ಗೋಣಿ ಚೀಲಗಳಲ್ಲಿ ಮರಳು ಸಾಗಾಟ: ಪರಿಶೀಲನೆ
ನೇತ್ರಾವತಿ ನದಿ ಕಿನಾರೆಯಲ್ಲಿ ಗೋಣಿ ಚೀಲಗಳಲ್ಲಿ ತುಂಬಿಟ್ಟಿದ್ದ ಮರಳು.
Team Udayavani, May 23, 2019, 6:00 AM IST
ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟ ದಂಧೆಗೆ ಕಡಿವಾಣ ಹಾಕುವಲ್ಲಿ ಪುತ್ತೂರು ತಾಲೂಕು ದಂಡಾಧಿಕಾರಿ ಡಾ| ಪ್ರದೀಪ್ ಕುಮಾರ್ ಬುಧವಾರ ಸ್ಥಳ ಪರಿಶೀಲನೆ ನಡೆಸಿದರು. ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿ ನೇತ್ರಾವತಿ ನದಿ ಕಿನಾರೆಯಲ್ಲಿ ಗೋಣಿ ಚೀಲಗಳಲ್ಲಿ ಮರಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಕುರಿತಾಗಿ “ಉದಯವಾಣಿ’ ಸುದಿನ ಇತ್ತೀಚೆಗೆ ವರದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ತಾಲೂಕು ದಂಡಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಪರಿಶೀಲನೆ ವೇಳೆ, ಬೆಳ್ತಂಗಡಿ ತಾಲೂಕಿನ ಗಡಿ ಗ್ರಾಮವಾದ ಮೊಗ್ರು ವ್ಯಾಪ್ತಿಯಲ್ಲಿ ಈ ದಂಧೆ ಅವ್ಯಾಹತವಾಗಿ ನಡೆದಿರುವುದು ಅವರ ಗಮನಕ್ಕೆ ಬಂತು. ಪರವಾನಿಗೆ ರಹಿತವಾಗಿ ಮರಳು ಸಾಗಾಟ ದಂಧೆ ನಡೆಸಿದರೆ ಕಠಿನ ಕ್ರಮ ಜರಗಿಸಲು ಹಿಂದೇಟು ಹಾಕುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ. ಕಂದಾಯ ನಿರೀಕ್ಷಕ ಜಯವಿಕ್ರಮ್, ಗ್ರಾಮ ಕರಣಿಕರಾದ ಸುನೀಲ್ ವಿಟ್ಲ ಅವರು ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.