ಸೋಲು ಗೆಲುವಿನ ಲೆಕ್ಕಾಚಾರಕ್ಕಿಂದು ತೆರೆ

ಧ್ರುವನಾರಾಯಣ ಹ್ಯಾಟ್ರಿಕ್‌ ಸಾಧಿಸುವರೋ, ಶ್ರೀನಿವಾಸಪ್ರಸಾದ್‌ ಗೆಲ್ಲುತ್ತಾರೋ ಇಂದು ನಿರ್ಧಾರ

Team Udayavani, May 23, 2019, 9:00 AM IST

cb-tdy-01

ಚಾಮರಾಜನಗರ: ಚಾಮರಾಜನಗರದ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಧ್ರುವನಾರಾಯಣ ಹ್ಯಾಟ್ರಿಕ್‌ ಜಯ ಸಾಧಿಸುತ್ತಾರೋ ಅಥವಾ ಕೇಂದ್ರ ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್‌ ಆರನೇ ಬಾರಿ ಸಂಸತ್‌ಗೆ ಆಯ್ಕೆಯಾಗುವ ಮೂಲಕ ಬಿಜೆಪಿಗೆ ಮೊದಲ ಗೆಲುವು ತಂದುಕೊಡುತ್ತಾರೋ ಎಂಬ ಪ್ರಶ್ನೆಗೆ ಗುರುವಾರ ಉತ್ತರ ದೊರಕಲಿದೆ.

ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಹಾಲಿ ಸಂಸದ ಆರ್‌. ಧ್ರುವನಾರಾಯಣ ಹಾಗೂ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸಪ್ರಸಾದ್‌ ನಡುವೆ ಯಾರು ಸಂಸದರಾಗಲಿದ್ದಾರೆ ಎಂಬ ಬಹಳ ದಿನಗಳ ಪ್ರಶ್ನೆಗೆ ಉತ್ತರ ದೊರಕಲಿದೆ.

ಕೈಗೆ 11ನೇ ಗೆಲುವಿನ ನಿರೀಕ್ಷೆ: ಒಂದು ವೇಳೆ ಧ್ರುವನಾರಾಯಣ ಜಯಗಳಿಸಿದರೆ ಅದು ಅವರ ಹ್ಯಾಟ್ರಿಕ್‌ ಜಯವಾಗುವುದರ ಜೊತೆಗೆ ಕ್ಷೇತ್ರದಲ್ಲಿ ಹ್ಯಾಟ್ರಿಕ್‌ ಜಯ ಪಡೆದ ಮೂರನೇ ಸಂಸದರಾಗಲಿದ್ದಾರೆ. ಅಲ್ಲದೇ ಕಾಂಗ್ರೆಸ್‌ ಪಕ್ಷ ಮೂರನೇ ಜಯಕ್ಕೆ ಪಾತ್ರವಾಗಲಿದೆ. ಹಿಂದೆ ಕಾಂಗ್ರೆಸ್‌ನಿಂದ ಸಂಸದರಾಗಿದ್ದ ಎಸ್‌.ಎಂ. ಸಿದ್ದಯ್ಯ ಹಾಗೂ ವಿ. ಶ್ರೀನಿವಾಸಪ್ರಸಾದ್‌ ಹ್ಯಾಟ್ರಿಕ್‌ ಜಯ ಸಾಧಿಸಿದ್ದರು. ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ 10 ಬಾರಿ ಜಯಗಳಿಸಿದೆ. ಧ್ರುವನಾರಾಯಣ ಗೆದ್ದರೆ ಅದು ಕಾಂಗ್ರೆಸ್‌ನ 11ನೆಯ ಗೆಲುವಾಗಲಿದೆ.

