾಗಿದೆ. ಮತ್ತೂಂದೆಡೆ ಬಂಜಾರಾ ತಾಂಡಾಗಳಲ್ಲಿ ಡಾ| ಸುನೀತಾ ಚವ್ಹಾಣ ಪರ ಹೆಚ್ಚಿನ ಬೆಟ್ಟಿಂಗ್‌ ನಡೆಯುತ್ತಿದೆ. ಸುನೀತಾ ಚವ್ಹಾಣ ಅವರು ಬಂಜರಾ ಸಮುದಾಯಕ್ಕೆ ಸೇರಿರುವ ಕಾರಣ ಸಹಜವಾಗಿ ಸುನೀತಾ ಪರ ಹೆಚ್ಚಿನ ಬೆಟ್ಟಿಂಗ್‌ ನಡೆಯುತ್ತಿದೆ.

ಬಸ್‌, ರೈಲು, ಆಟೋ ಪ್ರಯಾಣ, ಹೊಟೇಲ್, ತಂಪು ಪಾನೀಯ ಆಂಗಡಿ, ಕಬ್ಬಿನ ಹಾಲಿನ ಅಂಗಡಿ, ಬಟ್ಟೆ ಅಂಗಡಿ, ತರಕಾರಿ ಮಾರುಕಟ್ಟೆ ಹೀಗೆ ಎಲ್ಲೆಂದರಲ್ಲಿ ನಡೆಯುತ್ತಿದ್ದ ಚರ್ಚೆ ಈಗ ಹೆಚ್ಚಿನ ಸ್ವರೂಪದಲ್ಲಿ ಕಂಡು ಬರುತ್ತಿದೆ. ಚರ್ಚೆ ಹಂತದಲ್ಲಿ ಪರಸ್ಪರರು ತಮ್ಮದೇ ಅಂದಾಜಿನಲ್ಲಿ ವಿಶ್ಲೇಷಣೆ ಮಾಡುತ್ತ ಗೆಲ್ಲುವುದು ತಮ್ಮದೇ ಅಭ್ಯರ್ಥಿ ಎಂಬಂತೆ ಬಾಜಿ ಕಟ್ಟುತ್ತಿದ್ದಾರೆ. ಲಭ್ಯ ಮಾಹಿತಿ ಪ್ರಕಾರ ಹಣ ಮಾತ್ರವಲ್ಲ ಚಿನ್ನ, ಬೈಕ್‌, ಕಾರು ಸೇರಿದಂತೆ ಹಲವು ವಸ್ತುಗಳನ್ನು ಬಾಜಿ ಕಟ್ಟುತ್ತಿರುವುದು ಸಾಮಾನ್ಯವಾಗಿದೆ.

ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹಾಗೂ ಪಿಎಚ್‌ಡಿ ಪದವೀಧರೆ ಡಾ| ಸುನೀತಾ ಚವ್ಹಾಣ ಅವರ ಮಧ್ಯೆ ನೇರ ಸ್ಪರ್ಧೆ ಎದುರಾಗಿತ್ತು. ಇವರ ಹೊರತಾಗಿ ಬಿಎಸ್ಪಿ ಅಭ್ಯರ್ಥಿಯಾಗಿ ಯುವ ವಕೀಲ ಶ್ರೀನಾಥ ಪೂಜಾರಿ, ಉತ್ತಮ ಪ್ರಜಾಕೀಯ ಪಕ್ಷದ ಗುರುಬಸವ ರಬಕವಿ, ರಾಜಕೀಯ ಸುಧಾರಣೆಗಾಗಿ ಹಲವು ಚುನವಣೆ ಸ್ಪರ್ಧಿಸಿರುವ ದೀಪಕ ಕಟಕದೊಂಡ ಈ ಬಾರಿ ಹಿಂದೂಸ್ಥಾನ ಜನತಾ ಪಾರ್ಟಿಯಿಂದ ಸ್ಪರ್ಧೆಗೆ ಇಳಿದಿದ್ದಾರೆ.

