ಕಾರ್ಮಿಕರಿಗೆ ಸಾರಿಗೆ ಸೌಲಭ್ಯ ಕಲ್ಪಿಸಿ

ಖಾಸಗಿ ವಾಹನಗಳ ಸುಸ್ಥಿತಿ ಬಗ್ಗೆ ಗಮನ ಹರಿಸಿ: ಸಾರಿಗೆ ಅಧಿಕಾರಿಗಳಿಗೆ ಕಾರ್ಮಿಕರ ಆಗ್ರಹ

Team Udayavani, May 23, 2019, 8:14 AM IST

br-tdy-1..

ದೊಡ್ಡಬಳ್ಳಾಪುರದ ಸರಕು ಸಾಗಾಣಿಕೆ ವಾಹನದಲ್ಲಿ ತೆರಳುತ್ತಿರುವ ಕಾರ್ಮಿಕರು.

ದೊಡ್ಡಬಳ್ಳಾಪುರ: ಇತ್ತೀಚೆಗಷ್ಟೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸರಕು ಸಾಗಾಣಿಕೆ ವಾಹನ ಗಳು ಹಾಗೂ ಸುಸ್ಥಿತಿಯಲ್ಲಿಲ್ಲದ ವಾಹನ ಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವು ದನ್ನು ತಡೆಯಲು ಸಾರ್ವಜನಿಕರಿಗೆ ಜಾಗೃತಿ ಜಾಥಾ ನಡೆಸಿರುವುದು ಶ್ಲಾಘನೀಯ. ಆದರೆ, ವಿವಿಧ ಕಾರ್ಖಾನೆಗಳಿಗೆ ತೆರಳುವ ಸಹಸ್ರಾರು ಕಾರ್ಮಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ನೀಡಲು ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕರು ಒತ್ತಾಯಿಸಿದ್ದಾರೆ.

ಸಮಯ ಪಾಲನೆ ಧಾವಂತ: ನಗರದ ಹೊರವಲಯದ ಕೈಗಾರಿಕಾ ಪ್ರದೇಶಕ್ಕೆ ಬೆಳಗ್ಗೆ 8 ಗಂಟೆಗೆ ಹಿಂದೂಪುರ ಪ್ಯಾಸೆಂಜರ್‌ ರೈಲಿ ನಲ್ಲಿ ಬರುವ ಸಾವಿರಾರು ಜನ ಕಾರ್ಮಿಕರು ಗಾರ್ಮೆಂಟ್ಸ್ ಸೇರಿದಂತೆ ಇತರೆ ಕಾರ್ಖಾನೆ ಗಳಿಗೆ ತಲುಪಲು ಸರಕು ಸಾಗಾಣಿಕೆ ವಾಹನ ಗಳನ್ನು ಅವಲಂಬಿಸಿರುತ್ತಾರೆ. ಸಾಮಾನ್ಯ ಕಾರ್ಮಿಕರಾದ ಅವರ ಗುರಿ ಸಮಯ ಪಾಲನೆ ಮಾತ್ರವಾಗಿರುತ್ತದೆ. ಸಮಯಕ್ಕೆ ಸರಿ ಯಾಗಿ ಕೆಲಸಕ್ಕೆ ಹೋಗದಿದ್ದರೆ ಇಡೀ ದಿನದ ಸಂಬಳಕ್ಕೆ ಕತ್ತರಿ ಬೀಳುತ್ತದೆ. ಇಂತಹ ಅವ ಕಾಶಗಳನ್ನು ಸರಕು ಸಾಗಾಣಿಕೆ ವಾಹನಗಳ ಮಾಲಿಕರು ಉಪಯೋಗಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಹಲವಾರು ಬಾರಿ ಗಾರ್ಮೆಂಟ್ಸ್‌ ಗಳಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನಗಳು ಅಪಘಾತಗಳಿಗೆ ತುತ್ತಾಗಿ ಕಾರ್ಮಿಕರಿಗೆ ಗಾಯಗಳಾಗಿದ್ದರೂ ಯಾವುದೇ ಚಿಕಿತ್ಸೆಯಾಗಲಿ ಪರಿಹಾರವಾಗಲಿ ಸಿಕ್ಕಿಲ್ಲ ಎಂಬುದು ಕಾರ್ಮಿಕರ ಅಳಲಾಗಿದೆ.

ಬಸ್‌ ಸೌಲಭ್ಯ ಕಲ್ಪಿಸಿ: ರೈಲ್ವೆ ನಿಲ್ದಾಣ, ಡಿ.ಕ್ರಾಸ್‌ ಸೇರಿದಂತೆ ನಗರದ ವಿವಿಧ ಭಾಗ ಗಳಿಂದ ಬೆಳಗ್ಗೆ ಹಾಗೂ ಸಂಜೆ ವೇಳೆ ಕೈಗಾರಿಕಾ ಪ್ರದೇಶಕ್ಕೆ ಬಿಎಂಟಿಸಿ ಬಸ್‌ ಸೌಲಭ್ಯ ಕಲ್ಪಿಸು ವಂತೆ ಹಲವಾರು ಬಾರಿ ಮನವಿಗಳನ್ನು ಸಲ್ಲಿಸಿದ್ದರು ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಾಲೂಕಿನ ಕಾರ್ಮಿಕರು ದೂರಿದ್ದಾರೆ.