ಏ.18ರಂದು ನಡೆದ ಚುನಾವಣೆಯಲ್ಲಿ ಶೇ.75.22 ರಷ್ಟು ಮತದಾನವಾಗಿದ್ದು, ಇದು ಪ್ರಥಮ ಚುನಾವಣೆ ಯಿಂದ ಇದುವರೆಗೆ ಕ್ಷೇತ್ರದಲ್ಲಿ ನಡೆದ ಅತಿ ಹೆಚ್ಚಿನ ದಾಖಲೆಯ ಮತದಾನವಾಗಿದೆ. ಈ ಹೆಚ್ಚಿದ ಮತ ದಾನ ಯಾವ ಅಭ್ಯರ್ಥಿಗೆ ಲಾಭ ತಂದುಕೊಡಲಿದೆ ಎಂಬುದಕ್ಕೆ ಗುರುವಾರ ಉತ್ತರ ದೊರಕಲಿದೆ.

ಬಿಜೆಪಿಗೆ ಅನುಕೂಲವೇ? ಈ ದಾಖಲೆಯ ಮತದಾನದಿಂದ ತಮ್ಮ ಪಕ್ಷಕ್ಕೇ ಹೆಚ್ಚು ಅನುಕೂಲ ಎಂದು ಬಿಜೆಪಿ ಮುಖಂಡರು ಬೀಗುತ್ತಿದ್ದಾರೆ. ಆದರೆ 2009ರಲ್ಲಿ ಶೇ. 67.90 ಮತದಾನವಾಗಿದ್ದಾಗ ಕಾಂಗ್ರೆಸ್‌ 4002 ಮತಗಳಿಂದ ಗೆದ್ದಿತ್ತು. 2014ರಲ್ಲಿ ಶೇ. 72.83ರಷ್ಟು ಮತದಾನವಾಗಿತ್ತು. ಆಗ ನಮ್ಮ ಅಭ್ಯರ್ಥಿ ಧ್ರುವನಾರಾಯಣ 1.41 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಹಾಗಾಗಿ ಹೆಚ್ಚಿನ ಮತದಾನ ನಮ್ಮ ಪಕ್ಷಕ್ಕೇ ಅನುಕೂಲಕರವಾಗಿದೆ ಎಂಬ ವಾದವನ್ನು ಕಾಂಗ್ರೆಸ್‌ ಮುಖಂಡರು ಮುಂದಿಡುತ್ತಿದ್ದಾರೆ.

ಹನೂರು, ತಿ. ನರಸೀಪುರ, ವರುಣಾ, ಹೆಗ್ಗಡದೇವನ ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಪಕ್ಷಕ್ಕೆ ಲೀಡ್‌ ಬರುತ್ತದೆ ಎಂಬುದು ಕಾಂಗ್ರೆಸ್‌ ಮುಖಂಡರ ಲೆಕ್ಕಾಚಾರ. ಹನೂರಿನಲ್ಲಿ 15 ರಿಂದ 20 ಸಾವಿರ ಲೀಡ್‌, ತಿ. ನರಸೀಪುರದಲ್ಲಿ 7-8 ಸಾವಿರ, ವರುಣಾದಲ್ಲಿ 15-20 ಸಾವಿರ, ಹೆಗ್ಗಡದೇವನಕೋಟೆ 10 ಸಾವಿರ ಲೀಡ್‌ ದೊರಕುತ್ತದೆ ಎಂದು ನುಡಿದಿದ್ದಾರೆ.