ಕಣದಲ್ಲಿರುವ ಸ್ಪರ್ಧಿಗಳು
ರಮೇಶ ಜಿಗಜಿಣಗಿ (ಬಿಜೆಪಿ), ಶ್ರೀನಾಥ ಪೂಜಾರಿ (ಬಿಎಸ್ಪಿ), ಡಾ| ಸುನೀತಾ ದೇವಾನಂದ ಚವ್ಹಾಣ (ಜೆಡಿಎಸ್‌), ಗುರುಬಸವ ಪರಮೇಶ್ವರ ರಬಕವಿ (ಉತ್ತಮ ಪ್ರಜಾಕೀಯ ಪಕ್ಷ), ದೀಪಕ ಗಂಗಾರಾಮ ಕಟಕದೊಂಡ ಉರ್ಫ್‌ ವೆಂಕಟೇಶ್ವರ ಮಹಾಸ್ವಾಮೀಜಿ (ಹಿಂದೂಸ್ಥಾನ ಜನತಾ ಪಾರ್ಟಿ), ಯಮನಪ್ಪ ವಿಠuಲ ಗುಣದಾಳ (ಆರ್‌ಪಿಐ), ರುದ್ರಪ್ಪ ದಯಪ್ಪ ಚಲವಾದಿ (ಭಾರಿಪ ಬಹುಜನ ಮಹಾಸಂಘ), ದಾದಾಸಾಹೇಬ ಸಿದ್ದಪ್ಪ ಬಾಗಾಯತ್‌ (ಪಕ್ಷೇತರ), ದೋಂಡಿಬಾ ರಾಮು ರಾಠೊಡ (ಪಕ್ಷೇತರ), ಧರೆಪ್ಪ ಮಹಾದೇವ ಅರ್ಧವರ (ಪಕ್ಷೇತರ), ಬಾಲಾಜಿ ದ್ಯಾಮಣ್ಣ ವಡ್ಡರ (ಪಕ್ಷೇತರ), ರಾಮಪ್ಪ ಹರಿಜನ ಉರ್ಫ್‌ ಹೊಲೇರ (ಪಕ್ಷೇತರ).

ಸೈನಿಕ ಶಾಲೆಯಲ್ಲಿ ಮತಎಣಿಕೆ
ಮೇ 23ರಂದು ನಗರದಲ್ಲಿರುವ ವಿಜಯಪುರ ಸೈನಿಕ ಶಾಲೆ ಕಟ್ಟಡಗಳಲ್ಲಿ ಮತ ಎಣಿಕೆ ನಡೆಯಲಿದೆ. ಆಂದು ಬೆಳಗ್ಗೆ 7ಕ್ಕೆ ಭದ್ರತಾ ಕೋಣೆಗಳಲ್ಲಿ ಇರಿಸಿರುವ ಮತಯಂತ್ರಗಳನ್ನು ಹೊರ ತೆಗೆಯಲಾಗುತ್ತದೆ. ಬೆಳಗ್ಗೆ 8ಕ್ಕೆ ಮತ ಎಣಿಕೆ ಆರಂಭಗೊಳ್ಳಲಿದೆ. ಚುನಾವಣೆ ಮತ ಎಣಿಕೆ ವೀಕ್ಷಕರು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಈ ಕ್ಷೇತ್ರದ 8 ವಿಧಾನಸಭೆ ಕ್ಷೇತ್ರಗಳ ಸಹಾಯಕ ಚುನಾವಣಾ ಅಧಿಕಾರಿಗಳ ನೇತೃತ್ವದ ತಂಡ ಮತ ಎಣಿಕೆ ಮಾಡಲಿದೆ. ಮತ ಎಣಿಕೆಗೆ ನಗರದಲ್ಲಿರುವ ವಿಜಯಪುರ ಸ್ಯೆನಿಕ ಶಾಲೆಯ 3 ಕಟ್ಟಡಗಳಲ್ಲಿ ವಿಜಯಪುರ ಕ್ಷೇತ್ರದ 8 ವಿಧಾನಸಭೆಗಳ ಮತ ಎಣಿಕೆ ನಡೆಯಲಿದೆ. ರಾಷ್ಟ್ರಕೂಟ ಕಟ್ಟಡದಲ್ಲಿ ಮುದ್ದೇಬಿಹಾಳ, ದೇವರಹಿಪ್ಪರಗಿ ಹಾಗೂ ಸಿಂದಗಿ ವಿಧಾನಸಭೆ ವ್ಯಾಪ್ತಿಯ ಮತ ಎಣಿಕೆ ನಡೆಯಲಿದೆ. ಹೊಯ್ಸಳ ಕಟ್ಟಡದಲ್ಲಿ ಬಸವನಬಾಗೇವಾಡಿ, ಬಬಲೇಶ್ವರ ಹಾಗೂ ವಿಜಯಪುರ ನಗರ ಕ್ಷೇತ್ರ ವ್ಯಾಪ್ತಿಯ ಮತ ಎಣಿಕೆ ನಡೆಯಲಿದೆ. ವಿಜಯನಗರ ಕಟ್ಟಡದಲ್ಲಿ ನಾಗಠಾಣ ಹಾಗೂ ಇಂಡಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಮತ ಎಣಿಕೆ ನಡೆಯಲಿದೆ.

•ಜಿ.ಎಸ್‌. ಕಮತರ

ಟಾಪ್ ನ್ಯೂಸ್

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.