ಭದ್ರತೆಗೆ 534 ಸಿಬಂದಿ: ಎಸ್ಪಿ ನಿಶಾ
Team Udayavani, May 23, 2019, 6:16 AM IST
ಉಡುಪಿ: ಮತ ಎಣಿಕೆ ಭದ್ರತೆಗಾಗಿ ಕೇಂದ್ರದ ಒಳಗೆ ಮತ್ತು ಹೊರಗೆ 1 ಸಿಆರ್‌ಪಿಎಫ್, 3 ಕೆಎಸ್‌ಆರ್‌ಪಿ ತುಕಡಿ, 30 ಹೋಂ ಗಾರ್ಡ್ಸ್,335 ಪೊಲೀಸ್ ಸೇರಿದಂತೆ ಒಟ್ಟು 534 ಸಿಬಂದಿ ನಿಯೋಜಿಸಲಾಗಿದೆ. ಭದ್ರತಾ ದೃಷ್ಟಿಯಿಂದ 130ಕ್ಕೂ ಹೆಚ್ಚು ಸಿಸಿ ಕೆಮರಾ ಅಳವಡಿಸಲಾಗಿದೆ ಎಂದು ಉಡುಪಿ ಎಸ್‌ಪಿ ನಿಶಾ ಜೇಮ್ಸ್ ಹೇಳಿದ್ದಾರೆ.
ಅವರು ಬುಧವಾರ ಸೈಂಟ್ ಸಿಸಿಲಿ ಶಿಕ್ಷಣ ಸಂಸ್ಥೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬಂದಿಗೆ ಮತ ಎಣಿಕೆ ದಿನ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಮಾಹಿತಿ ನೀಡಿ ಮಾತನಾಡಿದರು.
ಮತ ಎಣಿಕೆ ಕೇಂದ್ರದೊಳಗೆ ಆಗಮಿಸುವವರನ್ನು ಸೂಕ್ತ ತನಿಖೆ ನಡೆಸಿ, ಅಧಿಕೃತ ಗುರುತಿನ ಚೀಟಿ ಹೊಂದಿದವರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಮತದಾನ ಕೇಂದ್ರದೊಳಗೆ ಮೊಬೈಲ್ ನಿಷೇಧಿಸಲಾಗಿದ್ದು, ಮೊಬೈಲ್ಗಳನ್ನು ತರದಂತೆ ಎಚ್ಚರವಹಿಸಿ ಎಂದು ಮತ ಎಣಿಕೆ ಕೇಂದ್ರದ ಕರ್ತವ್ಯಕ್ಕೆ ನಿಯೋಜಿಸಿರುವ ಪೊಲೀಸ್ ಅಧಿಕಾರಿಗಳಿಗೆ ಎಸ್ಪಿ ಸೂಚಿಸಿದರು.
ಮತ ಎಣಿಕೆ ಕೇಂದ್ರದೊಳಗೆ ಪ್ರವೇಶಿಸಲು ಈಗಾಗಲೇ ನೀಡಲಾಗಿರುವ ವಿವಿಧ ರೀತಿಯ ಪಾಸ್‌ಗಳ ಕುರಿತು ಮಾಹಿತಿ ನೀಡಿದ ಅವರು, ಮಾಧ್ಯಮದವರಿಗೆ ಮಾತ್ರ ಮಾಧ್ಯಮ ಕೇಂದ್ರದೊಳಗೆ ಮೊಬೈಲ್ ಬಳಕೆಗೆ ಅವಕಾಶ ಇದೆ. ಉಳಿದಂತೆ ಯಾರಿಗೂ ಅವಕಾಶವಿಲ್ಲ. ಎಲ್ಲ ಪೊಲೀಸ್ ಅಧಿಕಾರಿ ಮತ್ತು ಸಿಬಂದಿ ತಮಗೆ ನಿಯೋಜಿಸಿರುವ ಸ್ಥಳದಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಮತ್ತು ಈಗಾಗಲೇ ಸೂಚಿಸಿರುವಂತೆ ಮತ ಎಣಿಕೆ ಕೇಂದ್ರದ ಹೊರಗೆ ಸಂಚಾರ ವ್ಯವಸ್ಥೆ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಸಮರ್ಪಕ ರೀತಿಯಲ್ಲಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ ಪ್ರದೇಶದಲ್ಲಿ ಸೂಕ್ತ ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಸ್ಪತ್ರೆಯ ಮುಂಭಾಗದಿಂದ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ಕಲ್ಪಿಸಲಾಗಿದೆ ಎಂದರು.
ಪಶ್ಚಿಮ ವಲಯ ಐಜಿಪಿ ಭೇಟಿ
ಸೈಂಟ್ ಸಿಸಿಲಿಯ ಮತಎಣಿಕೆ ಕೇಂದ್ರಕ್ಕೆ ಬುಧವಾರ ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಎಎಸ್ಪಿ ಕೃಷ್ಣಕಾಂತ್, ಕುಮಾರಚಂದ್ರ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.