ಮತಗಣಿತ: ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ 5 ಸಾವಿರ ಲೀಡ್‌ ಬರಬಹುದು. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಎರಡೂ ಪಕ್ಷಗಳಿಗೂ ಸಮ-ಸಮ ಮತಗಳು, ನಂಜನಗೂಡು, ಗುಂಡ್ಲುಪೇಟೆಯಲ್ಲಿ ಬಿಜೆಪಿಗೆ 2-3 ಸಾವಿರ ಲೀಡ್‌ ಬರಬಹುದು. ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಸ್ವಲ್ಪ ಹೆಚ್ಚಿನ ಮತಗಳು ಬಂದರೂ, ಇನ್ನುಳಿದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹೆಚ್ಚಿನ ಅಂತರದ ಮುನ್ನಡೆ ಸಾಧಿಸುತ್ತದೆ. ಇದು ಗೆಲುವಿಗೆ ಪೂರಕವಾಗಲಿದೆ ಎಂಬುದು ಮುಖಂಡರ ಮತಗಣಿತ.ಇನ್ನು ಬಿಜೆಪಿ ಗುಂಪಿನವರು, ದಾಖಲೆಯ ಮತದಾನ ಆಗಿರುವುದು ನಮ್ಮ ಪಕ್ಷಕ್ಕೆ ಹೆಚ್ಚಿನ ಪ್ರಯೋಜನಕಾರಿಯಾಗಿದೆ. ದೇಶಾದ್ಯಂತ ಪ್ರಧಾನಿ ನರೇಂದ್ರ ಅಲೆಯಿದ್ದು ಅದು ಸಹಕಾರಿಯಾಗಲಿದೆ.ಹಿಂದಿನ ಚುನಾವಣೆಗಳಲ್ಲಿ ಉಪ್ಪಾರ ಸಮುದಾಯ ಬಿಜೆಪಿ ಬೆಂಬಲಿಸಿದ್ದೇ ನಾವು ನೋಡಿರಲಿಲ್ಲ. ಆದರೆ ಈ ಬಾರಿ ಅನೇಕ ಮೋಳೆಗಳಲ್ಲಿ ಉಪ್ಪಾರ ಯುವಕರು ಮೋದಿಯವರ ಮುಖ ನೋಡಿ ಬಿಜೆಪಿಗೆ ಓಟು ಹಾಕಿದ್ದಾರೆ ಎಂಬುದು ಸ್ಥಳೀಯ ಬಿಜೆಪಿ ಮುಖಂಡರೊಬ್ಬರ ಅನಿಸಿಕೆ.

ಮತ ಪೂರಕ: ಚಾಮರಾಜನಗರ, ಗುಂಡ್ಲುಪೇಟೆ, ನಂಜನಗೂಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಅತಿ ಹೆಚ್ಚಿನ ಮುನ್ನಡೆ ದೊರಕುತ್ತದೆ. ಕೊಳ್ಳೇಗಾಲದಲ್ಲಿ ಕಾಂಗ್ರೆಸ್‌, ಬಿಎಸ್‌ಪಿಗಿಂತ ಹೆಚ್ಚಿನ ಮತಗಳನ್ನು ಪಡೆಯುತ್ತೇವೆ. ಹನೂರು, ತಿ. ನರಸೀಪುರ, ಹೆಗ್ಗಡದೇವನಕೋಟೆ, ವರುಣಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಮತದಾರರು ಬಿಜೆಪಿಗೆ ಮತ ಹಾಕಿದ್ದಾರೆ ಇದು ನಮಗೆ ಪೂರಕವಾಗಿದೆ ಎನ್ನುತ್ತಾರೆ ಬಿಜೆಪಿ ಮುಖಂಡರು.

ಇಲ್ಲಿಯವರೆಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ದಲಿತರು ಕಾಂಗ್ರೆಸ್‌ ಅನ್ನೂ, ಲಿಂಗಾಯತರು ಬಿಜೆಪಿಯನ್ನೂ ಬೆಂಬಲಿಸುತ್ತಿದ್ದರು. ಬಿಜೆಪಿ ಗೆಲುವಿಗೆ ದಲಿತರ ಮತಗಳು ದೊರಕದಿದ್ದುದೇ ಅಡ್ಡಿಯಾಗಿತ್ತು. ಆದರೆ ಈ ಬಾರಿ ಅಭ್ಯರ್ಥಿ ಶ್ರೀನಿವಾಸಪ್ರಸಾದ್‌ ಅವರ ವರ್ಚಸ್ಸಿನಿಂದಾಗಿ ದಲಿತ ಮತಗಳು ಬಿಜೆಪಿಗೆ ಬರಲಿವೆ. ಹೀಗಾಗಿ ಈ ಬಾರಿ ಬಿಜೆಪಿ ಗೆಲುವು ಖಂಡಿತ ಎಂಬುದು ಅವರ ಅನಿಸಿಕೆ. ಈ ಎಲ್ಲ ಊಹಾಪೋಹ, ಅಂದಾಜುಗಳಿಗೆ ಗುರುವಾರ ತೆರೆ ಬೀಳಲಿದೆ.

● ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.