ಅವ್ಯವಸ್ಥೆಗೆ ಕಡಿವಾಣ ಹಾಕಿ: ಗಾರ್ಮೆಂಟ್‌ಗಳಿಗೆ ಗ್ರಾಮಾಂತರ ಪ್ರದೇಶಗಳಿಂದ ಈಗ ಕಾರ್ಮಿಕರನ್ನು ಕರೆತರುತ್ತಿರುವ ಖಾಸಗಿ ಬಸ್‌, ಮಿನಿ ಬಸ್‌ಗಳಿಗೆ ದಾಖಲೆ ಮೊದ ಲ್ಗೊಂಡು ಯಾವುದೇ ರೀತಿಯಲ್ಲೂ ರಸ್ತೆ ಮೇಲೆ ಚಲಿಸುವಷ್ಟು ಸುಸ್ಥಿತಿಯಲ್ಲಿಲ್ಲ. ಈ ಬಸ್‌ಗಳ ಚಾಲಕರು ಮಹಿಳಾ ಪ್ರಯಾಣಿಕ ರೊಂದಿಗೆ ನಡೆದುಕೊಳ್ಳುವ ರೀತಿಯಂತೂ ದೇವರಿಗೆ ಪ್ರೀತಿಯಾಗಬೇಕು. ಆದರೆ, ಮಹಿಳೆಯರಿಗೆ ಈ ಅವ್ಯವಸ್ಥೆಗಳನ್ನು ವಿರೋ ಧಿಸುವಷ್ಟು ಶಕ್ತಿ ಇಲ್ಲದಾಗಿದೆ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ನಿಯಮಿತವಾಗಿ ವಾಹನಗಳ ಸ್ಥಿತಿಗತಿ ತಪಾಸಣೆ ಮಾಡಿದರೆ ಈ ಅವ್ಯವಸ್ಥೆಗಳಿಗೆ ಕಡಿವಾಣ ಬೀಳಲಿದೆ. ಜಾಗೃತಿ ಜಾಥಾ ನಡೆಸಿದ್ದಕ್ಕೂ ಪ್ರತಿಫಲ ದೊರೆಯಲಿದೆ ಎನ್ನುತ್ತಾರೆ ಗಾರ್ಮೆಂಟ್ಸ್ ಉದ್ಯೋಗಿಗಳು.

ಸರಕು ಸಾಗಣೆ ವಾಹನಗಳೇ ಗತಿ: ಈಗಾಗಲೇ ಬಹುತೇಕ ಕಾರ್ಮಿಕರು ಅನಿವಾರ್ಯವಾಗಿ ಸರಕು ಸಾಗಾಣಿಕೆ ಅಥವಾ ಇತರೆ ಸುವ್ಯವಸ್ಥೆಯಿಲ್ಲದ ವಾಹನಗಳ ಮೇಲೆ ಅವಲಂಬಿತರಾಗಿದ್ದಾರೆ. ಇದನ್ನು ತಪ್ಪಿಸಲು ಪರ್ಯಾಯ ವ್ಯವಸ್ಥೆಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಬೆಳಗ್ಗೆ, ಸಂಜೆ ವೇಳೆ ರೈಲ್ವೆ ನಿಲ್ದಾಣದಿಂದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಿಂದ ವಿವಿಧೆಡೆಗಳಿಗೆ ಬಿಎಂಟಿಸಿ ಬಸ್‌ಗಳು ಸಂಚರಿ ಸುವಂತೆ ಮಾಡಬೇಕು. ಕೈಗಾರಿಕೆಗಳ ಮಾಲಿಕ ರಿಗೆ ಕಾರ್ಮಿಕರನ್ನು ಕರೆದೊಯ್ಯಲು ಸರಿ ಯಾದ ಸುಸ್ಥಿತಿಯಲ್ಲಿರುವ ವಾಹನಗಳನ್ನು ಕಡ್ಡಾಯವಾಗಿ ಒದಗಿಸುವಂತೆ ಕ್ರಮ ಕೈಗೊಳ್ಳ ಬೇಕು ಎಂದು ಒತ್ತಾಯಿಸಿದ್ದಾರೆ.

ಸುಸ್ಥಿತಿಯಲ್ಲಿರುವ ಖಾಸಗಿ ಬಸ್‌ಗಳು ರಸ್ತೆ ಮೇಲೆ ಓಡಾಡುವಂತೆ ಸಾರಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ವಿಮೆ, ವಾಹನ ಚಾಲನಾ ಪರವಾನಗಿ, ವಾಹನಗಳಿಗೆ ಸಂಬಂಧಿಸಿದ ದಾಖಲೆಗಳು ಕಡ್ಡಾಯವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಕಾರ್ಮಿಕರು ಸಂಬಂಧಪಟ್ಟ ಇಲಾಖೆಗಳನ್ನು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.