ಯಶಸ್ಸು ಗಳಿಸಬೇಕಾದ್ರೆ ಪರಿಶ್ರಮ ಅಗತ್ಯ: ಪ್ರೊ| ಜಯದೇವ
ಗ್ರಾಮೀಣ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ಗರಿಷ್ಠ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ
Team Udayavani, May 22, 2019, 4:22 PM IST
ಚಿಕ್ಕಮಗಳೂರು: ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳನ್ನು ಕಸಾಪ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಚಿಕ್ಕಮಗಳೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಗಳಿಸಬೇಕಾದರೆ ಶ್ರದ್ಧೆ, ಪರಿಶ್ರಮ, ಸತತ ಪ್ರಯತ್ನ, ನಿರಂತರ ಕಲಿಕೆ ಅಗತ್ಯವಾಗಿದೆ ಎಂದು ಎಐಟಿ ಪ್ರಾಂಶುಪಾಲ ಪ್ರೊ| ಸಿ.ಟಿ.ಜಯದೇವ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಸುವರ್ಣ ಕನ್ನಡ ಭವನದಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ಕನ್ನಡ ಮಾಧ್ಯಮದಲ್ಲಿ ಗರಿಷ್ಠ ಸಾಧನೆ ಮಾಡಿರುವ ಸಾಧಕರನ್ನು ಪುರಸ್ಕರಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ಗರಿಷ್ಠ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್, ಮಕ್ಕಳನ್ನು ಕನ್ನಡ ಕಲಿಕೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನಡೆದ ಮನ್ನಾನ್ ಸಿದ್ದಿಕ್ ಹುಸೇನ್, ಜೈಬುನ್ನೀಸಾ ಹಾಗೂ ದಿ| ಕಾಳಮ್ಮ ಡಿ.ಎ.ರಾಮೇಗೌಡ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಗ್ರಾಮೀಣ ಮಕ್ಕಳ ಶೈಕ್ಷಣಿಕ ಸವಾಲುಗಳು ಮತ್ತು ಪರಿಹಾರ’ ವಿಷಯ ಕುರಿತು ಎಂಎಲ್ಎಂಎನ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ವಿಜಯಲಕ್ಷ್ಮೀ ದೇಸಾಯಿ, ‘ನೈತಿಕ ಮೌಲ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ’ ಕುರಿತು ಶಿಕ್ಷಕ ವಿರೂಪಾಕ್ಷಪ್ಪ ಅಣ್ಣೀಗೆರೆ ಉಪನ್ಯಾಸ ನೀಡಿದರು.
ಈ ವೇಳೆ ಕಡೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಯಳ್ಳಂಬಳಸೆ ಗ್ರಾಮದ ವಿದ್ಯಾರ್ಥಿನಿ ವೈ.ಪಿ.ಕಾವ್ಯ ಕನ್ನಡ ಮಾಧ್ಯಮದಲ್ಲಿ 577 ಅಂಕಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದರೆ, ಎಸ್ಸೆಸ್ಸೆಲ್ಸಿ ಕನ್ನಡ ಮಾಧ್ಯಮದಲ್ಲಿ ಕಳಸ ಪ್ರಬೋಧಿನಿ ಪ್ರೌಢಶಾಲೆಯ ವಿದ್ಯಾರ್ಥಿ ವಿ.ಆರ್.ವಿಘ್ನೕಶ 607 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.
ಎಸ್ಸೆಸ್ಸೆಲ್ಸಿ ಕನ್ನಡ ಮಾಧ್ಯಮದಲ್ಲಿ ಎನ್.ಆರ್.ಪುರ ತಾಲೂಕು ಮುತ್ತಿನಕೊಪ್ಪ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಆಫ್ರಿದ್ ಸಫಾ 579, ಕಡೂರು ತಾಲೂಕು ವಡೇರಹಳ್ಳಿ ಮೃತ್ಯುಂಜಯ ಪ್ರೌಢಶಾಲೆಯ ವಿದ್ಯಾರ್ಥಿ ಜಿ.ಎನ್.ರುಚಿತ 589, ಶೃಂಗೇರಿಯ ಜಗದ್ಗುರು ಅಭಿನವ ವಿದ್ಯಾತೀರ್ಥ ಪ್ರೌಢಶಾಲೆಯ ಕೆ.ಎನ್.ವಿಶ್ವಾಸ್ 574, ಕೊಪ್ಪ ತಾಲೂಕು ಬೊಮ್ಲಾಪುರ ಸರ್ಕಾರಿ ಪ್ರೌಢಶಾಲೆಯ ಕೆ.ಆರ್.ಧನಂಜಯ 596, ಜೋಡಿಹೋಚಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಎಚ್.ಕೆ.ನಾಗಲಕ್ಷ್ಮೀ 603, ಚಿಕ್ಕಮಗಳೂರು ತಾಲೂಕು ತೊಗರಿಹಂಕಲ್ ಸರ್ಕಾರಿ ಪ್ರೌಢಶಾಲೆಯ ಎನ್.ಅಂಕಿತ 583, ತರೀಕೆರೆ ತಾಲೂಕು ಹಿರೇಕಾನವಂಗಲ ರುದ್ರೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಪಿ.ಲಾಂಚನ 574 ಅಂಕ ಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ತಾಲೂಕು ಕಸಾಪ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ, ಜಿಲ್ಲಾ ಸಂಚಾಲಕ ಎಂ.ಆರ್.ಪ್ರಕಾಶ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಓಂಕಾರಪ್ಪ, ಖಜಾಂಚಿ ಚಂದ್ರೇಗೌಡ ಇನ್ನಿತರರಿದ್ದರು.
ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಿ.ಎಂ.ಮಂಜುನಾಥಸ್ವಾಮಿ ಕಾರ್ಯಕ್ರಮವನ್ನು ನಿರೂಪಿಸಿದರು, ಖಜಾಂಚಿ ಪ್ರೊ|ಕೆ.ಎನ್.ಲಕ್ಷ್ಮೀಕಾಂತ್ ಸ್ವಾಗತಿಸಿದರು. ಜಾಗರ ಹೋಬಳಿ ಅಧ್ಯಕ್ಷ ಕಳವಾಸೆ ರವಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.